Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೋದಿಯವರ ‘ಮನ್ ಕಿ ಬಾತ್' ರಾಜಕಾರಣಕ್ಕೂ,...

ಮೋದಿಯವರ ‘ಮನ್ ಕಿ ಬಾತ್' ರಾಜಕಾರಣಕ್ಕೂ, ಸೋನಿಯಾ ಗಾಂಧಿಯವರ ಜನಪರ ರಾಜಕಾರಣಕ್ಕೂ ವ್ಯತ್ಯಾಸ ಇದೆ : ಬಿ.ಕೆ.ಹರಿಪ್ರಸಾದ್

ಕೆಪಿಸಿಸಿ ಕಚೇರಿಯಲ್ಲಿ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕ ಬಿಡುಗಡೆ

ಸಮೀರ್ ದಳಸನೂರು\ವಾರ್ತಾಭಾರತಿಸಮೀರ್ ದಳಸನೂರು\ವಾರ್ತಾಭಾರತಿ17 Nov 2026 8:41 PM IST
share
ಮೋದಿಯವರ ‘ಮನ್ ಕಿ ಬಾತ್ ರಾಜಕಾರಣಕ್ಕೂ, ಸೋನಿಯಾ ಗಾಂಧಿಯವರ ಜನಪರ ರಾಜಕಾರಣಕ್ಕೂ ವ್ಯತ್ಯಾಸ ಇದೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಇಂದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್' ರಾಜಕಾರಣಕ್ಕೂ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜನಪರ ರಾಜಕಾರಣಕ್ಕೂ ಬಹಳ ವ್ಯತ್ಯಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಮಂಗಳವಾರ ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹೊಸದಿಲ್ಲಿಯಲಿ ಕುಳಿತು ಭಾಷಣ ಮಾಡುವುದಕ್ಕೂ, ಸಂಕಷ್ಟದಲ್ಲಿರುವ ಜನರ ಮನೆಬಾಗಿಲಿಗೆ ತೆರಳಿ ಅವರ ಕಣ್ಣೀರು ಒರೆಸುವುದಕ್ಕೂ ಬಹಳ ವ್ಯತ್ಯಾಸವಿದೆ. ಸೋನಿಯಾ ಗಾಂಧಿ ಅವರು ಜನರ ಬಳಿಗೆ ಹೋಗಿ ಅವರ ನೋವನ್ನು ಅರ್ಥಮಾಡಿಕೊಳ್ಳುತ್ತಿದ್ದ ನಾಯಕಿ ಎಂದು ತಿಳಿಸಿದರು.

ನನ್ನ ಸುಮಾರು ಐವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಸೋನಿಯಾ ಗಾಂಧಿ ಅವರೊಂದಿಗೆ 18ರಿಂದ 20 ವರ್ಷಗಳ ಕಾಲ ಅತ್ಯಂತ ನಿಕಟವಾಗಿ ಕೆಲಸ ಮಾಡುವ ಅವಕಾಶ ನನಗೆ ದೊರೆತಿದೆ. ಅವರೊಂದಿಗೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರವಾಸ ಮಾಡಿದ್ದೇನೆ. ಪಕ್ಷ ಸಂಘಟನೆ, ಚುನಾವಣೆಗಳು, ರೈತರ ಸಮಸ್ಯೆಗಳು, ಆದಿವಾಸಿಗಳ ಹಕ್ಕುಗಳು ಹಾಗೂ ಸಾಮಾನ್ಯ ಜನರ ಸಂಕಷ್ಟಗಳಿಗೆ ಅವರು ಸ್ಪಂದಿಸುವ ರೀತಿಯನ್ನು ಹತ್ತಿರದಿಂದ ನೋಡಿದ್ದೇನೆ. ರೈತರ ಆತ್ಮಹತ್ಯೆಗಳು ಸಂಭವಿಸಿದ ಪ್ರದೇಶಗಳಿಗೆ ಸೋನಿಯಾ ಗಾಂಧಿ ಅವರು ಖುದ್ದಾಗಿ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳ ನೋವನ್ನು ಆಲಿಸುತ್ತಿದ್ದರು. ರಾಜಸ್ಥಾನದ ಮರುಭೂಮಿಯ ತೀವ್ರ ಬಿಸಿಲಿನಲ್ಲಿಯೂ ರೈತರ ಮನೆಗಳಿಗೆ ತೆರಳಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತಿದ್ದರು ಎಂದು ಅವರು ನೆನೆದರು.

