Belagavi | ನಿರಂತರ ವಿದ್ಯುತ್ ಕಡಿತ ಖಂಡಿಸಿ ರೈತರ ಪ್ರತಿಭಟನೆ; ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಆಕ್ರೋಶ

ಬೆಳಗಾವಿ : ನಿರಂತರ ವಿದ್ಯುತ್ ಕಡಿತದಿಂದ ಆಕ್ರೋಶಗೊಂಡ ರೈತರು ಅಥಣಿ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ವಿದ್ಯುತ್ ಸಮಸ್ಯೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದ್ದು, ನೀರಾವರಿ ಪಂಪ್‌ಗಳು ಕಾರ್ಯನಿರ್ವಹಿಸದ ಕಾರಣ ಜಮೀನುಗಳಿಗೆ ಸಮರ್ಪಕವಾಗಿ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆಗಳು ಒಣಗುವ ಆತಂಕ ಎದುರಾಗಿದೆ ಎಂದು ಹೇಳಿದರು.
ತಕ್ಷಣ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಇಲ್ಲದಿದ್ದರೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
Next Story




