Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ಯಾರಂಟಿ ಗಲಾಟೆ: ‘ಬಡವರಿಗೆ ಮಾತ್ರ...

ಗ್ಯಾರಂಟಿ ಗಲಾಟೆ: ‘ಬಡವರಿಗೆ ಮಾತ್ರ ನೀಡಿ’ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ24 Sept 2026 6:59 PM IST
share
ಗ್ಯಾರಂಟಿ ಗಲಾಟೆ: ‘ಬಡವರಿಗೆ ಮಾತ್ರ ನೀಡಿ’ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವ ಹಿನ್ನೆಲೆ ಗ್ಯಾರಂಟಿ ಯೋಜನೆಗಳನ್ನು ಸಾಮೂಹಿಕವಾಗಿ ಎಲ್ಲರಿಗೂ ನೀಡುವ ಬದಲು ಅವುಗಳನ್ನು ಪರಿಷ್ಕರಿಸಿ ಬಡವರಿಗೆ ಮಾತ್ರ ನೀಡಲಿ ಎಂದು ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಗುರುವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಬರ ಚರ್ಚೆ ವೇಳೆ ಮಾತನಾಡಿದ ಅವರು, ಯುವನಿಧಿ ಯೋಜನೆ ವಿಚಾರದಲ್ಲಿ ಸರಕಾರದ ಯುವಕರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ. ಯುವಕರು ಊರಿನ ಪಂಚಾಯಿತಿ ಕಟ್ಟೆ ಮೇಲೆ ಕುಳಿತು ನಿತ್ಯ ಹರಟೆ ಹೊಡೆಯುತ್ತಾರೆ. ಆದುದರಿಂದ ಯುವಕರಿಗೆ ಯುವನಿಧಿ ಯೋಜನೆ ಬದಲು ಉದ್ಯೋಗ ಕೊಟ್ಟು ಜವಾಬ್ದಾರಿಗಳನ್ನು ನೀಡುವ ಕೆಲಸವಾಗಬೇಕು ಎಂದರು.

ಕಡುಬಡವರನ್ನು ಗುರುತಿಸಿ ಗ್ಯಾರಂಟಿಗಳನ್ನು ಕೊಡಬೇಕು. ನಮ್ಮಂತಹ ಜನಪ್ರತಿನಿಧಿಗಳಿಗೆ, ಉದ್ಯಮಿಗಳಿಗೆ ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಹೊರಟ್ಟಿ ತಿಳಿಸಿದರು.

ಆಗ ಮಧ್ಯಪ್ರವೇಶಿಸಿದ ಕಾಂಗ್ರೆಸ್‍ನ ಎಂ.ನಾಗರಾಜ್ ಯಾದವ್, ಸರಕಾರದ ಗ್ಯಾರಂಟಿಗಳ ಬಗ್ಗೆ ತಾತ್ಸಾರದ ಮಾತುಗಳನ್ನಾಡುವುದು ಸಲ್ಲ. ಬಡ-ಮಧ್ಯಮ ವರ್ಗಗಳನ್ನು ಸಮಾಜದ ಮುನ್ನೆಲೆಗೆ ತರಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಗ್ಯಾರಂಟಿಗಳಿಂದ 3 ವರ್ಷಗಳಲ್ಲಿ ಕೋಟ್ಯಂತರ ಬಡವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು. ಆಗ ಹೊರಟ್ಟಿ ಅವರು, ನಾನು ಗ್ಯಾರಂಟಿಗಳನ್ನು ನಿಲ್ಲಿಸುವಂತೆ ಹೇಳಲಿಲ್ಲ. ಬಡವರನ್ನು ಹುಡುಕಿ ಅವರಿಗೆ ಕೊಡಲು ಹೇಳಿದ್ದೇನೆ ಎಂದರು.

