Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಮೆರಿಕಾದ ರಿಚ್ಮಂಡ್ ನಗರದಲ್ಲಿ 12ನೆ...

ಅಮೆರಿಕಾದ ರಿಚ್ಮಂಡ್ ನಗರದಲ್ಲಿ 12ನೆ ‘ಅಕ್ಕ ವಿಶ್ವ ಕನ್ನಡ ಸಮ್ಮೇಳನ’

ಕನ್ನಡವನ್ನು ಅನ್ನದ ಭಾಷೆಯನ್ನಾಗಿಸಲು ಗಂಭೀರ ಚಿಂತನೆ ಅಗತ್ಯ : ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ1 Sept 2024 7:33 PM IST
share
ಅಮೆರಿಕಾದ ರಿಚ್ಮಂಡ್ ನಗರದಲ್ಲಿ 12ನೆ ‘ಅಕ್ಕ ವಿಶ್ವ ಕನ್ನಡ ಸಮ್ಮೇಳನ’

ವರ್ಜೀನಿಯಾ(ಅಮೇರಿಕಾ): ನಮ್ಮ ಮಾತೃ ಬಾಷೆಯಾಗಿರುವ ಕನ್ನಡ ಬಾಷೆಯನ್ನು ಅನ್ನದ ಬಾಷೆಯನ್ನಾಗಿ ಪರಿವರ್ತಿಸಿ ಉದ್ಯೋಗ ಹಾಗೂ ಇತರ ಕಾರಣಗಳಿಗೆ ಕನ್ನಡ ಬಾಷೆಯನ್ನೆ ಪ್ರಧಾನವನ್ನಾಗಿಸುವ ಸವಾಲು ನಮ್ಮ ಮುಂದಿದ್ದು, ಅದನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲರೂ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕರೆ ನೀಡಿದ್ದಾರೆ.

ಅಮೇರಿಕಾ ದೇಶದ ವರ್ಜೀನಿಯಾ ರಾಜ್ಯದ ರಾಜಧಾನಿಯಾಗಿರುವ ರಿಚ್ಮಂಡ್ ನಗರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದು ವ್ಯವಹಾರಿಕವಾಗಿ ಕನ್ನಡ ಬಳಸುವುದನ್ನು ಕಡಿಮೆ ಮಾಡುತ್ತಿದ್ದು, ಉದ್ಯೋಗ ಹಾಗೂ ಇತರೆ ಕಾರಣಗಳಿಗಾಗಿ ಬಹುತೇಕ ಜನರು ಆಂಗ್ಲ ಬಾಷೆಯನ್ನೆ ಬಳಸುತ್ತಿದ್ದಾರೆ. ಹೀಗಾಗಿ ಕನ್ನಡ ಬಾಷೆಯಲ್ಲಿಯೆ ಕಲಿತರೂ ಸೂಕ್ತ ಉದ್ಯೋಗ ದೊರೆಯುವಂತಹ ವ್ಯವಸ್ಥೆಯನ್ನು ಕಲ್ಪಿಸಲು ಸರಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಪ್ರಪಂಚದಲ್ಲಿ ಅದೆಷ್ಟೋ ಬಾಷೆಗಳು ಅಸ್ತಿತ್ವ ಕಳೆದುಕೊಳ್ಳುತ್ತಿವೆ. ಅಂತೆಯೇ ಕನ್ನಡವೂ ಸಹ ಆಂಗ್ಲ ಬಾಷೆಯ ವ್ಯಾಮೋಹಕ್ಕೆ ಬಲಿಯಾಗುತ್ತಿದೆ ಎನ್ನುವ ಹೇಳಿಕೆಗಳನ್ನು ಅಲ್ಲಗಳೆಯಲಾರದ ಸ್ಥಿತಿ ಇಂದು ನಿರ್ಮಾಣವಾಗಿದೆ. ಇಂದಿನ ಜಾಗತಿಕ ಪೈಪೋಟಿಯ ಭರಾಟೆಯಲ್ಲಿ ನಮ್ಮ ಮಾತೃ ಬಾಷೆಯನ್ನು ಮರೆತು ಅನ್ಯ ಬಾಷೆಗೆ ಜೋತು ಬೀಳುವ ವಾತಾವರಣ ಇಂದು ಎಲ್ಲೆಡೆ ಕಾಣಸಿಗುತ್ತಿರುವುದು ದುರ್ದೈವದ ಸಂಗತಿ ಎಂದು ಸಭಾಪತಿ ಬೇಸರ ವ್ಯಕ್ತಪಡಿಸಿದರು.

