Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಬಸವ ಮಂಟಪ’ ಕೃತಿ ಮುಟ್ಟುಗೋಲು ಹಾಕಿ,...

‘ಬಸವ ಮಂಟಪ’ ಕೃತಿ ಮುಟ್ಟುಗೋಲು ಹಾಕಿ, ಲೇಖಕ-ಪ್ರಕಾಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಬಸವ ಸಮಿತಿ ಆಗ್ರಹ

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ19 Nov 2026 3:18 PM IST
share
‘ಬಸವ ಮಂಟಪ’ ಕೃತಿ ಮುಟ್ಟುಗೋಲು ಹಾಕಿ, ಲೇಖಕ-ಪ್ರಕಾಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಬಸವ ಸಮಿತಿ ಆಗ್ರಹ

ಬೆಂಗಳೂರು: ಮಹಾತ್ಮ ಬಸವಣ್ಣನವರ ವಿಚಾರಧಾರೆ ಮತ್ತು ತತ್ವಗಳಿಗೆ ಅಪಚಾರ ಎಸಗುವ ಹಾಗೂ ಸಂಶೋಧನೆಯ ಹೆಸರಿನಲ್ಲಿ ಲಿಂಗಾಯತ ಸಮುದಾಯ ಮತ್ತು ಬಸವಾಭಿಮಾನಿಗಳಿಗೆ ನೋವುಂಟು ಮಾಡಿರುವ ರವಿ ಹಂಜ್ ಅವರ ‘ಬಸವ ಮಂಟಪ’ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಕದಡುವ ಇಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಆಗ್ರಹಿಸಿದರು.

ರವಿ ಹಂಜ್ ಮತ್ತು ಅವರ ಪುಸ್ತಕದ ಪ್ರಕಾಶಕರಾದ ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಬಸವ ಸಮಿತಿ ನೇತೃತ್ವದಲ್ಲಿ ಗುರುವಾರ ಬಸವ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸುದ್ದಿಗೋಷ್ಠಿಯ ಬಳಿಕ ಸಮಿತಿಯು ಹಂಜ್ ಮತ್ತು ಭಟ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ಸಲ್ಲಿಸಿತು.

ಬಸವಣ್ಣನವರ ವಿರುದ್ಧ ಮೊದಲಿನಿಂದಲೂ ಷಡ್ಯಂತ್ರ ನಡೆಯುತ್ತಲೇ ಇದೆ. ಸಮಾನತೆ, ಜಾತಿರಹಿತ ಸಮಾಜ, ಕಾಯಕ ತತ್ವ ಹಾಗೂ ಸಂಸತ್ತಿನ ಪರಿಕಲ್ಪನೆಗಳನ್ನು ಜಗತ್ತಿಗೆ ಸಾರಿದ ಬಸವಣ್ಣನವರನ್ನು ಕೊಲೆಗಡುಕ, ಕಳ್ಳ, ಲೂಟಿಕೋರ ಎಂದೆಲ್ಲ ರವಿ ಹಂಜ್ ವಾಗ್ದಾಳಿ ನಡೆಸಿದ್ದಾರೆ. ಇದರ ಹಿಂದೆ ವಿಶ್ವೇಶ್ವರ ಭಟ್ ಅವರ ಕೈವಾಡವಿದೆ ಎಂದು ಅರವಿಂದ ಜತ್ತಿ ಆರೋಪಿಸಿದರು.

