Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು : ಆ.8 ರಿಂದ ಗ್ರೀನ್...

ಬೆಂಗಳೂರು : ಆ.8 ರಿಂದ ಗ್ರೀನ್ ಪಾತ್‌ನಲ್ಲಿ 3 ದಿನಗಳ ಯುವಸಂತೆ

ವಾರ್ತಾಭಾರತಿವಾರ್ತಾಭಾರತಿ7 Aug 2025 1:33 PM IST
share
ಬೆಂಗಳೂರು : ಆ.8 ರಿಂದ ಗ್ರೀನ್ ಪಾತ್‌ನಲ್ಲಿ 3 ದಿನಗಳ ಯುವಸಂತೆ

ಬೆಂಗಳೂರು: ಸಂವಾದ - ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್ ಸಂಸ್ಥೆಯು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ದಿ ಗ್ರೀನ್ ಪಾತ್ ಆರ್ಗ್ಯಾನಿಕ್ ರೆಸ್ಟೋರಂಟ್ ಸಹಯೋಗದಲ್ಲಿ ಮೂರು ದಿನಗಳ ‘ಯುವಸಂತೆ’ಯನ್ನು ಆಯೋಜಿಸಲಾಗಿದೆ.

ಆಗಸ್ಟ್ 8, ಶುಕ್ರವಾರ, ಸಂಜೆ 4 ಗಂಟೆಗೆ ಹಿರಿಯ ಸಾಹಿತಿ ಎಸ್. ಜಿ. ಸಿದ್ದರಾಮಯ್ಯ ಅವರು 'ಯುವ ಸಂತೆ' ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಆಗಸ್ಟ್ 8ರಿಂದ 10ರವರೆಗೆ ‘ಯುವ ಸಂತೆ - ವಿಶಮುಕ್ತ ಆಹಾರದಿಂದ ಸ್ವಾತಂತ್ರ್ಯ' ಎನ್ನುವ ವಿಷಯದಡಿ ಪರಿಸರಕ್ಕೆ ಪೂರಕವಾದ ಮತ್ತು ವಿಷಮುಕ್ತ ಆಹಾರೋತ್ಪಾದನೆ ಮತ್ತು ಉದ್ಯಮದಲ್ಲಿ ತೊಡಗಿರುವ, ಸಂವಾದ ಬದುಕು ಸಂಸ್ಥೆಯಲ್ಲಿ ತರಬೇತಿ ಪಡೆದ ಯುವಜನರು 'ಗ್ರೀನ್ ಪಾತ್ ಆರ್ಗಾನಿಕ್ ರೆಸ್ಟೋರೆಂಟ್'ನಲ್ಲಿ ಮಳಿಗೆಗಳನ್ನು ತೆರೆಯಲಿದ್ದಾರೆ.

ಈ ಮಳಿಗೆಗಳಲ್ಲಿ ಪರಿಸರ ಸ್ನೇಹಿ ಜೀವನಶೈಲಿಯ ಉತ್ಪನ್ನಗಳು, ಕರಕುಶಲ ಉತ್ಪನ್ನಗಳು, ವಿಶಮುಕ್ತ ಆಹಾರ ಪದಾರ್ಥಗಳು, ಗೃಹೋತ್ಪನ್ನ ಮನೆ ಬಳಕೆಯ ವಸ್ತುಗಳು ಮಾರಾಟವಾಗಲಿವೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಭುವನೇಶ್ವರಿ (ಮುಖ್ಯಸ್ಥರು, ಒಡಲದನಿ ಮಹಿಳಾ ಒಕ್ಕೂಟ), ಜನಪ್ರಿಯ ಗಾಯಕ ವಾಸು ದೀಕ್ಷಿತ್, ಗ್ರೀನ್ ಪಾತ್ ಸಂಸ್ಥಾಪಕ ಎಚ್. ಆರ್. ಜಯರಾಮ್ ಮತ್ತು ಸಂವಾದ ಸಹ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಸವಿತಾ ಸುರೇಶ್ ಬಾಬು ಪಾಲ್ಗೊಳ್ಳಲಿದ್ದಾರೆ. ಬೇರು ಬೆವರು ಕಲಾ ಬಳಗದಿಂದ ‘ಹಸಿರು ಪದ’ ಮತ್ತು ಮೇಘನಾ ಅವರಿಂದ ‘ಅರಿವಿನ ಹಾಡುಗಳು’ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಹಸಿರು ಚಿತ್ರಕಲಾ ಸ್ಪರ್ಧೆ

ಆಗಸ್ಟ್ 9, ಶನಿವಾರ, ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ 'ಹಸಿರು ಚಿತ್ರಕಲಾ ಸ್ಪರ್ಧೆ' ಆಯೋಜಿಸಲಾಗಿದೆ. ‘ನಾವು ಮತ್ತು ಪರಿಸರ’, ‘ಸುಸ್ಥಿರ ಪರಿಸರ - ನಮ್ಮ ಜವಾಬ್ದಾರಿ’ ಎಂಬ ವಿಷಯಗಳಲ್ಲಿ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಎರಡು ವಿಭಾಗಗಳಿದ್ದು, 5 ರಿಂದ 14 ವರ್ಷದ ಮಕ್ಕಳಿಗೆ ಒಂದು ವಿಭಾಗ ಮತ್ತು 15 ರಿಂದ 22 ವರ್ಷದ ಯುವಜನರಿಗೆ ಮತ್ತೊಂದು ವಿಭಾಗವಿದೆ.

ಚಿತ್ರಕಲೆಗೆ ಬೇಕಾದ ಸಾಮಗ್ರಿಗಳನ್ನು ಸ್ಪರ್ಧಾರ್ಥಿಗಳೇ ತರಬೇಕು. ಸಾಧ್ಯವಾದಷ್ಟೂ ಪರಿಸರಸ್ನೇಹಿ ಬಣ್ಣಗಳನ್ನೇ ತರಲು ಮನವಿ ಮಾಡಲಾಗಿದೆ. ವಿಜೇತರಿಗೆ ಆಗಸ್ಟ್ 10, ಭಾನುವಾರದಂದು ಬಹುಮಾನ ವಿತರಣೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 73378 35677 ಯನ್ನು ಸಂಪರ್ಕಿಸಲು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X