ಬಡವರ ಹಕ್ಕುಗಳನ್ನು ಘೋಷಣೆಗಳಾಗಿ ಉಳಿಸದೆ ಕಾನೂನುಗಳನ್ನಾಗಿ ರೂಪಿಸಿದ ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ಯುಪಿಎ ಸರಕಾರ ಜಾರಿಗೆ ತಂದ ಜನಪರ ಕಾನೂನುಗಳು ದೇಶದ ಸಾಮಾಜಿಕ ಹಾಗೂ ಆರ್ಥಿಕ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲುಗಳಾಗಿವೆ. ಗ್ರಾಮೀಣ ಪ್ರದೇಶದ ಬಡವರು ಹಾಗೂ ಕೃಷಿ ಕಾರ್ಮಿಕರಿಗೆ ವರ್ಷಕ್ಕೆ 100 ದಿನಗಳ ಉದ್ಯೋಗದ ಕಾನೂನುಬದ್ಧ ಖಾತರಿ ನೀಡುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಜಾರಿಗೆ ಬಂದದ್ದು, ಸೋನಿಯಾ ಗಾಂಧಿ ಅವರ ಬದ್ಧತೆಯಿಂದ. ಇದು ಕೇವಲ ಒಂದು ಸರಕಾರಿ ಯೋಜನೆಯಲ್ಲ. ದುಡಿಯುವ ಜನರ ಉದ್ಯೋಗದ ಹಕ್ಕಿಗೆ ಕಾನೂನಿನ ರಕ್ಷಣೆ ಒದಗಿಸಿದ ಐತಿಹಾಸಿಕ ನಿರ್ಧಾರ ಎಂದರು.

ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಆಡಳಿತದಲ್ಲಿ ಪಾರದರ್ಶಕತೆ, ಅರಣ್ಯ ಹಕ್ಕುಗಳ ಕಾಯ್ದೆಯ ಮೂಲಕ ಆದಿವಾಸಿಗಳ ಹಕ್ಕುಗಳಿಗೆ ಮಾನ್ಯತೆ, ಶಿಕ್ಷಣದ ಹಕ್ಕು ಕಾಯ್ದೆಯ ಮೂಲಕ ಮಕ್ಕಳ ಶಿಕ್ಷಣಕ್ಕೆ ಕಾನೂನುಬದ್ಧ ರಕ್ಷಣೆ ಹಾಗೂ ಆಹಾರ ಭದ್ರತಾ ಕಾಯ್ದೆಯ ಮೂಲಕ ಬಡವರ ಆಹಾರದ ಹಕ್ಕಿಗೆ ಭದ್ರತೆ ಒದಗಿಸುವಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಈ ಕಾನೂನುಗಳನ್ನು ಜಾರಿಗೆ ತರುವಾಗ ನಮ್ಮ ಪಕ್ಷದೊಳಗಿನಿಂದಲೂ ವಿರೋಧ ವ್ಯಕ್ತವಾಗಿತ್ತು. ಉದ್ಯೋಗ ಖಾತರಿ ಯೋಜನೆಯಿಂದ ಕೃಷಿ ಕೆಲಸಗಳಿಗೆ ಕಾರ್ಮಿಕರು ಸಿಗುವುದಿಲ್ಲ ಎಂದು ಕೆಲವರು ಆಕ್ಷೇಪಿಸಿದ್ದರು. ಮಾಹಿತಿ ಹಕ್ಕು ಕಾಯ್ದೆಯಿಂದ ಆಡಳಿತಕ್ಕೆ ತೊಂದರೆಯಾಗುತ್ತದೆ ಎಂದೂ ಹೇಳಿದ್ದರು. ಆದರೆ ಸೋನಿಯಾ ಗಾಂಧಿ ಅವರು ಬಡವರ ಹಿತದ ವಿಚಾರದಲ್ಲಿ ಹಿಂದೆ ಸರಿಯಲಿಲ್ಲ. ವಿರೋಧ ಎಷ್ಟೇ ಬಂದರೂ ದುರ್ಬಲ ವರ್ಗಗಳ ಪರವಾಗಿ ನಿಲ್ಲುವ ರಾಜಕೀಯ ಧೈರ್ಯ ಅವರಲ್ಲಿತ್ತು ಎಂದು ಅವರು ಹೇಳಿದರು.