ನಂತರ ಎದುರಾದ ವಿರೋಧವನ್ನು ಕಂಡು ಹಂಜ್ ಅವರು ಕ್ಷಮೆ ಕೇಳುವ ಹಾಗೂ ತಿದ್ದುಪಡಿ ಮಾಡುವ ನಾಟಕವಾಡಿದ್ದಾರೆ. ಅವೆರಡೂ ನಮಗೆ ಬೇಕಾಗಿಲ್ಲ. ನಮ್ಮ ವೀರಶೈವ-ಲಿಂಗಾಯತ ಸಮುದಾಯದ ಸೌಮ್ಯ ಸ್ವಭಾವವನ್ನೇ ದೌರ್ಬಲ್ಯ ಎಂದು ಭಾವಿಸಲಾಗಿದೆ. ‘ಬಸವ ಮಂಟಪ’ ಕೃತಿಗೆ ಸಂಶೋಧನೆಯ ಮುಖವಾಡ ತೊಡಿಸಿರುವುದು ಖಂಡನೀಯ ಎಂದು ಹೇಳಿದರು.

12ನೇ ಶತಮಾನದಲ್ಲಿ ನಡೆದ ಐತಿಹಾಸಿಕ ಸಂಘರ್ಷಗಳನ್ನು ದುರುದ್ದೇಶದಿಂದ ತಿರುಚಲಾಗುತ್ತಿದ್ದು, ಪೂರ್ವಗ್ರಹಪೀಡಿತರಾಗಿ ಮಾತನಾಡಲಾಗುತ್ತಿದೆ. ರಾಷ್ಟ್ರಕವಿ ಕುವೆಂಪು ಕೂಡ ಬಸವಣ್ಣನವರನ್ನು ಮುಕ್ತವಾಗಿ ಪ್ರಶಂಸಿಸಿದ್ದಾರೆ. ಈಗ ನಡೆಯುತ್ತಿರುವ ಬೆಳವಣಿಗೆಗಳು ಶರಣ ತತ್ವ ಹಾಗೂ ಲಿಂಗಾಯತ ಅಸ್ಮಿತೆಯನ್ನು ಬುಡಮೇಲು ಮಾಡುವ ಸೈದ್ಧಾಂತಿಕ ಸಂಚಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಗೊತ್ತಿದೆ. ನಾಡಿನ ಪ್ರಜ್ಞಾವಂತರು, ಯುವಜನರು, ಮಠಾಧೀಶರು, ಸಾಹಿತಿಗಳು ಹಾಗೂ ದೇಶ-ವಿದೇಶಗಳಲ್ಲಿರುವ ಎಲ್ಲ ಸಮುದಾಯದವರು ಇದನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಸರ್ಕಾರ ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ಬಳಿಕ ಇಂತಹ ಬೆಳವಣಿಗೆಗಳು ಹೆಚ್ಚಾಗಿವೆ. ಇವುಗಳ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳು ಸಕ್ರಿಯವಾಗಿವೆ. ಸಮಾಜದಲ್ಲಿ ಜಾಗೃತಿ ಮೂಡಿಸುವ ಮೂಲಕ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲಾಗುವುದು. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಏನು ಬೇಕಾದರೂ ಮಾಡಬಹುದು ಎಂಬ ಧೋರಣೆ ಸರಿಯಲ್ಲ ಎಂದು ಜತ್ತಿ ಪ್ರತಿಪಾದಿಸಿದರು.

ಆಳಂದ ಶಾಸಕ ಬಿ.ಆರ್.ಪಾಟೀಲ್‌ ಮಾತನಾಡಿ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಅವರ ವಿಚಾರಗಳನ್ನು ಸಹಿಸದ ವಿಕೃತ ಮನೋಭಾವ ಹಿಂದಿನಿಂದಲೂ ಇದೆ. ರವಿ ಹಂಜ್ ದುರುದ್ದೇಶದಿಂದ ಪುಸ್ತಕ ಬರೆದಿದ್ದು, ಬಸವಣ್ಣನವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಇದು ಮುಂದುವರಿದರೆ ಸಮಾಜದಲ್ಲಿ ಶಾಂತಿಗೆ ಭಂಗ ಉಂಟಾಗಲಿದೆ. ಇದುವರೆಗೆ ಜಗತ್ತಿನ 143 ಭಾಷೆಗಳಿಗೆ ಬಸವಣ್ಣನವರ ವಚನಗಳು ಭಾಷಾಂತರಗೊಂಡಿವೆ. ಈಗ ರಾಜ್ಯದಲ್ಲಿ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗಿದೆ ಎಂದರು.

