Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ರೈತರು ಬೆಳೆದ ಮೆಣಸಿನಕಾಯಿ...

ರಾಜ್ಯದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ವಾರ್ತಾಭಾರತಿವಾರ್ತಾಭಾರತಿ14 March 2025 2:47 PM IST
share
ರಾಜ್ಯದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ಬೆಂಗಳೂರು : ರಾಜ್ಯದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆಯು ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿದ್ದು, ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದೆ. ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಮೆಣಸಿನಕಾಯಿ ಉತ್ಪಾದನೆ ಸಾಮಾನ್ಯವಾಗಿದ್ದರೂ, ಆಂತರಿಕ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಹೊಟ್ಟೆಬಾಕುತನದಿಂದ ದೊಡ್ಡ ಪ್ರಮಾಣದ ಮೆಣಸಿನಕಾಯಿ ಮಾರಾಟವಾಗದೇ ಹಾಗೇ ಉಳಿದಿದ್ದು, ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ರಸಗೊಬ್ಬರ ಕೀಟನಾಶಕಗಳ ಬೆಲೆ ಹೆಚ್ಚಳದಿಂದಾಗಿ ಮೆಣಸಿನಕಾಯಿ ಬೆಳೆಯಲು ಸಾಕಷ್ಟು ವೆಚ್ಚವಾಗುತ್ತಿರುವುದು ತಮಗೆ ಗೊತ್ತಿದೆ. ಇದರಿಂದ ಮೆಣಸಿನಕಾಯಿ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಆಂಧ್ರಪ್ರದೇಶದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ತೀರ್ಮಾನಿಸಿ ಆ ರೈತರ ರಕ್ಷಣೆಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಆದರೆ, ಇದರಲ್ಲಿ ಕರ್ನಾಟಕದ ರೈತರು ಇದರಲ್ಲಿ ಸೇರ್ಪಡೆಯಾಗಿರುವುದಿಲ್ಲ. ಈ ಯೋಜನೆ ಅಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರಿದಿಸುವುದು ಅತ್ಯಂತ ಮುಖ್ಯವಾಗಿರುತ್ತದೆ. ಇದರಿಂದ ಕರ್ನಾಟಕದ ರೈತರಿಗೂ ಅನುಕೂಲವಾಗಲಿದೆ. ಆದ್ದರಿಂದ ಇದೊಂದು ಮಹತ್ವದ ಮತ್ತು ಜರೂರು ವಿಷಯವೆಂದು ಪರಿಗಣಿಸಿ ಕರ್ನಾಟಕರ ರಾಜ್ಯದ ಮೆಣಸಿನಕಾಯಿ ಬೆಳೆಯುವ ರೈತರ ರಕ್ಷಣೆಗೆ ಬರಬೇಕೆಂದು ವಿನಂತಿಸಿಕೊಂಡಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X