Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಮ್ಯಾಟ್ರಿಮೋನಿ ವೆಬ್‍ಸೈಟ್‍...

ಬೆಂಗಳೂರು | ಮ್ಯಾಟ್ರಿಮೋನಿ ವೆಬ್‍ಸೈಟ್‍ ಗಳಲ್ಲಿ ನಕಲಿ ಪ್ರೊಫೈಲ್ ರಚಿಸಿ ವಂಚನೆ : ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ11 April 2024 8:53 PM IST
share
ಬೆಂಗಳೂರು | ಮ್ಯಾಟ್ರಿಮೋನಿ ವೆಬ್‍ಸೈಟ್‍ ಗಳಲ್ಲಿ ನಕಲಿ ಪ್ರೊಫೈಲ್ ರಚಿಸಿ ವಂಚನೆ : ಆರೋಪಿ ಬಂಧನ

ಬೆಂಗಳೂರು : ವೈವಾಹಿಕ ಸಂಬಂಧಕ್ಕೆ ವೇದಿಕೆಯಾಗಿರುವ ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳ ಮೂಲಕ ನಕಲಿ ಪ್ರೊಫೈಲ್ ರಚಿಸಿ ಯುವತಿಯರನ್ನು ಪರಿಚಯಿಸಿಕೊಂಡು ಮದುವೆ ಮಾಡಿಕೊಳ್ಳುತ್ತೇನೆ ಎಂದು ವಂಚಿಸುತ್ತಿದ್ದ ಆರೋಪಿಯನ್ನು ಜೆ.ಪಿ.ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದು ವರದಿಯಾಗಿದೆ.

ಬಂಧಿತ ಆರೋಪಿಯನ್ನು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರು ಮೂಲದ ದೀಪಕ್ (42) ಎಂದು ಗುರುತಿಸಲಾಗಿದೆ. ಬಿಎಸ್‍ಸಿ ಓದಿರುವ ದೀಪಕ್, ಈ ಹಿಂದೆ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಉದ್ಯೋಗ ಆಕಾಂಕ್ಷಿಗಳಳಿಂದ ಹಣ ಪಡೆದು ವಂಚಿಸುತ್ತಿದ್ದನು ಎನ್ನಲಾಗಿದೆ.

ಇದೇ ರೀತಿ ವಿಧವೆ ಅಥವಾ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಫೇಸ್‍ಬುಕ್‍ನಲ್ಲಿ ನಕಲಿ ಪೇಜ್ ತೆರೆದು ಅಪರಿಚಿತರ ಫೋಟೊ ಬಳಸಿಕೊಂಡು ತಾನೇ ಎಂದು ಬಿಂಬಿಸಿಕೊಳ್ಳುತ್ತಿದ್ದ. ನಂತರ ಮದುವೆ ಮಾಡಿಕೊಳ್ಳುವುದಾಗಿ ಮಹಿಳೆಯರನ್ನು ನಂಬಿಸಿ ವಂಚಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಮಹಿಳೆ ಜೆ.ಪಿ.ನಗರದ 1ನೇ ಹಂತದಲ್ಲಿ ಸುಮಾರು 20 ವರ್ಷಗಳಿಂದ ತಾಯಿಯೊಂದಿಗೆ ವಾಸವಾಗಿದ್ದು, ಕಳೆದ ಫೆಬ್ರವರಿಯಲ್ಲಿ ವಿವಾಹ ಮಾಡಿಕೊಳ್ಳಲು ವರ ಹುಡುಕುತ್ತಿದ್ದರು. ಇದಕ್ಕಾಗಿ ಮ್ಯಾಟ್ರಿಮೋನಿ ಆಪ್‍ನಲ್ಲಿ ಲಾಗಿನ್ ಆಗಿದ್ದರು. ಈ ವೇಳೆ ದೀಪಕ್ ಎಂಬಾತನ ಪ್ರೊಫೈಲ್ ಕಂಡು ಸಂಪರ್ಕಿಸಿದ್ದಾರೆ. ತಾನು ತಮಿಳುನಾಡಿನ ಮಧುರೈಯ ಎಸ್‍ಬಿಐನಲ್ಲಿ ಆಪರೇಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವುದಾಗಿ ದೀಪಕ್ ಹೇಳಿಕೊಂಡಿದ್ದ. ವಾಟ್ಸ್ ಆಪ್ ಮೂಲಕ ಪರಸ್ಪರ ಬಯೋಡೇಟಾ ವಿನಿಮಯ ಮಾಡಿಕೊಂಡಿದ್ದರು. ಬಳಿಕ ಮಹಿಳೆಯನ್ನು ಮದುವೆ ಮಾಡಿಕೊಳ್ಳುವುದಾಗಿ ಆರೋಪಿ ಹೇಳಿದ್ದಾನೆ ಎಂದು ದೂರಲಾಗಿದೆ.

ಕಾಲಕ್ರಮೇಣ ಪರಸ್ಪರ ಇಬ್ಬರು ಕರೆ ಮಾಡಿ ಮಾತನಾಡುತ್ತಿದ್ದರು. ಈ ಮಧ್ಯೆ ತನ್ನ ವ್ಯಾಲೆಟ್ ಕಳೆದುಕೊಂಡಿದ್ದು ಹಣ ಬೇಕಾಗಿದೆ ಎಂದು ಮಹಿಳೆಯಿಂದ 30 ಸಾವಿರ ರೂ. ಪಡೆದುಕೊಂಡಿದ್ದ. ಅಲ್ಲದೇ ತಾನು ಬಳಸುತ್ತಿರುವ ಸಿಮ್ ಬ್ಯಾಂಕ್‍ನವರದ್ದು, ಖಾಸಗಿಯಾಗಿ ಮಾತನಾಡಲು ಆಗುತ್ತಿಲ್ಲ. ಹೀಗಾಗಿ ಸಿಮ್ ಖರೀದಿಸುವಂತೆಯೂ ಬೇಡಿಕೆಯಿಟ್ಟಿದ್ದ. ಇದನ್ನು ನಂಬಿದ್ದ ಮಹಿಳೆ ಸಿಮ್ ಖರೀದಿಸಿದ್ದರು ಎಂದು ಹೇಳಲಾಗಿದೆ.

ಸಿಮ್ ಪಡೆಯುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಸ್ನೇಹಿತರ ಬಳಿ ಈ ವಿಚಾರದ ಬಗ್ಗೆ ಹೇಳಿದಾಗ ತಾನು ಮೋಸ ಹೋಗಿರುವುದನ್ನು ಅರಿತ ಮಹಿಳೆ ತನ್ನ ಹೆಸರಿನಲ್ಲಿ ಖರೀದಿಸಿದ ಸಿಮ್ ಬ್ಲಾಕ್ ಮಾಡಿಸಿದ್ದರು. ಅಲ್ಲದೆ, ತನ್ನನ್ನು ನಂಬಿಸಿ ವಂಚಿಸಿದ ಆರೋಪಿ ವಿರುದ್ಧ ದೂರು ನೀಡಿದ್ದರು. ಸದ್ಯ ಆರೋಪಿ ದೀಪಕ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X