Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೆಬ್ಬಾಳದ ಪಶು ವಿವಿ ಆವರಣದಲ್ಲಿ ಮಲ್ಟಿ...

ಹೆಬ್ಬಾಳದ ಪಶು ವಿವಿ ಆವರಣದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ಬೈರತಿ ಸುರೇಶ್

ವಾರ್ತಾಭಾರತಿವಾರ್ತಾಭಾರತಿ1 Sept 2025 8:13 PM IST
share
ಹೆಬ್ಬಾಳದ ಪಶು ವಿವಿ ಆವರಣದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ಬೈರತಿ ಸುರೇಶ್

ಬೆಂಗಳೂರು, ಸೆ.1: ಹೆಬ್ಬಾಳ ಕ್ಷೇತ್ರದ ನಾಗರಿಕರಿಗಾಗಿ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಆವರಣದಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಸಂಬಂಧ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸೋಮವಾರ ಆಸ್ಪತ್ರೆಗೆ ನಿಗದಿಪಡಿಸುವ ಜಾಗದ ಪರಿಶೀಲನೆ ನಡೆಸಿದರು.

ಹಲವು ದಶಕಗಳಿಂದಲೂ ಕ್ಷೇತ್ರಕ್ಕೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಬೇಡಿಕೆ ಹೆಬ್ಬಾಳದ ನಾಗರಿಕರದ್ದಾಗಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಿ ಸಭೆಗಳನ್ನೂ ನಡೆಸಲಾಗಿತ್ತು. ಕ್ಷೇತ್ರದ ಅಗತ್ಯತೆಯನ್ನು ಮನಗಂಡ ಮುಖ್ಯಮಂತ್ರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಕ್ಷೇತ್ರದ ಪ್ರತಿಯೊಬ್ಬ ಬಡ ಜನರಿಗೆ ಸುಲಭ ಮತ್ತು ಉಚಿತವಾಗಿ ಚಿಕಿತ್ಸೆಗಳು ದೊರೆಯಬೇಕೆಂಬುದು ಸರಕಾರದ ಆಶಯವಾಗಿದೆ. ಇಲ್ಲಿನ ಜನರು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ, ಜಯದೇವದಂತಹ ದೂರವಿರುವ ಹಲವಾರು ಸರಕಾರಿ ಆಸ್ಪತ್ರೆಗಳಿಗೆ ಹೋಗಬೇಕಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ಷೇತ್ರಕ್ಕೊಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ಶೀಘ್ರದಲ್ಲೇ ಶಿಲಾನ್ಯಾಸ: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಆವರಣದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಸುತ್ತಮುತ್ತಲಿನ ಎಲ್ಲ ವರ್ಗದ ಜನರಿಗೆ ಈ ಜಾಗ ಹತ್ತಿರವಾಗಲಿದೆ. ಈ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸದ್ಯದಲ್ಲೆ ಶಿಲಾನ್ಯಾಸ ನೆರವೇರಲಿದ್ದು, ಹಂತಹಂತವಾಗಿ ಆಸ್ಪತ್ರೆ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಬೈರತಿ ಸುರೇಶ್ ಹೇಳಿದರು.

ಅತ್ಯುತ್ತಮ ಗುಣಮಟ್ಟದಲ್ಲಿ ಆಸ್ಪತ್ರೆ ಕಟ್ಟಡವನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಯಾವುದೇ ಲೋಪವಾಗದ ರೀತಿಯಲ್ಲಿ ಕಾಮಗಾರಿಯನ್ನು ಕೈಗೊಂಡು ರಾಜ್ಯದಲ್ಲಿ ಅತ್ಯುತ್ತಮ ಮತ್ತು ಅತ್ಯತ್ಕøಷ್ಠ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಏನೆಲ್ಲಾ ಸೌಲಭ್ಯ?: ಈ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ಯಂತ್ರೋಪಕರಣಗಳು, ಡಯಾಲಿಸಿಸ್, ಹೃದ್ರೋಗ, ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ, ತಜ್ಞ ವೈದ್ಯರು ಮತ್ತು ಶುಶ್ರೂಕರ ತಂಡ ಸೇರಿದಂತೆ ಹತ್ತು ಹಲವಾರು ಚಿಕಿತ್ಸಾ ಸೌಲಭ್ಯಗಳು ಕ್ಷೇತ್ರದ ಜನತೆಗೆ ದೊರೆಯಲಿವೆ ಎಂದು ಸುರೇಶ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X