ಬೆಂಗಳೂರು | ಒಂದೇ ದಿನವೇ 87 ಮಂದಿ ಕೋವಿಡ್ ಸೋಂಕು ದೃಢ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಮವಾರದಂದು ಹೊಸದಾಗಿ 87 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. 29 ಮಂದಿ ಕೋವಿಡ್ ಸೋಂಕು ಮುಕ್ತರಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 311 ಇದ್ದು, 297 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದಾರೆ. 14 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಒಂದೇ ದಿನ 504 ಮಂದಿಗೆ ಕೋವಿಡ್ ಟೆಸ್ಟ್ಗಳನ್ನು ಮಾಡಲಾಗಿದೆ. ಕೋವಿಡ್ ಪಾಸಿಟೀವ್ ರೇಟ್ ಶೇ.17.2ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Next Story





