ಬೆಂಗಳೂರು | ಕಾಂಗ್ರೆಸ್ ಮುಖಂಡನ ಹತ್ಯೆ

ಹೈದರ್ ಅಲಿ ಮೃತ ವ್ಯಕ್ತಿ
ಬೆಂಗಳೂರು : ಕಾಂಗ್ರೆಸ್ ಮುಖಂಡನೊರ್ವನನ್ನು ಹತ್ಯೆ ಮಾಡಿರುವ ಘಟನೆ ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆಗೆ ನಡೆದಿದೆ.
ಹೈದರ್ ಅಲಿ ಹತ್ಯೆಯಾದ ಕಾಂಗ್ರೆಸ್ ಮುಖಂಡ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಮುಖಂಡ ಹೈದರ್ ಅಲಿ ರಾತ್ರಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹೈದರ್ ಅಲಿಯ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಅಶೋಕ ನಗರ ಠಾಣೆ ಪೊಲೀಸರು ಹೈದರ್ ಅಲಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಹೈದರ್ ಅಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





