Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಸ್ಲಿಮ್ ಮಹಿಳೆಯರ ಬಗ್ಗೆ ಪೂರ್ವಾಗ್ರಹ...

ಮುಸ್ಲಿಮ್ ಮಹಿಳೆಯರ ಬಗ್ಗೆ ಪೂರ್ವಾಗ್ರಹ ತೊಲಗಲಿ : ಬಾನು ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ17 May 2026 11:06 PM IST
share
ಮುಸ್ಲಿಮ್ ಮಹಿಳೆಯರ ಬಗ್ಗೆ ಪೂರ್ವಾಗ್ರಹ ತೊಲಗಲಿ : ಬಾನು ಮುಷ್ತಾಕ್

ಬೆಂಗಳೂರು : ‘ಭಾರತೀಯತೆ ಯಾರ ಅಪ್ಪನ ಮನೆಯ ಆಸ್ತಿಯೂ ಅಲ್ಲ. ಅದು ನಮ್ಮ ಹಕ್ಕು, ಜೀವ, ನಮ್ಮ ಉಸಿರು. ನಾವು ಈ ದೇಶದಲ್ಲಿ ಭಾರತೀಯರು ಎಂಬ ಅಸ್ಮಿತೆಯ ಅಡಿಯಲ್ಲಿ ಬದುಕುವುದಕ್ಕೆ ಸಾಧ್ಯವಿದೆ’ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ತಿಳಿಸಿದ್ದಾರೆ.

ರವಿವಾರ ಸಹಕಾರ ನಗರದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಅಹಮದಿಯಾ ಮುಸ್ಲಿಮ್ ಕಮ್ಯೂನಿಟಿ ಜಕ್ಕೂರು ಘಟಕ ವತಿಯಿಂದ ನಡೆದ ‘ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಸ್ಲಿಮ್ ಮಹಿಳೆಯರ ಬಗ್ಗೆ ಅನೇಕ ಪೂರ್ವಗ್ರಹಗಳಿದ್ದು, ಅವರನ್ನು ಕೇವಲ ಉಡುಪುಗಳಿಂದ ಗುರುತಿಸಲಾಗುತ್ತಿದೆ. ಅವರ ಧ್ವನಿಯನ್ನು ಕೇಳದೆ ತೀರ್ಪುಗಳನ್ನು ನೀಡಲಾಗುತ್ತಿದೆ. ಇಲ್ಲಿ ಮಾಧ್ಯಮ ಹಾಗೂ ಸಮಾಜದ ಪೂರ್ವಗ್ರಹಗಳಿಗೆ ಮುಸ್ಲಿಮ್ ಮಹಿಳೆಯರು ಎಷ್ಟು ಹೊಣೆಗಾರರಾಗಿದ್ದಾರೋ, ನಾವು ಅಷ್ಟೇ ಕಾರಣ ಆಗಿದ್ದೇವೆ ಎಂಬ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಬಾನು ಮುಷ್ತಾಕ್ ಹೇಳಿದರು.

ಮುಸ್ಲಿಮ್ ಮಹಿಳೆಯರು ಬಹಳ ಕೊಳಕು, ಅನೇಕ ಮಕ್ಕಳನ್ನು ಹೆರುತ್ತಾರೆ, ಅವಿದ್ಯಾವಂತರಾಗಿದ್ದಾರೆ, ಅವರು ಸರಿಯಲ್ಲ. ಬುರ್ಖಾ ಧರಿಸಿ ನಮ್ಮ ಪಕ್ಕ ಕುಳಿತುಕೊಂಡರೆ ನಮಗೆ ಹೆದರಿಕೆ ಆಗುತ್ತದೆ ಎಂಬ ಅನೇಕ ಪೂರ್ವಗ್ರಹಗಳಿವೆ. ಇದನ್ನು ಸಮಾಜ ಸೇರಿ ಮಾಧ್ಯಮಗಳಲ್ಲಿ ನಿರಂತರವಾಗಿ ಬಿತ್ತಲಾಗುತ್ತಿದೆ. ಇದು ಸಂಪೂರ್ಣವಾಗಿ ಅವರದೇ ತಪ್ಪಾ? ಇದರಲ್ಲಿ ನಮ್ಮ ತಪ್ಪು ಇಲ್ಲವೇ? ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಧರ್ಮ ಎಂಬುದು ನನಗೆ ವೈಯಕ್ತಿಕ. ಆದುದರಿಂದ ನಾನು ಮನೆಯ ಹೊಸ್ತಿಲ ಒಳಗೆ ನನ್ನ ಧರ್ಮವನ್ನು ಆಚರಿಸುತ್ತೇನೆ. ಹೊರಗಡೆ ನಾನು ಸೆಕ್ಯುಲರ್(ಜಾತ್ಯತೀತ) ಮುಸ್ಲಿಮ್ ಆಗಿದ್ದೇನೆ. ಆದರೆ, ಈಗ ಸೆಕ್ಯುಲರ್ ಮುಸ್ಲಿಮರಿಗೂ ರಕ್ಷಣೆ ಇಲ್ಲದಂತಾಗಿದೆ. ನಮ್ಮ ಗುರುತು ಅಥವಾ ಅಸ್ಮಿತೆ ಎಂದರೇ ಬರಿ ಬಟ್ಟೆನಾ? ಚಿಂತನೆ ಏನಾದರೂ ಇದೆಯೇ? ಕುರ್‌ಆನ್‌ನಲ್ಲಿ ಪುರುಷ ಮತ್ತು ಮಹಿಳೆಯರಿಗೆ ಸಮಾನ ಗೌರವ ಹಾಗೂ ಅವಕಾಶಗಳನ್ನು ನೀಡಲಾಗಿದೆ. ಆದರೆ, ಈಗ ನಮ್ಮನ್ನು ಬರೀ ಬಟ್ಟೆಯ ಮೂಲಕ ಗುರುತಿಸುತ್ತಿರುವುದು ಎಷ್ಟು ಸರಿ? ಗುರುತು ನಮಗೆ ಮುಖ್ಯವಾಗುವುದಾದರೆ ಸೆಕ್ಯುಲರ್ ಗುರುತು ಮುಖ್ಯವೊ ಅಥವಾ ಧಾರ್ಮಿಕ ಗುರುತು ಮುಖ್ಯವೊ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಅಹಮದಿಯಾ ಮುಸ್ಲಿಮ್ ಕಮ್ಯೂನಿಟಿ ಜಕ್ಕೂರು ಘಟಕದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Banu Mushtaq
share
ವಾರ್ತಾಭಾರತಿ
ವಾರ್ತಾಭಾರತಿ
Next Story
X