Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಪಿಜಿಯಲ್ಲಿದ್ದ 24...

ಬೆಂಗಳೂರು | ಪಿಜಿಯಲ್ಲಿದ್ದ 24 ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಬಿ.ಟೆಕ್ ಪದವೀಧರೆ ಬಂಧನ

ವಾರ್ತಾಭಾರತಿವಾರ್ತಾಭಾರತಿ26 March 2024 8:32 PM IST
share
ಬೆಂಗಳೂರು | ಪಿಜಿಯಲ್ಲಿದ್ದ 24 ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಬಿ.ಟೆಕ್ ಪದವೀಧರೆ ಬಂಧನ

ಬೆಂಗಳೂರು: ಪಿಜಿಗಳಲ್ಲಿ ಲ್ಯಾಪ್‍ಟಾಪ್ ಕಳ್ಳತನ ಮಾಡುತ್ತಿದ್ದ ಬಿ.ಟೆಕ್ ಪದವೀಧರೆಯನ್ನು ಇಲ್ಲಿನ ಎಚ್‍ಎಎಲ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ರಾಜಸ್ಥಾನದ ಮೂಲದ ಜಸು ಅಗರ್ವಾಲ್(29) ಎಂಬಾಕೆಯನ್ನು ಬಂಧಿತ ಆರೋಪಿತೆ ಎಂದು ಗುರುತಿಸಲಾಗಿದ್ದು, ಈಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್‍ಟಾಪ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬಿ.ಟೆಕ್ ಪದವೀಧರೆಯಾಗಿರುವ ಜಸು ಅಗರ್ವಾಲ್, ಈ ಹಿಂದೆ ನೋಯ್ಡಾದ ಖಾಸಗಿ ಬ್ಯಾಂಕ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಕಡಿಮೆ ಸಂಬಳ ಹಿನ್ನೆಲೆ ಕೆಲಸ ತೊರೆದಿದ್ದ ಆಕೆ ಬೆಂಗಳೂರಿಗೆ ಬಂದು ವಿವಿಧ ಕಂಪೆನಿಗಳಲ್ಲಿ ಸಂದರ್ಶನ ಎದುರಿಸಿದ್ದರೂ ಕೆಲಸ ಸಿಕ್ಕಿರಲಿಲ್ಲ.

ಸಾಫ್ಟ್ ವೇರ್ ಕಂಪೆನಿಗಳಿರುವ ಸಮೀಪದ ಬೆಳ್ಳಂದೂರು, ಸಿಲ್ಕ್ ಬೋರ್ಡ್, ಹೆಬ್ಬಾಳ, ವೈಟ್‍ಫೀಲ್ಟ್ ಹಾಗೂ ಮಹದೇವಪುರ ಸುತ್ತಮುತ್ತಲಿನ ಪಿಜಿ ಹಾಗೂ ಹೊಟೇಲ್‍ಗಳಲ್ಲಿ ಜಸು ಅಗರ್ವಾಲ್ ವಾಸ್ತವ್ಯ ಹೂಡಿದ್ದಳು. ಇಲ್ಲಿನ ಪಿಜಿಗಳಲ್ಲಿ ಉಳಿದುಕೊಂಡವರ ಪೈಕಿ ಬಹುತೇಕರು ಸಾಫ್ಟ್‍ವೇರ್ ಇಂಜಿನಿಯರ್ ಆಗಿದ್ದರಿಂದ ಲ್ಯಾಪ್‍ಟಾಪ್ ಬಳಸುತ್ತಿದ್ದರು. ಇದನ್ನ ಗಮನಿಸಿ ಲ್ಯಾಪ್‍ಟಾಪ್ ಕದಿಯಲು ನಿರ್ಧರಿಸಿದ್ದಳು.

ಪಿಜಿಯಲ್ಲಿ ಊಟ ಮಾಡುವ ಸಮಯದಲ್ಲಿ ರೂಮ್‍ಗಳಿಗೆ ತೆರಳಿ ಲ್ಯಾಪ್‍ಟಾಪ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಳು. ವಿದ್ಯಾವಂತೆಯಾಗಿದ್ದರಿಂದ ಲ್ಯಾಪ್‍ಟಾಪ್‍ನಲ್ಲಿ ಪಾಸ್ ವರ್ಡ್ ಗಳನ್ನು ಬದಲಾಯಿಸಿ ಮಾರತ್ತಹಳ್ಳಿ, ಯಲಹಂಕ ಹಾಗೂ ಆರ್.ಟಿ.ನಗರದಲ್ಲಿರುವ ಲ್ಯಾಪ್‍ಟಾಪ್ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಳು. ಒಂದು ಲ್ಯಾಪ್ ಟಾಪ್ ಸುಮಾರು 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದಳು.

ಇತ್ತೀಚೆಗೆ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಲ್ಯಾಪ್‍ಟಾಪ್, ಚಾರ್ಜರ್ ಮೌಸ್ ಸಮೇತ ಕಳ್ಳತನ ಸಂಬಂಧ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿತೆಯನ್ನು ಹುಣಸಮಾರನಹಳ್ಳಿ ಬಳಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿತೆ ಬಂಧನದಿಂದ ಕೋರಮಂಗಲ, ಇಂದಿರಾನಗರ ಹಾಗೂ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿದ್ದ 4 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

Tags

BangaloreB.Tech graduatelaptopsPG
share
ವಾರ್ತಾಭಾರತಿ
ವಾರ್ತಾಭಾರತಿ
Next Story
X