Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಕ್ರಿಕೆಟ್‍ನಲ್ಲಿ ಅವಕಾಶ...

ಬೆಂಗಳೂರು | ಕ್ರಿಕೆಟ್‍ನಲ್ಲಿ ಅವಕಾಶ ಕೊಡಿಸುನ ನೆಪದಲ್ಲಿ ವಂಚನೆ ಆರೋಪ: ಮಾಜಿ ಆಟಗಾರನ ವಿರುದ್ಧ ಎಫ್‍ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ26 Feb 2024 7:03 PM IST
share
ಬೆಂಗಳೂರು | ಕ್ರಿಕೆಟ್‍ನಲ್ಲಿ ಅವಕಾಶ ಕೊಡಿಸುನ ನೆಪದಲ್ಲಿ ವಂಚನೆ ಆರೋಪ: ಮಾಜಿ ಆಟಗಾರನ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು: ಕ್ರಿಕೆಟ್ ಟೂರ್ನಿಗಳಲ್ಲಿ ಆಡುವ ಅವಕಾಶ, ತರಬೇತಿ ಮತ್ತು ಅಗತ್ಯ ಸಾಮಗ್ರಿಗಳನ್ನು ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದಡಿ ಭಾರತದ ಅಂಡರ್-19, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳನ್ನು ಪ್ರತಿನಿಧಿಸಿದ್ದ ಮಾಜಿ ಆಟಗಾರ ಗೌರವ್ ಧಿಮಾನ್ ವಿರುದ್ಧ ಎಫ್‍ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

23 ವರ್ಷದ ಯುವ ಕ್ರಿಕೆಟಿಗನಿಗೆ 12.23 ಲಕ್ಷ ರೂ. ವಂಚಿಸಿರುವ ಆರೋಪ ಕೇಳಿ ಬಂದಿದ್ದು, ಆತನ ತಂದೆ ನೀಡಿದ ದೂರಿನ ಅನ್ವಯ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪರ ಆಡುತ್ತಿರುವ ಯುವ ಕ್ರಿಕೆಟಿಗನೊಬ್ಬ 2022-23ರಲ್ಲಿ ಗಾಂಧಿನಗರದ ಸಿಎಂಎಸ್ ಬ್ಯುಸಿನೆಸ್ ಸ್ಕೂಲ್‍ನಲ್ಲಿರುವ ರೋರ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಈ ಸಮಯದಲ್ಲಿ ಅಕಾಡೆಮಿಯ ಕೋಚ್ ಆಗಿದ್ದ ಗೌರವ್ ಧಿಮಾನ್, ‘ಕೆಎಸ್‍ಸಿಎಯ ಮುಂದಿನ ಕೆಲವು ಟೂರ್ನಿಗಳಿಗೆ ಆರಂಭಿಕ ಆಟಗಾರನಾಗಿ ಅವಕಾಶ ಕೊಡಿಸುವುದಾಗಿ' ನಂಬಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೇ, ಆತನ ತಂದೆಯನ್ನು ಭೇಟಿಯಾಗಿ ‘ಉತ್ತಮ ತರಬೇತಿ ಹಾಗೂ ಬ್ಯಾಟ್‍ಗಳನ್ನು ಕೊಡಿಸುತ್ತೇನೆ. ಇದಕ್ಕಾಗಿ ಪ್ರಸ್ತುತ ಆಡುತ್ತಿರುವ ಕ್ಲಬ್ ಪರ ಆಡಬಾರದು' ಎಂದಿದ್ದಾರೆ. ನಂತರ ಬ್ಯಾಟ್ ಮತ್ತಿತರ ಕ್ರಿಕೆಟ್ ಸಾಮಗ್ರಿ ಕೊಡಿಸುವುದಾಗಿ ಹಂತ-ಹಂತವಾಗಿ 12.23 ಲಕ್ಷ ರೂ. ಪಡೆದುಕೊಂಡಿದ್ದಾರೆ. ಆದರೆ, ಯಾವುದೇ ಟೂರ್ನಿಗಳಲ್ಲಿ ಅವಕಾಶ ಕೊಡಿಸದೇ ವಂಚಿಸಿದ್ದಾರೆ ಎಂದು ದೂರಲಾಗಿದೆ.

ವಂಚನೆಗೊಳಗಾದ ಯುವ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನು ತಿಳಿದ ಆರೋಪಿಯ ತಂದೆ, ತಮ್ಮನ್ನು ಭೇಟಿಯಾಗಿ ‘ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ' ಎಂದು ಭರವಸೆ ನೀಡಿ, ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಆರೋಪಿ ಗೌರವ್ ಧಿಮಾನ್ ವಿದೇಶದಿಂದ ಮರಳಿದ ಬಳಿಕ ಭೇಟಿಯಾಗಿ ಹಣ ವಾಪಸ್ ಕೇಳಿದಾಗ, ‘ನಿನ್ನ ಮಗನ ಭವಿಷ್ಯ ಹಾಳು ಮಾಡುತ್ತೇನೆ, ನನಗೆ ರೌಡಿಗಳ ಸಂಪರ್ಕವಿದೆ. ನಿನ್ನ ಮಗನನ್ನು ಅಪಘಾತ ಮಾಡಿಸಿ ಕೊಲೆ ಮಾಡಿಸುತ್ತೇನೆ' ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಹಾಗೂ ‘ತನ್ನ ತಂದೆ ನಿವೃತ್ತ ಕರ್ನಲ್ ಆಗಿದ್ದು, ಅವರಿಗೆ ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಪರಿಚಯವಿದೆ. ನೀವು ಏನೂ ಮಾಡಲು ಸಾಧ್ಯವಿಲ್ಲ' ಎಂದು ಬೆದರಿಕೆ ಹಾಕಿದ್ದಾರೆ ಎಂದು ಕ್ರಿಕೆಟಿಗನ ತಂದೆ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.

ನ್ಯಾಯಾಲಯದಿಂದ ಬಂದ ಆದೇಶದ ಅನುಸಾರ ಸದ್ಯ ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X