Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಅಪ್ರಾಪ್ತ ಮಗನ ಮೂಲಕ...

ಬೆಂಗಳೂರು | ಅಪ್ರಾಪ್ತ ಮಗನ ಮೂಲಕ ಸರಗಳ್ಳತನ ಮಾಡಿಸುತ್ತಿದ್ದ ಆರೋಪ : ತಾಯಿ ಬಂಧನ

ವಾರ್ತಾಭಾರತಿವಾರ್ತಾಭಾರತಿ6 April 2024 10:59 PM IST
share
ಬೆಂಗಳೂರು | ಅಪ್ರಾಪ್ತ ಮಗನ ಮೂಲಕ ಸರಗಳ್ಳತನ ಮಾಡಿಸುತ್ತಿದ್ದ ಆರೋಪ : ತಾಯಿ ಬಂಧನ

ಬೆಂಗಳೂರು : ಅಪ್ರಾಪ್ತ ವಯಸ್ಸಿನ ಮಗ ಹಾಗೂ ಆತನ ಸ್ನೇಹಿತನ ಮೂಲಕ ಸರಗಳ್ಳತನ ಮಾಡಿಸುತ್ತಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಇಲ್ಲಿನ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಚಿಂತಾಮಣಿ ಮೂಲದ ರೋಜಾ(32) ಬಂಧಿತೆ ಎಂದು ಗುರುತಿಸಲಾಗಿದೆ. ಈಕೆಯಿಂದ 5 ಲಕ್ಷ ರೂ. ಮೌಲ್ಯದ 103 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದು ಬಾಲಮಂದಿರದ ಸುಪರ್ದಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಮಾತನಾಡಿ, ಮಾ.15ರಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿತ್ತು. ನಿರ್ಮಲಾ ಎಂಬ ಮಹಿಳೆಯ 45 ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ತಾಯಿ ಮತ್ತು ಮಗ ಸೇರಿ ಕೃತ್ಯ ಎಸಗಿರುವುದು ಕಂಡುಬಂತು. ಈ ಸಂಬಂಧ ಚಿಂತಾಮಣಿ ಮೂಲದ ರೋಜಾ ಎಂಬ ಆರೋಪಿತೆಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಆರೋಪಿಯನ್ನು ವಿಚಾರಣೆ ನಡೆಸಿದಾಗ, ಆಕೆಯ ಅಪ್ರಾಪ್ತ ಮಗ ಮತ್ತು ಆತನ ಅಪ್ರಾಪ್ತ ಸ್ನೇಹಿತ ಸರಗಳ್ಳತನ ಕೃತ್ಯದಲ್ಲಿ ಭಾಗಿಯಾಗುತ್ತಿದ್ದರು ಎಂಬ ವಿಷಯ ತಿಳಿದು ಬಂದಿದೆ. ರಾಮನಗರ, ಬ್ಯಾಡರಹಳ್ಳಿ ಮತ್ತು ಅನ್ನಪೂರ್ಣೇಶ್ವರಿ ನಗರ ಸೇರಿದಂತೆ ಇತರೆಡೆ ಸರಗಳ್ಳತನ ಮಾಡಿರುವುದು ಕಂಡು ಬಂದಿದೆ.

ತಾಯಿ ಮತ್ತು ಮಗ ಹಾಗೂ ಆತನ ಸ್ನೇಹಿತ ಚಿಂತಾಮಣಿಯಲ್ಲಿ ವಾಸವಾಗಿರುತ್ತಾರೆ. ಬೆಳಗ್ಗೆ ಮೂರು ಗಂಟೆಗೆ ಬೆಂಗಳೂರಿಗೆ ಬಂದು, ಬೆಂಗಳೂರು ಹೊರ ವಲಯದ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಎರಡು ಗಂಟೆ ವಿಶ್ರಾಂತಿ ಪಡೆದು ಬಳಿಕ ತಾಯಿ, ಮೊದಲು ಮಹಿಳೆಯರು ಯಾವ ರಸ್ತೆಯಲ್ಲಿ ಹೆಚ್ಚಾಗಿ ಓಡಾಡುತ್ತಾರೆ ಎಂಬ ಮಾಹಿತಿಯನ್ನು ಮಗನಿಗೆ ಕೊಡುತ್ತಿದ್ದಳು. ನಂತರ ಮಗ ಮತ್ತು ಆತನ ಸ್ನೇಹಿತ ಬೈಕ್‍ನಲ್ಲಿ ತೆರಳಿ ಸರಗಳ್ಳತನ ಮಾಡುತ್ತಿದ್ದರು ಎಂದು ಡಿಸಿಪಿ ಗಿರೀಶ್ ವಿವರಿಸಿದರು.

ಕೃತ್ಯವೆಸಗಿದ ಬಳಿಕ ಚಿನ್ನಾಭರಣವನ್ನು ರೋಜಾಗೆ ನೀಡುತ್ತಿದ್ದರು. ರೋಜಾ ಇವುಗಳನ್ನು ಗಿರವಿ ಇಟ್ಟು ಹಣ ಪಡೆಯುತ್ತಿದ್ದಳು. ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರು ಬ್ಯಾಡರಹಳ್ಳಿ, ಕೆಂಗೇರಿ, ಮಾದನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಸರಗಳ್ಳತನ, ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳ ಬಂಧನದಿಂದ ಪಶ್ಚಿಮ ವಿಭಾಗದ ಅನ್ನಪೂರ್ಣೇಶ್ವರಿ ನಗರ, ಆರ್.ಆರ್. ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಐದು ಸರಗಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X