Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು| ಪ್ರಯಾಣಿಕನ ಮೇಲೆ ಹಲ್ಲೆ...

ಬೆಂಗಳೂರು| ಪ್ರಯಾಣಿಕನ ಮೇಲೆ ಹಲ್ಲೆ ಆರೋಪ: ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್, ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ25 Dec 2023 10:07 PM IST
share
ಬೆಂಗಳೂರು| ಪ್ರಯಾಣಿಕನ ಮೇಲೆ ಹಲ್ಲೆ ಆರೋಪ: ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್, ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಟಿಕೆಟ್ ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ತೆರಳಿದ್ದ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಕೆಎಸ್ಸಾರ್ಟಿಸಿ ಡಿಪೋ ವ್ಯವಸ್ಥಾಪಕ ಹಾಗೂ ಭದ್ರತಾ ಸಿಬ್ಬಂದಿ ವಿರುದ್ಧ ಇಲ್ಲಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದು ವರದಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ವ್ಯಾಪಾರಿ ಜಿ.ರಾಘವೇಂದ್ರ ಎಂಬುವರು ನೀಡಿರುವ ದೂರಿನನ್ವಯ ಕೆಎಸ್ಸಾರ್ಟಿಸಿ ಟರ್ಮಿನಲ್ 2 ಡಿಪೋ ವ್ಯವಸ್ಥಾಪಕ ಮತ್ತು ಭದ್ರತಾ ಸಿಬ್ಬಂದಿ ಸತೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿ.23ರಂದು ರಾತ್ರಿ 12.15ರ ಸುಮಾರಿಗೆ ಬೆಂಗಳೂರಿನಿಂದ ಹಿರಿಯೂರಿಗೆ ಹೊರಟಿದ್ದ ರಾಘವೇಂದ್ರ, ಕೆಎಸ್ಸಾರ್ಟಿಸಿ 2ನೇ ಟರ್ಮಿನಲ್ ಗೆ ಬಂದಿದ್ದರು. ಬಳಿಕ ಬೆಂಗಳೂರು ಹರಿಹರ ಮಾರ್ಗದ ಬಸ್ ಹತ್ತಿ ಹಿರಿಯೂರಿಗೆ ಟಿಕೆಟ್ ನೀಡುವಂತೆ ನಿರ್ವಾಹಕನನ್ನು ಕೇಳಿದ್ದರು. ಆದರೆ, ‘ಬಸ್ ಹಿರಿಯೂರಿನ ಒಳಗೆ ಹೋಗುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಮೂಲಕ ಹೋಗುತ್ತದೆ. ಬೈಪಾಸ್ ಬಳಿ ನಿಲ್ಲಿಸುತ್ತೇವೆ' ಎಂದು ನಿರ್ವಾಹಕ ತಿಳಿಸಿದ್ದ. ಈ ವೇಳೆ ‘ಹಿರಿಯೂರಿಗೆ ಟಿಕೆಟ್ ನೀಡಿ, ಬೈಪಾಸ್ ಬಳಿಯೇ ನಾನು ಇಳಿದುಕೊಳ್ಳುತ್ತೇನೆ' ಎಂದು ರಾಘವೇಂದ್ರ ತಿಳಿಸಿದ್ದರು.

ಅದಕ್ಕೆ, ‘ಚಿತ್ರದುರ್ಗದ ಟಿಕೆಟ್ ಪಡೆದರೆ ಮಾತ್ರ, ಹಿರಿಯೂರಿನಲ್ಲಿ ಇಳಿಸುತ್ತೇನೆ' ಎಂಬುದಾಗಿ ನಿರ್ವಾಹಕ ಹೇಳಿದ್ದ. ‘ಹಿರಿಯೂರು ಬದಲು ಚಿತ್ರದುರ್ಗಕ್ಕೆ ಏಕೆ ಟಿಕೆಟ್ ತೆಗೆದುಕೊಳ್ಳಬೇಕು' ಎಂದು ರಾಘವೇಂದ್ರ ಪ್ರಶ್ನಿಸಿದಾಗ, ನಿರ್ವಾಹಕ ಅವರನ್ನು ಬಸ್‌ ನಿಂದ ಇಳಿಸಿದ್ದ. ತಕ್ಷಣ ಡಿಪೋ ವ್ಯವಸ್ಥಾಪಕರ ಬಳಿ ತೆರಳಿದ್ದ ರಾಘವೇಂದ್ರ, ಟಿಕೆಟ್ ವಿಚಾರವನ್ನು ಪ್ರಶ್ನಿಸಿದ್ದಾರೆ. ‘ಹರಿಹರ ಅಥವಾ ಚಿತ್ರದುರ್ಗಕ್ಕೆ ಮಾತ್ರ ಟಿಕೆಟ್ ಪಡೆಯಬೇಕು' ಎಂದು ಡಿಪೋ ವ್ಯವಸ್ಥಾಪಕ ತಿಳಿಸಿದ್ದರು.

ಈ ವೇಳೆ ವ್ಯವಸ್ಥಾಪಕರ ಹೇಳಿಕೆಯನ್ನು ರಾಘವೇಂದ್ರ ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಸತೀಶ್, ರಾಘವೇಂದ್ರ ಅವರಿಗೆ ಲಾಠಿಯಿಂದ ಹೊಡೆದು, ಕಾಲಿನಿಂದ ಎದೆಗೆ ಒದ್ದು ಎಳೆದಾಡಿ ಹಲ್ಲೆ ಮಾಡಿದ್ದಲ್ಲದೇ, ಮೊಬೈಲ್ ಸಹ ಕಸಿದುಕೊಂಡಿದ್ದ. ಸತೀಶ್ ಹಾಗೂ ವ್ಯವಸ್ಥಾಪಕ ಇಬ್ಬರು ಸೇರಿ ರಾಘವೇಂದ್ರ ಅವರನ್ನು ಎಳೆದಾಡಿ ಕೊಠಡಿಯೊಳಗೆ ತಳ್ಳಿದ್ದಾರೆ. ಬಳಿಕ ‘ನಾನು ಹಿರಿಯೂರಿನವನೇ. ಅಲ್ಲಿ ನನ್ನ ಅಣ್ಣ ರೌಡಿಶೀಟರ್ ಇದ್ದಾನೆ. ನಿನ್ನನ್ನು ಕೊಲೆ ಮಾಡಿಸುತ್ತೇನೆ' ಎಂದು ಸತೀಶ್ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ರಾಘವೇಂದ್ರ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X