ಬ್ರಿಟನ್‌ನಲ್ಲಿರುವ ಕನ್ನಡಿಗ ನೀರಜ್ ಪಾಟೀಲ್ ಹಾಗೂ ಚಿಂತಕ ಜೆ.ಎಸ್. ಪಾಟೀಲ್ ಮಾತನಾಡಿ, ಲೇಖಕ ಮತ್ತು ಪ್ರಕಾಶಕರ ವಿರುದ್ಧ ತೀವ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಮಾಜಿ ಮೇಯರ್ ಗಂಗಾಂಬಿಕ ಮಲ್ಲಿಕಾರ್ಜುನ್, ಮಾಜಿ ಉಪ ಮೇಯರ್ ಪುಟ್ಟರಾಜು ಮುಂತಾದವರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಬಸವರಾಜ ರಾಯರಡ್ಡಿ ಭಾಗವಹಿಸಿದ್ದರು.

ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಿಎಂ ಜತೆ ಚರ್ಚೆ :

ಬಸವಣ್ಣನವರು ಮತ್ತು ಲಿಂಗಾಯತ ಸಮುದಾಯದ ಮೇಲಿನ ದಾಳಿ ಮಿತಿಮೀರಿದೆ. ಇದನ್ನು ನಮ್ಮ ಸಮುದಾಯ ಇನ್ನು ಮುಂದೆ ಎಳ್ಳಷ್ಟೂ ಸಹಿಸುವುದಿಲ್ಲ. ಬದಲಿಗೆ ಬೀದಿಗಿಳಿದು ತೀವ್ರ ಹೋರಾಟ ನಡೆಸಲಿದೆ. ಈಗಾಗಲೇ ರಾಜ್ಯದ ಹಲವೆಡೆ ಪ್ರತಿಭಟನೆಗಳು ಆರಂಭವಾಗಿದ್ದು, ನೆರೆಯ ಮಹಾರಾಷ್ಟ್ರದಲ್ಲೂ ರವಿ ಹಂಜ್ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಕುರಿತು ನಾನು, ಶರಣಪ್ರಕಾಶ್ ಪಾಟೀಲ್‌ ಸೇರಿದಂತೆ ಇತರ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಬೃಹತ್ ಕೈಗಾರಿಕಾ ಸಚಿವ ಹಾಗೂ ಸಮುದಾಯದ ಮುಖಂಡ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದರು.

ಬಸವ ಸಮಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವಿ ಹಂಜ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ವೀರಶೈವ ಮಹಾಸಭಾದ ಅಧ್ಯಕ್ಷ ಶಂಕರ ಬಿದರಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮನು ಬಳಿಗಾರ್ ತೆರಳಿರುವುದು ಖಂಡನೀಯ. ಇವರಿಬ್ಬರೂ 21ನೇ ಶತಮಾನದ ಕೊಂಡಿ ಮಂಚಣ್ಣರು. ಶಂಕರ ಬಿದರಿ ವಿರುದ್ಧ ಕ್ರಮ ಕೈಗೊಳ್ಳುವುದು ವೀರಶೈವ ಮಹಾಸಭೆಗೆ ಬಿಟ್ಟ ವಿಚಾರ. ಇಂತಹವರು 12ನೇ ಶತಮಾನದಲ್ಲೂ ಇದ್ದರು. ಅವರೇ ಆಗ ಬಸವಣ್ಣನವರ ವಿರುದ್ಧ ಕೆಲಸ ಮಾಡಿದ್ದರು ಎಂದು ಟೀಕಿಸಿದರು.

