Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜಕೀಯ, ಸಾಂಸ್ಕೃತಿಕ ನೈತಿಕತೆ...

ರಾಜಕೀಯ, ಸಾಂಸ್ಕೃತಿಕ ನೈತಿಕತೆ ಹಾಳಾಗುತ್ತಿದೆ : ಪ್ರೊ.ಬರಗೂರು ರಾಮಚಂದ್ರಪ್ಪ

ಡಾ.ರಾಜ್‍ಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ18 April 2025 9:40 PM IST
share
ರಾಜಕೀಯ, ಸಾಂಸ್ಕೃತಿಕ ನೈತಿಕತೆ ಹಾಳಾಗುತ್ತಿದೆ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು : ಇವತ್ತಿನ ಸಂದರ್ಭದಲ್ಲಿ ರಾಜಕೀಯ ನೈತಿಕತೆ ಹಾಳಾಗುತ್ತಿದೆ. ಸಾಂಸ್ಕೃತಿಕ ನೈತಿಕತೆಯಲ್ಲಿಯೂ ಅನೇಕ ಶಿಥಿಲತೆಯನ್ನು ಕಾಣುತ್ತಿದ್ದೇವೆ ಎಂದು ಹಿರಿಯ ಸಾಹಿತಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಗರದ ನಯನ ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಡಾ.ರಾಜ್‍ಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ನೈತಿಕತೆಯೂ ಅಧಃಪಥನದ ಹಾದಿಯನ್ನಿಡಿದಿರುವಾಗ ನಡೆ ಮತ್ತು ನುಡಿಯಲ್ಲಿ ನೈತಿಕತೆಯನ್ನು ತೋರಿಸಿರುವ ಅಪರೂಪದ ವ್ಯಕ್ತಿಯಾಗಿ ಡಾ.ರಾಜ್‍ಕುಮಾರ್ ಕಾಣುತ್ತಾರೆ ಎಂದು ತಿಳಿಸಿದರು.

ಕಲಾವಿದರು ನೋಡುಗರಿಗೆ, ಆನಂದ, ಸದಾಭಿರುಚಿಯನ್ನು ಬೆಳೆಸಬೇಕು. ಕೆಲವು ಮೌಲ್ಯಗಳನ್ನು ಹುಟ್ಟು ಹಾಕಬೇಕು. ಲೇಖಕರೂ ಅದೇ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಡಾ.ರಾಜ್‍ಕುಮಾರ್ ಅವರನ್ನು ಸ್ಟುಡಿಯೋ ಯಾಕೆ ಕಟ್ಟಲಿಲ್ಲ ಎಂದು ಕೇಳಬಾರದು ಯಾಕೆಂದರೆ, ಅವರ ಕೆಲಸ ಅದಲ್ಲ. ಆದರೆ ಕನ್ನಡ ಚಿತ್ರರಂಗದ ಬೆಳವಣಿಗೆಗೆ ರಾಜ್‍ಕುಮಾರ್ ಕೊಟ್ಟಿರುವ ಕೊಡುಗೆಯನ್ನು ಯಾರೂ ಮೀರಿಸಲು ಆಗುವುದಿಲ್ಲ. ರಾಜ್‍ಕುಮಾರ್ ಅವರು ಚಿತ್ರರಂಗಕ್ಕೆ ಕಾಲಿಟ್ಟ ನಂತರ, ನೂರಾರು ಚಲನಚಿತ್ರಗಳು ತೆರೆಗೆ ಬಂದವು. ಕನ್ನಡದ ಜನರು ಒಬ್ಬ ನಾಯಕನ್ನು ಹುಡುಕುತಿದ್ದರು. ಆಗ ಡಾ.ರಾಜ್‍ಕುಮಾರ್ ಬಂದರು. ಆಗ ಚಿತ್ರಮಂದಿರಕ್ಕೆ ಜನರು ಬರಲು ಪ್ರಾರಂಭಿಸಿದರು ಎಂದು ಹೇಳಿದರು.

ಡಾ.ರಾಜ್‍ಕುಮಾರ್ ಅವರು ಜೀವನದಲ್ಲಿ ಕನ್ನಡ ಚಿತ್ರ ಬಿಟ್ಟು ಬೇರೆ ಭಾಷೆಯ ಚಿತ್ರಗಳಲ್ಲಿ ಅಭಿನಯಿಸುವುದಿಲ್ಲ ಎಂದು ತೀರ್ಮಾನ ಮಾಡಿದಾಗ, ಖ್ಯಾತ ಕಾದಂಬರಿಕಾರ ಅನಕೃ ಅವರು ಡಾ.ರಾಜ್‍ಕುಮಾರ್ ಅವರು ಕನ್ನಡ ಚಲನಚಿತ್ರದಲ್ಲಿ ಮಾತ್ರವೇ ಅಭಿನಯಿಸುವ ತೀರ್ಮಾನ ಮಾಡದಿದ್ದರೆ, ಕನ್ನಡ ಚಿತ್ರರಂಗಕ್ಕೆ ಪ್ರತ್ಯೇಕ ಅಸ್ತಿತ್ವವೇ ಇರುತ್ತಿರಲಿಲ್ಲ ಎಂದು ಹೇಳಿದ್ದರು ಎಂದು ನೆನಪು ಮಾಡಿಕೊಂಡರು.

ವಿಮರ್ಶಕ ಡಾ.ಎಚ್.ಎಸ್.ರಾಘವೇಂದ್ರರಾವ್ ಮಾತನಾಡಿ, ಕನ್ನಡದಲ್ಲಿ ಸಾಹಿತಿಗಳು ಚಲನಚಿತ್ರವನ್ನು ಆತ್ಮೀಯವಾಗಿ ತೆಗೆದುಕೊಂಡಿರುವುದು ಬಹಳ ಕಡಿಮೆ. ಆದರೆ ಬರಗೂರು ರಾಮಚಂದ್ರಪ್ಪ ಅವರು ಅರ್ಥಪೂರ್ಣವಾದ ಚಲನಚಿತ್ರ ಮತ್ತು ಸಾಹಿತ್ಯದ ನಡುವೆ ಒಂದು ಸೇತುವೆ ಕಟ್ಟಿ, ಜನಪರವಾದ ಕೆಲಸ ಮಾಡುವುದು ಹೇಗೆ ಎನ್ನುವುದನ್ನು ಚಿಂತಿಸಿದವರು ಎಂದು ತಿಳಿಸಿದರು.

ಇದೇ ವೇಳೆ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅವರಿಗೆ ವರನಟ ಡಾ.ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ, ಗೌರವ ಸಲಹೆಗಾರ ಪಿ.ಮಲ್ಲಿಕಾರ್ಜುನಪ್ಪ, ಕೆ. ಮೋಹನ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X