Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಇನ್ನೋನೆಕ್ಸ್ಟ್ ಏರಿಯನ್...

ಬೆಂಗಳೂರು | ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0

ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ25 July 2025 10:50 PM IST
share
ಬೆಂಗಳೂರು | ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0

ಬೆಂಗಳೂರು : ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ಈ ಕಾರ್ಯಕ್ರಮವು ವಿಜ್ಞಾನಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಮತ್ತು ಖಗೋಳಶಾಸ್ತ್ರದಲ್ಲಿನ ಬೆಳವಣಿಗೆಗಳನ್ನು ಅನ್ವೇಷಿಸಲು ಹೊಸ ಸಾಧ್ಯತೆಯನ್ನು ಪರಿಚಯಿಸಿತು.

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಅಸ್ಟ್ರಾನೋಮಿ ಎಕ್ಸ್‌ಪೋ 1.0 ಪ್ರದರ್ಶನದಲ್ಲಿ ಐಎನ್‌-ಸ್ಪೇಸ್‌ನ ಪ್ರಚಾರ ನಿರ್ದೇಶನಾಲಯದ ನಿರ್ದೇಶಕ ಡಾ.ವಿನೋದ್ ಕುಮಾರ್, ಇಸ್ರೋದ ಮಾಜಿ ಮಿಷನ್ ನಿರ್ದೇಶಕ ಟಿ.ಕೆ.ಸುಂದರಮೂರ್ತಿ, ಯುಆರ್‌ಎಸ್‌ಸಿಯ ಮಾಜಿ ನಿರ್ದೇಶಕ ಎಂ.ಎಸ್.ಶ್ರೀನಿವಾಸನ್, ಮತ್ತು ಅಂತರರಾಷ್ಟ್ರೀಯ ಖಗೋಳ ಒಕ್ಕೂಟದ ಸದಸ್ಯೆ ಮತ್ತು ಖಗೋಳ ಭೌತಶಾಸ್ತ್ರಜ್ಞೆ ಡಾ.ಮಾರ್ಗರಿಟಾ ಸಫೊನೊವಾ ಸೇರಿದಂತೆ ಪ್ರಮುಖ ಬಾಹ್ಯಾಕಾಶ ತಜ್ಞರು ಭಾಗವಹಿಸಿದ್ದರು. ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಡಿಒಪಿಟಿ ಸಚಿವಾಲಯದ ಹಿಂದಿ ಸಲಹಾ ಸಮಿತಿಯ ಸದಸ್ಯ ರಾಘವೇಂಧೀರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೈಬರಹ ತಜ್ಞ ಪ್ರೊ.ಕೆ.ಸಿ.ಜನಾರ್ದನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಅಸ್ಟ್ರಾನೋಮಿ ಎಕ್ಸ್‌ಪೋ ಲಾಂಛನ ಮತ್ತು ಅಧಿಕೃತ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ಬಾಹ್ಯಾಕಾಶ ಪರಿಶೋಧನೆ ಮತ್ತು ರಾಕೆಟ್ ತಂತ್ರಜ್ಞಾನದ ಪ್ರಮುಖ ಅಂಶಗಳ ವಿಶೇಷ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ರಾಘವೇಂಧೀರಾ, ತಂತ್ರಜ್ಞಾನ ಮತ್ತು ಹೊಸ ಅವಿಷ್ಕಾರಗಳ ಪರಿಣಾಮ ಇಂದು ಬಾಹ್ಯಾಕಾಶ ವಿಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಭ್ಯಾಸ ಮಾಡಲು ಸಾಧ್ಯವಾಗಿದೆ. ಪ್ರತಿಯೊಂದು ಗ್ರಹಗಳು ಮತ್ತು ಸೌರಮಂಡಲದ ಅಧ್ಯಯನಕ್ಕೆ ಇದು ನೆರವಾಗಿದೆ. ಅಸ್ಟ್ರಾನೋಮಿ ಎಕ್ಸ್‌ಪೋ ಮೂಲಕ ಮಕ್ಕಳಿಗೆ ಬಾಹ್ಯಾಕಾಶದ ಕುರಿತು ಹೆಚ್ಚಿನ ಅರಿವು ಮೂಡಿಸಲು ಸಾಧ್ಯವಾಗುತ್ತಿದೆ. ಜತೆಗೆ ಭಾರತ ಪ್ರಸ್ತುತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ನಾಲ್ಕನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಏರುವಂತಾಗಲಿ ಎಂದು ಹಾರೈಸಿದರು.

