ಬ್ಯಾಕ್‌ಲಾಗ್ ಹುದ್ದೆ| ಆದ್ಯತೆ ನೀಡಿ ತುರ್ತಾಗಿ ಭರ್ತಿ ಮಾಡಲು ಅಗತ್ಯ ಕ್ರಮ: ಡಾ. ಶಾಲಿನಿ ರಜನೀಶ್

ಬೆಂಗಳೂರು, ಮೇ 28: ಬ್ಯಾಕ್‌ಲಾಗ್ ಹುದ್ದೆಗಳನ್ನು ಆದ್ಯತೆ ನೀಡಿ ತುರ್ತಾಗಿ ಭರ್ತಿ ಮಾಡಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಎಂದು ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.
ಗುರುವಾರ ಈ ಸಂಬಂಧ ಆದೇಶ ಹೊರಡಿಸಿರುವ ಅವರು, 2025ರ ಆಗಸ್ಟ್ 25ರಂದು ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡೆದಿದ್ದು, ಸದರಿ ಸಭೆಯಲ್ಲಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಅನೇಕ ಇಲಾಖೆಗಳು ಸರಕಾರದಿಂದ ನೀಡಲಾಗುವ ನಿರ್ದೇಶನಗಳನ್ನು ಪಾಲಿಸಿಲ್ಲ. ಆ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಾಂಕ್ಷಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಅಂಶ ಗಮನಕ್ಕೆ ಬಂದಿದ್ದು ಬ್ಯಾಕ್ ಲಾಗ್ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡಬೇಕು ಎಂದು ಶಾಲಿನಿ ರಜನೀಶ್ ಸೂಚಿಸಿದ್ದಾರೆ.
Next Story