ಬಸವಣ್ಣನವರು ಮತ್ತು ಶರಣ ಸಂಸ್ಕೃತಿಗೆ ಅಪಚಾರ ಮಾಡುತ್ತಿರುವುದರ ಹಿಂದೆ ಷಡ್ಯಂತ್ರವಿದೆ. ಉತ್ತರ ಕರ್ನಾಟಕದಲ್ಲಿಯೂ ಕೆಲವು ಶಕ್ತಿಗಳು ಒಬ್ಬ ಸ್ವಾಮೀಜಿಯ ಮೂಲಕ ಇಂತಹ ಕೆಲಸ ಮಾಡಿಸುತ್ತಿವೆ. ಈ ಬೆಳವಣಿಗೆಗಳ ವಿರುದ್ಧ ಸಿರಿಗೆರೆ, ಭಾಲ್ಕಿ, ಗದಗ, ಸುತ್ತೂರು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಧ್ವನಿ ಎತ್ತಲಿದ್ದಾರೆ. ಈಗಾಗಲೇ ಈ ಪ್ರಕ್ರಿಯೆ ಆರಂಭವಾಗಿದೆ. ನಮ್ಮ ಧರ್ಮದ ವಿಚಾರದಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಿದರೆ ಇನ್ನು ಮುಂದೆ ಸುಮ್ಮನಿರುವುದಿಲ್ಲ. ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್ ಇಬ್ಬರೂ ತಮ್ಮ ಮಿತಿಯನ್ನು ಮೀರಿದ್ದಾರೆ ಎಂದು ಆರೋಪಿಸಿದರು.

ಬೇರೆ ಸಮುದಾಯದ ವಿಚಾರದಲ್ಲಿ ಇಂತಹ ಬೆಳವಣಿಗೆ ನಡೆದಿದ್ದರೆ ಇಷ್ಟೊತ್ತಿಗೆ ಪರಿಣಾಮ ಬೇರೆಯೇ ಆಗಿರುತ್ತಿತ್ತು. ಹಿಂದೆ ಕೆಂಪೇಗೌಡರ ವಿಚಾರದಲ್ಲಿ ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಾಗ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಎಚ್ಚರಿಕೆಯಿಂದ ಆ ಪ್ರಯತ್ನ ನಿಂತುಹೋಯಿತು. ನಮ್ಮ ವೀರಶೈವ-ಲಿಂಗಾಯತ ಸಮುದಾಯ ಒಗ್ಗಟ್ಟಿನಿಂದ ಇರಬೇಕು. ಬಸವಣ್ಣನವರ ವಿಚಾರದಲ್ಲಿ ನಾವೆಲ್ಲರೂ ಒಂದಾಗಿದ್ದೇವೆ ಎಂದು ಹೇಳಿದರು.

ಬಸವಣ್ಣನವರು ಲಿಂಗಾಯತರ ಅಸ್ಮಿತೆ ಹಾಗೂ ವಿಶ್ವದ ತಂದೆಯಾಗಿದ್ದಾರೆ. ಹಂಜ್ ಆಡಿದ ಮಾತುಗಳು ಮತ್ತು ಅವರ ಪುಸ್ತಕದಿಂದ ಬಸವಾಭಿಮಾನಿಗಳಿಗೆ ಆಘಾತವಾಗಿದೆ. ಈ ವಿಚಾರದಲ್ಲಿ ರಾಜಿ ಸಾಧ್ಯವಿಲ್ಲ. ನಾನು ಈಗ ಆತ್ಮಚರಿತ್ರೆ ಬರೆಯುತ್ತಿದ್ದು, ಇದುವರೆಗೆ ಬಹಿರಂಗವಾಗದ ಅನೇಕ ಸಂಗತಿಗಳನ್ನು ಅದರಲ್ಲಿ ದಾಖಲಿಸುತ್ತಿದ್ದೇನೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದರು.

Tags

Basava SamitiGovernmentBasava MantapaBook
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X