ಇಸ್ರೋ ವಿಜ್ಞಾನಿ ಇಳಂಗೋವನ್ ಅವರೊಂದಿಗಿನ ನೇರ ವರ್ಚುವಲ್ ಸಂವಾದವು ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ತಜ್ಞರೊಂದಿಗೆ ನೇರವಾಗಿ ತೊಡಗಿಸಿಕೊಳ್ಳಲು ಅವಕಾಶವನ್ನು ಒದಗಿಸಿತು. ಇದೇ ಸಂದರ್ಭದಲ್ಲಿ ಖಗೋಳ ಭೌತಶಾಸ್ತ್ರ, ಇಸ್ರೋ ಇತಿಹಾಸ ಮತ್ತು ಡಾಲ್ಬಿ ಅಟ್ಮಾಸ್ ಸ್ವರೂಪದಲ್ಲಿ ಪ್ರಸ್ತುತಪಡಿಸಲಾದ 3D ವಿಶೇಷ ಚಿತ್ರ ಪ್ರದರ್ಶಿಸಲಾಯಿತು. ಇದು ಕಾಸ್ಮಿಕ್ ವಿದ್ಯಮಾನಗಳು ಮತ್ತು ಬಾಹ್ಯಾಕಾಶ ವಾಸಸ್ಥಳದ ಭವಿಷ್ಯದ ಸಾಧ್ಯತೆಗಳನ್ನು ಪರಿಚಯಿಸುವ ಪ್ರಯತ್ನವನ್ನು ಮಾಡಿತು. ಜತೆಗೆ, ಭೂಮಿಯ ರಚನೆ ಹೇಗಾಯಿತು ಮತ್ತು ಮಾನವನ ವಿಕಾಸದ ಪರಿಕಲ್ಪನೆಯನನ್ನು 3Dಯಲ್ಲಿ ಪ್ರದರ್ಶಿಸಿದ್ದು, ಮಕ್ಕಳಿಗೆ ಹೊಸ ಲೋಕವೊಂದನ್ನು ಪರಿಚಯಿಸಿತು. ಜತೆಗೆ ಬಾಹ್ಯಾಕಾಶ ಮತ್ತು ವಿಜ್ಞಾನದ ಬಗೆಗಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿತು.

ಈ ಕಾರ್ಯಕ್ರಮವು ಇಸ್ರೋ ಮಾರ್ಗದರ್ಶಕರಿಂದ ಮಾರ್ಗದರ್ಶನ ಪಡೆದ ಭಾರತದ ಮೊದಲ ಶೈಕ್ಷಣಿಕ ರಾಕೆಟ್ ತಂತ್ರಜ್ಞಾನ ಪ್ರಯೋಗಾಲಯ ಎಂದು ವಿವರಿಸಲಾದ ಆರ್ಯಭಟ ಶೈಕ್ಷಣಿಕ ರಾಕೆಟ್ ಪ್ರಯೋಗಾಲಯದ ಉದ್ಘಾಟನೆ ನಡೆಯಿತು. ವಿವಿಧ ಹಂತಗಳಲ್ಲಿರುವ ವಿದ್ಯಾರ್ಥಿಗಳಿಗೆ ಸ್ಮಾರ್ಟ್, ಅನುಭವಿ STEM ಕಲಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ವಿದ್ಯಾರ್ಥಿ ಬಾಹ್ಯಾಕಾಶ ಕಲಿಕಾ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಲಾಯಿತು.

ಇನ್ನೋನೆಕ್ಸ್ಟ್- ಏರಿಯನ್ ಭಾರತ್ ಸಿಇಒ ರಶ್ಮಿ ಸುಮಂತ್ ಮತ್ತು ಪ್ರಾದೇಶಿಕ ಸಂಯೋಜಕ ಸಂದೀಪ್ ಸೇರಿದಂತೆ ಏರಿಯೋನ್ ಭಾರತ್‌ನ ಪ್ರತಿನಿಧಿಗಳು, ತಳಮಟ್ಟದಲ್ಲಿ ಬಾಹ್ಯಾಕಾಶ ಶಿಕ್ಷಣವನ್ನು ಉತ್ತೇಜಿಸುವಲ್ಲಿ ನಡೆಯುತ್ತಿರುವ ವಿವಿಧ ಪ್ರಯತ್ನಗಳನ್ನು ಉದ್ದೇಶಿಸಿ ಮಾತನಾಡಿದರು. ಜತೆಗೆ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಖಗೋಳಶಾಸ್ತ್ರದ ಪ್ರಸ್ತುತತೆಯ ಕುರಿತು ಗಣ್ಯರು ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಂಡರು.

150ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಪ್ರಾಂಶುಪಾಲರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೆಂಗಳೂರಿನಲ್ಲಿ ಗುರುವಾರ ನಡೆದ ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಅಸ್ಟ್ರಾನೋಮಿ ಎಕ್ಸ್‌ಪೋ ಕಾರ್ಯಕ್ರಮವನ್ನು ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಡಿಒಪಿಟಿ ಸಚಿವಾಲಯದ ಹಿಂದಿ ಸಲಹಾ ಸಮಿತಿಯ ಸದಸ್ಯ ರಾಘವೇಂಧೀರಾ ಉದ್ಘಾಟಿಸಿದರು. ಐಎನ್‌-ಸ್ಪೇಸ್‌ನ ಪ್ರಚಾರ ನಿರ್ದೇಶನಾಲಯದ ನಿರ್ದೇಶಕ ಡಾ.ವಿನೋದ್ ಕುಮಾರ್, ಇಸ್ರೋದ ಮಾಜಿ ಮಿಷನ್ ನಿರ್ದೇಶಕ ಟಿ.ಕೆ.ಸುಂದರಮೂರ್ತಿ, ಯುಆರ್‌ಎಸ್‌ಸಿಯ ಮಾಜಿ ನಿರ್ದೇಶಕ ಎಂ.ಎಸ್.ಶ್ರೀನಿವಾಸನ್, ಮತ್ತು ಅಂತರರಾಷ್ಟ್ರೀಯ ಖಗೋಳ ಒಕ್ಕೂಟದ ಸದಸ್ಯೆ ಮತ್ತು ಖಗೋಳ ಭೌತಶಾಸ್ತ್ರಜ್ಞೆ ಡಾ.ಮಾರ್ಗರಿಟಾ ಸಫೊನೊವಾ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X