ಐಪಿಎಲ್ ಸಂಭ್ರಮಾಚರಣೆ ಕಾನೂನು ಚೌಕಟ್ಟಿನಲ್ಲಿರಲಿ : ಬಿ.ದಯಾನಂದ್

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
ಬೆಂಗಳೂರು : ಐಪಿಎಲ್ ಫೈನಲ್ನಲ್ಲಿ ಯಾವ ತಂಡ ಗೆದ್ದರೂ ಅಭಿಮಾನಿಗಳ ಸಂಭ್ರಮಾಚರಣೆಗಳು ಕಾನೂನಿನ ಚೌಕಟ್ಟಿನಲ್ಲಿ ಇರಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮನವಿ ಮಾಡಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು, ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆ ನಗರಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಬೆಟ್ಟಿಂಗ್ ಮತ್ತಿತರ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.
ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಬಾರದು. ಪಂದ್ಯ ಮುಗಿದ ಬಳಿಕವೂ ತಡರಾತ್ರಿಯವರೆಗೂ ಪಬ್, ಬಾರ್ ಅಂಡ್ ರೆಸ್ಟೋರೆಂಟ್ಗಳನ್ನು ತೆರೆದಿದ್ದರೆ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಬಿ.ದಯಾನಂದ್ ಎಚ್ಚರಿಕೆ ನೀಡಿದರು.
Next Story





