Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಒಂದೇ...

ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಒಂದೇ ಸ್ವತ್ತಿನ ಮೇಲೆ 22 ಬ್ಯಾಂಕ್‍ಗಳಿಂದ ಸಾಲ : 6 ಜನರ ಬಂಧನ

ವಾರ್ತಾಭಾರತಿವಾರ್ತಾಭಾರತಿ19 April 2024 6:07 PM IST
share
ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಒಂದೇ ಸ್ವತ್ತಿನ ಮೇಲೆ 22 ಬ್ಯಾಂಕ್‍ಗಳಿಂದ ಸಾಲ : 6 ಜನರ ಬಂಧನ

ಬೆಂಗಳೂರು : ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 22 ಬ್ಯಾಂಕ್‍ಗಳಿಗೆ ಸಲ್ಲಿಸಿ 10 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಒಂದೇ ಕುಟುಂಬದ ಐವರ ಸಹಿತ ಒಟ್ಟು ಆರು ಜನ ಆರೋಪಿಗಳನ್ನು ಇಲ್ಲಿನ ಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಅಪಾರ್ಟ್‌ಮೆಂಟ್ ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ನಾಗೇಶ್, ಆತನ ಪತ್ನಿ ಸುಮಾ, ಪತ್ನಿಯ ಸಹೋದರಿ ಶೋಭಾ, ಆಕೆಯ ಪತಿ ಸತೀಶ್, ಸುಮಾಳ ಸ್ನೇಹಿತೆ ವೇದಾ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ನಾಗೇಶ್-ಸುಮಾ ಹೆಸರಿನಲ್ಲಿ ಬೇಗೂರು ಗ್ರಾಮದಲ್ಲಿರುವ 2,100 ಅಡಿ ಉದ್ದಳತೆಯ ಜಾಗದಲ್ಲಿರುವ ಕಟ್ಟಡಕ್ಕೆ ವಿವಿಧ ಸರ್ವೆ ನಂಬರ್ ಮತ್ತು ವಿವಿಧ ಸೈಟ್ ನಂಬರ್ ಗಳನ್ನು ಬದಲಿಸಿ ಹಾಗೂ ಸೈಟ್ ಉದ್ದಳತೆಯಲ್ಲಿ ಸಹ ಬದಲಾವಣೆ ಮಾಡುತ್ತಿದ್ದರು.

ನಂತರ ಆ ನಕಲಿ ದಾಖಲಾತಿಗಳಿಂದಲೇ ಡೀಡ್ ಮಾಡಿಸಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಮಾಡಿಸಿ, ಅವುಗಳ ಆಧಾರದ ಮೇಲೆ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್ ಮತ್ತು ಕೋ-ಆಪರೇಟಿವ್ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿದ್ದರು.

2014ರಿಂದಲೂ ವಿವಿಧ ಬ್ಯಾಂಕ್‍ಗಳಲ್ಲಿ ಕಂತು ಸಾಲ ಮತ್ತು ಯಂತ್ರೋಪಕರಣ ಸಾಲವೆಂದು ಒಟ್ಟು 22 ಬ್ಯಾಂಕ್‍ಗಳಿಂದ ಸುಮಾರು ಹತ್ತು ಕೋಟಿಗೂ ಅಧಿಕ ಸಾಲ ಪಡೆದಿದ್ದರು. ಆರೋಪಿಗಳ ವಂಚನೆಯ ಕುರಿತು ಅನೇಕ ಬ್ಯಾಂಕ್‍ಗಳಿಗೆ ಅನುಮಾನವೇ ಮೂಡಿರಲಿಲ್ಲ.

ಆರೋಪಿಗಳ ವಿರುದ್ಧ ಇದುವರೆಗೂ ಕೇವಲ ನಾಲ್ಕು ವಿವಿಧ ಬ್ಯಾಂಕ್ ಪ್ರತಿನಿಧಿಗಳು ಮಾತ್ರವೇ ದೂರು ನೀಡಿದ್ದರು. ಜಯನಗರ 3ನೇ ಬ್ಲಾಕ್‍ನಲ್ಲಿರುವ ಕೋ-ಆಪರೇಟಿವ್ ಬ್ಯಾಂಕ್‍ವೊಂದರ ಮ್ಯಾನೇಜರ್ ನೀಡಿದ್ದ ದೂರಿನನ್ವಯ ಜಯನಗರ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನಿಂದಲೂ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಯ ಹೊಣೆಯನ್ನು ಜಯನಗರ ಉಪವಿಭಾಗದ ಎಸಿಪಿ ನೇತೃತ್ವದ ತಂಡಕ್ಕೆ ವಹಿಸಲಾಗಿತ್ತು. ಸದ್ಯ ಆರೂ ಜನ ಆರೋಪಿತರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X