ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಸ್ಥಿತಿ ಶೋಚನೀಯ: ‘ಬಿ ಪ್ಯಾಕ್’ ವರದಿ ಬಿಡುಗಡೆ

ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ನಗರದ ಸಾರ್ವಜನಿಕ ಶೌಚಾಲಯಗಳ ಸ್ಥಿತಿ ಶೋಚನೀಯವಾಗಿದೆ ಎಂದು ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ(ಬಿ ಪ್ಯಾಕ್) ಸಂಸ್ಥೆಯು ಎಪ್ರಿಲ್, ಮೇ ತಿಂಗಳಲ್ಲಿ ಜಿಬಿಎ ವ್ಯಾಪ್ತಿಯ 142 ಸಾರ್ವಜನಿಕ ಶೌಚಾಲಯಗಳ ಕುರಿತು ಹಲವು ಸಂಘಸಂಸ್ಥೆಗಳ ನೇತೃತ್ವದಲ್ಲಿ ನಡೆಸಿರುವ ಸಮೀಕ್ಷಾ ವರದಿಯಲ್ಲಿ ಬಹಿರಂಗವಾಗಿದೆ.
ಬುಧವಾರ ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವರದಿ ಬಿಡುಗಡೆ ಮಾಡಿ ಮಾತನಾಡಿದ ಬಿಪ್ಯಾಕ್ ಮುಖ್ಯಸ್ಥ ರಾಘವೇಂದ್ರ ಪೂಜಾರಿ, ಸಾರ್ವಜನಿಕ ಶೌಚಾಲಯಗಳ ಕಾರ್ಯನಿರ್ವಹಣೆ, ಸ್ವಚ್ಛತೆ, ಸುರಕ್ಷತೆ, ಪ್ರವೇಶ ಸೌಲಭ್ಯ, ಪಾರದರ್ಶಕತೆ ಮತ್ತು ಸೇವಾ ಗುಣಮಟ್ಟ ಕುರಿತು ಸಮಗ್ರ ಮೌಲ್ಯಮಾಪನ ಮಾಡಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಸಾರ್ವಜನಿಕ ಶೌಚಾಲಯ ಎಷ್ಟರ ಮಟ್ಟಿಗೆ ಸುರಕ್ಷಿತವಾಗಿದೆ. ಯಾವ ಸಮಸ್ಯೆಗಳನ್ನು ಹೇಗೆ ಸರಿಪಡಿಸಬೇಕು ಎಂಬ ಅಂಶಗಳನ್ನು ವರದಿಯಲ್ಲಿ ತಿಳಿಸಲಾಗಿದೆ ಎಂದರು.
ಸಂಯೋಜಕ ಕೆ.ಮಂಜುನಾಥ್, ನವೀನ್ ಅಯ್ಯರ್, ಗಿರಿದಾಸಲು ನಾಯ್ಡು, ಸಚಿನ್, ವೆನಿಲಾ, ಪ್ರಭಾವತಿ, ಪುಟ್ಟಣ್ಣ, ಸತ್ಯಲಕ್ಷ್ಮೀರಾವ್ ಪಾಲ್ಗೊಂಡಿದ್ದರು.