ಕನ್ನಡ, ಕನ್ನಡಿಗ ಹಾಗೂ ಕರ್ನಾಟಕತ್ವದ ಅಸ್ತಿತ್ವಕ್ಕಾಗಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್, ಡೆಪ್ಯೂಟಿ ಚನ್ನಬಸಪ್ಪ ಮತ್ತಿತರ ಮಹಾನ್ ಪುರುಷರು ಕನ್ನಡ ಪ್ರಜ್ಞೆಯನ್ನು ಉಳಿಸಿ, ಬೆಳೆಸಿ ಕನ್ನಡದ ಸಾಂಸ್ಕೃತಿಕ ನೆಲೆಯನ್ನು ಗಟ್ಟಿಗೊಳಿಸಿ ಚಲುವ ಕನ್ನಡ ನಾಡನ್ನು ಕಟ್ಟಲು ಶ್ರಮಿಸಿದ ಇತಿಹಾಸ ನಾವೆಲ್ಲರೂ ಇಂದು ಅರಿಯಬೇಕಿದೆ ಎಂದು ಅವರು ಕರೆ ನೀಡಿದರು.

ಕನ್ನಡದ ರಕ್ಷಣೆ ಕೇವಲ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಹಳ್ಳಿಗರಿಂದ ಎಂಬ ಮಾತು ಇಂದು ಸತ್ಯವಾಗುತ್ತಿದ್ದು, ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಓದಿದ ಹಾಗೂ ಓದುತ್ತಿರುವವರಿಂದ ಕನ್ನಡದ ಬಗೆಗಿನ ಅಸಡ್ಡೆ ಕಂಡು ಬರುತ್ತಿರುವುದು ದುರದೃಷ್ಠಕರ ಸಂಗತಿಯಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.

ನಾಡು ಉಳಿಯಬೇಕೆಂದರೆ ಬಾಷೆ ಉಳಿಯಬೇಕು, ಬಾಷೆ ಉಳಿಯಬೇಕೆಂದರೆ ನಾವು ಪಡೆದುಕೊಂಡ ಜ್ಞಾನವನ್ನು ಕನ್ನಡಕ್ಕಾಗಿ ಮೀಸಲಿಡಬೇಕು. ನಮ್ಮ ಅದ್ಯತೆಯ ಬಾಷೆ ಮೊದಲು ಕನ್ನಡವಾಗಿ ನಂತರ ಇತರ ಬಾಷೆಗಳಾಗಿರಬೇಕು. ಕನ್ನಡದಲ್ಲಿ ಲಭ್ಯವಿಲ್ಲದ್ದನ್ನು ಲಭ್ಯ ಮಾಡಿಕೊಂಡು ಅದನ್ನು ಎಲ್ಲರಿಗೂ ತಲುಪಿಸುವ ಮೂಲಕ ನಮ್ಮ ಕೌಶಲ್ಯ ಹಾಗೂ ಸಾಮರ್ಥ್ಯ ವನ್ನು ಬೆಳೆಸಿಕೊಳ್ಳಬೇಕು. ಬೇರೆ ಬಾಷೆಗಳನ್ನು ಗೌರವಿಸಬೇಕು, ಕಲಿಯಬೇಕು, ಆದರೆ ನಮ್ಮ ಕನ್ನಡವನ್ನು ಸಾಂಸ್ಕೃತಿವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಆಡಳಿತಾತ್ಮಕವಾಗಿ ಉಳಿಸಿ ಬೆಳೆಸುವಲ್ಲಿ ಮುಂದಾಗಬೇಕಿದೆ ಎಂದು ಅವರು ಹೇಳಿದರು.

ಕನ್ನಡ ನೆಲ, ಜಲ, ಬಾಷೆ, ಸಂಸ್ಕೃತಿಗಳ ಉಳಿವಿಗಾಗಿ ಶ್ರಮಿಸಬೇಕು, ಕನ್ನಡ ಬಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಕನ್ನಡವನ್ನು ಆಡಳಿತ ಬಾಷೆಯನ್ನಾಗಿ ಮಾಡಿದೆ, ಇದರ ಕಟ್ಟುನಿಟ್ಟಿನ ಪಾಲನೆಯಾಗುವತ್ತ ಕರ್ನಾಟಕ ಸರಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಬಸವರಾಜ ಹೊರಟ್ಟಿ ನುಡಿದರು.

