Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಅನಧಿಕೃತ ಫ್ಲೆಕ್ಸ್‌ಗಳ...

ಬೆಂಗಳೂರು | ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ : 8362ಕ್ಕೂ ಹೆಚ್ಚು ಫ್ಲೆಕ್ಸ್ ತೆರವು, 142 ಎಫ್‍ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ26 July 2024 8:20 PM IST
share
ಬೆಂಗಳೂರು | ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ : 8362ಕ್ಕೂ ಹೆಚ್ಚು ಫ್ಲೆಕ್ಸ್ ತೆರವು, 142 ಎಫ್‍ಐಆರ್ ದಾಖಲು

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 8362ಕ್ಕೂ ಹೆಚ್ಚು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 267 ದೂರುಗಳ ಪೈಕಿ 142 ಎಫ್‍ಐಆರ್ ದಾಖಲಿಸಲಾಗಿದೆ.

ನಗರದಲ್ಲಿ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳಿರದಂತೆ ಉಪ ಮುಖ್ಯಮಂತ್ರಿ ಸಚಿವ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿರುತ್ತಾರೆ. ಈ ಸಂಬಂಧ ಎಲ್ಲ ವಲಯದಲ್ಲೂ ಅನಧಿಕೃತ ಜಾಹೀರಾತುಗಳು ಇರದಂತೆ ನೋಡಿಕೊಳ್ಳಲು ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಅಲ್ಲದೆ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ವಲಯ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿ ವರದಿ ಪಡೆಯುತ್ತಿದ್ದಾರೆ.

ನಗರದಾದ್ಯಂತ 2024ರ ಜೂ.1 ರಿಂದ ಇದುವೆರೆಗೆ 8362 ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ 267 ದೂರುಗಳನ್ನು ದಾಖಲಿಸಲಾಗಿದೆ. 142 ಎಫ್‍ಐಆರ್ ಗಳನ್ನು ದಾಖಲಿಸಲಾಗಿದ್ದು, 1,03,000ರೂ. ದಂಡ ವಿಧಿಸಲಾಗಿದೆ.

ಅನಧಿಕೃತ ಜಾಹೀರಾತು ಅಳವಡಿಸಿದರೆ ಕಾನೂನು ಕ್ರಮ: ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಜಾಹೀರಾತುಗಳು ಅಳಡಿಸುವುದರಿಂದ ನಾಗರೀಕರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಎಲ್ಲೆಂದರಲ್ಲಿ ಜಾಹೀರಾತು ಫಲಕಗಳು ಅಳವಡಿಸುವುದರಿಂದ ಪ್ರಾಣಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಹೀಗಾಗಿ ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ.

ಜನ್ಮ ದಿನಾಚರಣೆ ಹಾಗೂ ಶುಭ ಹಾರೈಕೆಗಳ ಫ್ಲೆಕ್ಸ್ ಗಳನ್ನು ಅಳವಡಿಸದಿರಲು ಮನವಿ: ನಗರದ ಪ್ರಮುಖ ರಸ್ತೆಗಳ ಬದಿ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯಗಳ ಫ್ಲೆಕ್ಸ್‌ಗಳನ್ನು ಹೆಚ್ಚು ಅಳವಡಿಸಲಾಗುತ್ತಿದೆ. ಈ ಸಂಬಂಧ ಯಾವುದೇ ಶುಭಾಶಯಗಳ ಕುರಿತ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸದಂತೆ ಬಿಬಿಎಂಪಿ ನಾಗರೀಕರಲ್ಲಿ ಮನವಿ ಮಾಡುತ್ತಿದೆ. ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಜಂಕ್ಷನ್‍ಗಳು, ಮೇಲುಸೇತುವೆಗಳಲ್ಲಿ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಅಳವಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪೊಲೀಸ್ ಅಧಿಕಾರಿಗಳ ಸಹಕಾರ: ನಗರದಲ್ಲಿ ಅನಧಿಕೃತ ಜಾಹೀರಾತುಗಳ ತೆರವು ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ಸಹ ಪಾಲಿಕೆಯ ಜೊತೆ ಕೈ ಜೋಡಿಸಿ ಅನಧಿಕೃತ ಜಾಹೀರಾತುಗಳ ತೆರವು ಕಾರ್ಯಾಚರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ತಿಳಿಸಿದೆ.

Tags

BangaloreUnauthorized flex
share
ವಾರ್ತಾಭಾರತಿ
ವಾರ್ತಾಭಾರತಿ
Next Story
X