Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಬಿಜೆಪಿ ಏಜೆಂಟ್...

ಬೆಂಗಳೂರು | ಬಿಜೆಪಿ ಏಜೆಂಟ್ ಸಮ್ಮುಖದಲ್ಲಿ ಅಂಚೆ ಮತದಾನ : ಕ್ರಮ ಜರುಗಿಸುವಂತೆ ವಿಡಿಯೋ ಸಹಿತ ಮುಖ್ಯ ಚುನಾವಣಾಧಿಕಾರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ13 April 2024 7:48 PM IST
share
ಬೆಂಗಳೂರು | ಬಿಜೆಪಿ ಏಜೆಂಟ್ ಸಮ್ಮುಖದಲ್ಲಿ ಅಂಚೆ ಮತದಾನ : ಕ್ರಮ ಜರುಗಿಸುವಂತೆ ವಿಡಿಯೋ ಸಹಿತ ಮುಖ್ಯ ಚುನಾವಣಾಧಿಕಾರಿಗೆ ದೂರು

ಬೆಂಗಳೂರು : ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳ ತಂಡವು ಮನೆಮನೆಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುತ್ತಿದ್ದ ವೇಳೆ ಅವರ ಜೊತೆಗೆ ಬಿಜೆಪಿ ಏಜೆಂಟ್ ಇರುವುದು ಕಂಡುಬಂದಿದೆ. ಆ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.

ಶನಿವಾರ ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್‍ರ ಚುನಾವಣಾ ಏಜೆಂಟ್ ಪ್ರವೀಣ್ ಪೀಟರ್ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದು, ಬಿಜೆಪಿ ಏಜೆಂಟ್ ಚುನಾವಣಾಧಿಕಾರಿಗಳ ತಂಡದೊಂದಿಗೆ ಇರುವುದು ತಿಳಿದು ಬಂದಿದೆ. ಅಲ್ಲದೆ, ಬಿಜೆಪಿ ಏಜೆಂಟ್ ಇರುವ ವಿಡಿಯೋವನ್ನು ಸೆರೆ ಹಿಡಿಯಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸುಮಾರು ಒಂದೂವರೆ ನಿಮಿಷದ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಚುನಾವಣಾಧಿಕಾರಿಗಳ ಜೊತೆಗಿದ್ದ ಬಿಜೆಪಿ ಏಜೆಂಟ್‍ನನ್ನು ಕಿರಣ್ ಎಂದು ಗುರುತಿಸಲಾಗಿದೆ. ಬಿಜೆಪಿ ಏಜೆಂಟ್ ಉಪಸ್ಥಿತರಿದ್ದ ವೇಳೆ ನಡೆದ ಮತದಾನ ಪ್ರಕ್ರಿಯೆಯನ್ನು ಅಸಿಂಧುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿರಿಯ ನಾಗರಿಕರು, ವಿಕಲ ಚೇತನರು ಮನೆಯಿಂದಲೇ ಮತದಾನ ಮಾಡುವ ಕಾರ್ಯ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ಏಜೆಂಟ್ ಚುನಾವಣಾಧಿಕಾರಿಗಳ ಜತೆಗೂಡಿ ಮತದಾನ ಮಾಡುವ ನಾಲೈದು ಮನೆಗಳಿಗೆ ತೆರಳಿದ್ದು, ನಿಮ್ಮ ಚುನಾವಣಾಧಿಕಾರಿಗಳು ಮತ್ತು ಮೈಕ್ರೋ ಅಬ್ ಸರ್ವರ್ ಮೂಕಪ್ರೇಕ್ಷಕರಾಗಿ ವರ್ತಿಸಿರುವುದು ಕಂಡು ಬಂದಿದೆ.

ಆದುದರಿಂದ ಈ ಕೂಡಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಆ ಮತವನ್ನು ಅಸಿಂಧುಗೊಳಿಸಬೇಕು. ಈ ಸಂಬಂಧ ತಕ್ಷಣವೇ ಕ್ರಮ ಕೈಗೊಂಡು, ನೀತಿ ಸಂಹಿತೆ ಉಲ್ಲಂಘಿಸಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಪ್ರವೀಣ್ ಪೀಟರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಎ.13ರಿಂದ 18ರ ವರೆಗೆ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಮನೆಯಿಂದಲೇ ಗೌಪ್ಯ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X