ಇದೇ ವೇಳೆ ಕಾಂಗ್ರೆಸ್‍ನ ದಿನೇಶ್ ಗೂಳಿಗೌಡ ಮಾತನಾಡಿ, ಗ್ಯಾರಂಟಿಗಳು ಬಡವರು ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗಿವೆ. ಆದರೆ, ಕರ್ನಾಟಕದಲ್ಲಿ ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದೆ ಎಂದರು. ಮತ್ತೆ ಹೊರಟ್ಟಿ ಎದ್ದುನಿಂತು, ನಾನು ಗ್ಯಾರಂಟಿಗಳನ್ಜು ಟೀಕಿಸುತ್ತಿಲ್ಲ. ಗೃಹಲಕ್ಷ್ಮಿ, ಶಕ್ತಿ ಯೋಜನೆ ಬಗ್ಗೆ ನಾನು ಮಾತನಾಡುತ್ತಿಲ್ಲ. ಗೃಹಜ್ಯೋತಿ, ಯುವನಿಧಿಯನ್ನು ಎಲ್ಲರಿಗೂ ಪುಕ್ಕಟೆ ಕೊಡುವಾಗ ಯೋಚಿಸಿ ಎಂದು ಸಲಹೆ ನೀಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿದ ಸಚಿವ ವಿಜಯಾನಂದ ಕಾಶಪ್ಪನವರ್, ಯಾರು ಅರ್ಹರಿದ್ದಾರೋ ಅವರಿಗೆ ಗ್ಯಾರಂಟಿಗಳನ್ನು ಕೊಡುತ್ತೇವೆ. ಕೆಲವೆಡೆ ಅನರ್ಹರಿಗೆ ಗ್ಯಾರಂಟಿ ತಲುಪುತ್ತಿದೆ ಎಂಬ ಮಾಹಿತಿ ದೊರೆತಿದ್ದು, ಸರಕಾರ ಪರಿಶೀಲನೆ ಮಾಡುತ್ತಿದೆ. ಯಾರು ಅರ್ಜಿಗಳನ್ನು ಹಾಕುತ್ತಾರೋ ಅವರಿಗೆ ಅರ್ಹತೆ ಆಧಾರದಲ್ಲಿ ಗ್ಯಾರಂಟಿಗಳು ಸಿಗುತ್ತವೆ ಎಂದು ಸ್ಪಷ್ಟಪಡಿಸಿದರು.

ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ನಮ್ಮ ಗ್ಯಾರಂಟಿಗಳನ್ನೇ ಅನುಸರಿಸಲಾಗುತ್ತಿದೆ. ಜನರಿಗೆ ಗ್ಯಾರಂಟಿಗಳು ಬೇಡ ಎಂದಾದರೆ ಬಿಜೆಪಿಯವರು ನಿಮ್ಮ ಪಕ್ಷದಿಂದ ಒಂದು ನಿರ್ಧಾರಕ್ಕೆ ಬಂದು ರಾಜ್ಯದ ಜನತೆಗೆ ತಿಳಿಸಿ ಎಂದು ಕಾಶಪ್ಪನವರ್ ಕಿಚಾಯಿಸಿದರು.

ಸಚಿವರ ಮಾತಿಗೆ ಆಕ್ಷೇಪಿಸಿದ ಬಸವರಾಜ ಹೊರಟ್ಟಿ, ಗ್ಯಾರಂಟಿಗಳನ್ನು ನಾವು ನಿಲ್ಲಿಸುವಂತೆ ಹೇಳುತ್ತಿಲ್ಲ. ಅವು ಯಾರಿಗೆ ತಲುಪುತ್ತಿವೆ ಎಂಬುದನ್ನು ವಿಚಾರ ಮಾಡಬೇಕಾಗಿದೆ. ತಪ್ಪು ತಪ್ಪಾಗಿ ಅನರ್ಹರಿಗೆ ಗ್ಯಾರಂಟಿ ಕೊಟ್ಟರೆ ಸರಕಾರಕ್ಕೆ ಆರ್ಥಿಕ ಹೊರೆಯಾಗುತ್ತದೆ ಎಂದರು.

‘ಇಂದಿರಾ ಕ್ಯಾಂಟೀನ್‍ಗಳು ಮುಚ್ಚುವ ಹಂತ’: ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯ ಹಲವು ಕಡೆಗಳಿಂದ ಕಾರ್ಮಿಕರು ನಗರ ಪ್ರದೇಶಗಳಿಗೆ ಕೆಲಸಕ್ಕಾಗಿ ವಲಸೆ ಬರುತ್ತಾರೆ. ಅವರಿಗೆ ಕಡಿಮೆ ಖರ್ಚಿನಲ್ಲಿ ಊಟ-ತಿಂಡಿ ದೊರೆಯುತ್ತಿದ್ದ ಬಹುತೇಕ ಇಂದಿರಾ ಕ್ಯಾಂಟೀನ್‍ಗಳು ಈಗ ಮುಚ್ಚುವ ಹಂತದಲ್ಲಿವೆ. ಸರಕಾರ ಇಂದಿರಾ ಕ್ಯಾಂಟೀನ್‍ಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವುಗಳ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಬೇಕು ಎಂದು ಹೊರಟ್ಟಿ ಸರಕಾರವನ್ನು ಒತ್ತಾಯಿಸಿದರು.

Tags

Basavaraj Horatti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X