ಜಗತ್ತಿನೆಲ್ಲೆಡೆ ಇರುವ ಕನ್ನಡಿಗರು ಎಂದೆಂದಿಗೂ ಕನ್ನಡಿಗರಾಗಿ ಉಳಿದು ಕನ್ನಡ ಬಾಷೆಯನ್ನು ಉಳಿಸಿ ಬೆಳೆಸುವ ಸಂಕಲ್ಪದ ಭಾಗವಾಗಿ ಇಂದಿನ ಅಕ್ಕ ಕನ್ನಡ ಸಮ್ಮೇಳನ ಅಮೇರಿಕಾದಲ್ಲಿ ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಬಸವರಾಜ ಹೊರಟ್ಟಿ ಸಂತಸ ವ್ಯಕ್ತಪಡಿಸಿದರು.

ಕನ್ನಡ ಎಂದರೆ ಕೇವಲ ಬಾಷೆಯಲ್ಲ ಅದೊಂದು ಭಾವ ಸೇತು.ವಿಶ್ವದೆಲ್ಲೆಡೆ ಮನಸ್ಸು, ಸಂಸ್ಕೃತಿಗಳನ್ನು ಬೆಸೆಯುತ್ತಾ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ. ಕರ್ನಾಟಕದಲ್ಲೆ ಕನ್ನಡದ ಕಾರ್ಯಕ್ರಮಗಳ ಸಂಘಟನೆ ಕಷ್ಟಪಡಬೇಕಾದ ಸಂದರ್ಭದಲ್ಲಿ ಅಮೇರಿಕಾದಲ್ಲಿನ ಕನ್ನಡದ ಮನಸುಗಳು 1998ರಲ್ಲೆ ಒಟ್ಟಾಗಿ ಇಷ್ಟೊಂದು ಸಂಘಟಿತರಾಗಿ, ನಿರಂತರವಾಗಿ ನುಡಿ ಹಬ್ಬ ಆಚರಿಸುತ್ತಾ ಬಂದಿರುವುದು ಅಭಿಮಾನದ ಸಂಗತಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಉದ್ಯೋಗ ಅರಸಿ ಬಂದು ಇಲ್ಲಿಯೂ ತವರಿನ ಬಾಷೆ, ಸಂಸ್ಕೃತಿಯ ಬಗ್ಗೆ ಕಾಳಜಿ ಹೊಂದಿರುವುದು ಅಭಿನಂದನೀಯ. ವಿಶ್ವದೆಲ್ಲೆಡೆ ಇದೇ ರೀತಿ ಕನ್ನಡದ ಕಂಪು ಪಸರಿಸಲಿ. ಅಮೇರಿಕಾದಲ್ಲಿನ ಕನ್ನಡದ ಮನಸ್ಸುಗಳು ಕರುನಾಡಿನ ಬಾಷೆ, ಸಂಸ್ಕøತಿ ವೃದ್ದಿಗೆ ಕೈ ಜೋಡಿಸಿರುವಂತೆ ನಮ್ಮ ಕೃಷಿ ತಂತ್ರಜ್ಞಾನದ ಅಭಿವೃದ್ಧಿಗೂ ನೆರವಾಗಬೇಕು ಎಂದು ಚಲುವರಾಯಸ್ವಾಮಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿ, ಸುತ್ತೂರು ಮಠದ ಶ್ರೀ ದೇಶಿಕೇಂದ್ರ ಸ್ವಾಮಿ, ಶ್ರೀವಚನಾನಂದ ಸ್ವಾಮಿ, ಶಾಸಕರಾದ ಎಸ್.ಟಿ.ಸೋಮಶೇಖರ್, ತಮ್ಮಯ್ಯ, ಎ.ಸಿ.ಶ್ರೀನಿವಾಸ್, ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವರಾದ ಎಚ್.ಆಂಜನೇಯ, ರಾಣಿ ಸತೀಶ್, ವರ್ಜೀನಿಯಾ ಸೆನೆಟರ್ ಕೆನ್ ಅಕ್ಕ ಸಂಸ್ಥಾಪಕ ಅಧ್ಯಕ್ಷ ಡಾ.ಅಮರನಾಥ್ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ನಿವೃತ್ತ ಡಿಸಿಪಿ ಜಿ.ಎ.ಬಾವ ಸೇರಿದಂತೆ ಸಾಹಿತಿಗಳು, ಚಿಂತಕರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X