ಸೋನಿಯಾ ಗಾಂಧಿ ಅವರ ಬದುಕು ಸಾಮಾನ್ಯವಾದ ಬದುಕಲ್ಲ. ಸಂಜಯ್ ಗಾಂಧಿ ಅವರ ಅಕಾಲಿಕ ಮರಣ, ತಮ್ಮ ಅತ್ತೆ ಇಂದಿರಾ ಗಾಂಧಿ ಅವರ ಹತ್ಯೆ, ತಮ್ಮ ಪತಿ ರಾಜೀವ್ ಗಾಂಧಿ ಅವರ ಭೀಕರ ಹತ್ಯೆ ಸೇರಿದಂತೆ ಒಂದರ ಮೇಲೊಂದು ದುರಂತಗಳನ್ನು ಎದುರಿಸಿದ ಮಹಿಳೆ ಅವರು. ಇಷ್ಟೆ ಲ್ಲ ನೋವು, ಸಂಕಟಗಳನ್ನು ಅನುಭವಿಸಿದ ನಂತರವೂ ದೇಶವನ್ನು ತೊರೆದು ಹೋಗದೆ, ಕಾಂಗ್ರೆಸ್ ಪಕ್ಷವನ್ನು ಉಳಿಸುವ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡರು. ವೈಯಕ್ತಿಕ ನೋವನ್ನು ಮೀರಿ ದೇಶದ ಹಿತಕ್ಕಾಗಿ ನಿಂತ ಅವರ ಮನೋಬಲ, ತ್ಯಾಗ ಹಾಗೂ ಧೈರ್ಯಕ್ಕೆ ಸರಿಸಾಟಿಯಿಲ್ಲ ಎಂದು ಅವರು ತಿಳಿಸಿದರು.

ಸೋನಿಯಾ ಗಾಂಧಿ ಅವರು ನಮಗೆ ಕಲಿಸಿಕೊಟ್ಟಿರುವುದು ಅಧಿಕಾರಕ್ಕಾಗಿ ರಾಜಕಾರಣ ಮಾಡುವುದನ್ನಲ್ಲ.ಬದಲಾಗಿ, ಸಿದ್ಧಾಂತ, ದೇಶದ ಏಕತೆ, ಸಾಮಾಜಿಕ ನ್ಯಾಯ ಹಾಗೂ ದುರ್ಬಲ ವರ್ಗಗಳ ಹಕ್ಕುಗಳಿಗಾಗಿ ಹೋರಾಡುವುದನ್ನು. ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದಾಗ ಅದನ್ನು ಉಳಿಸಿ, ದೇಶದಲ್ಲಿ ಸದೃಢವಾಗಿ ನಿಲ್ಲುವಂತೆ ಮಾಡಿದ ಸೋನಿಯಾ ಗಾಂಧಿ ಅವರ ಕೊಡುಗೆಯನ್ನು ಯಾವ ಕಾಂಗ್ರೆಸ್ ಕಾರ್ಯಕರ್ತನೂ ಮರೆಯಬಾರದು. ಅವರ ತ್ಯಾಗ ಹಾಗೂ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹರಿಪ್ರಸಾದ್ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಮಾಜಿ ಶಾಸಕಿ ಸೌಮ್ಯಾರೆಡ್ಡಿ ಸೇರಿದಂತೆ ಪ್ರಮುಖರು ಇದ್ದರು.

ವೇದಿಕೆಯಲ್ಲಿಯೇ 880 ರೂ., ಕೊಟ್ಟು ಪುಸ್ತಕ ಖರೀದಿಸಿದ ಸಚಿವ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕವನ್ನು 880 ರೂಪಾಯಿ ನೀಡಿ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಖರೀದಿಸುವ ಮೂಲಕ ಗಮನ ಸೆಳೆದರು. ಈ ವೇಳೆ ಅವರು 1 ಸಾವಿರ ಪುಸ್ತಕಗಳನ್ನು ಖರೀದಿಸಿ ತಮ್ಮ ಮತಕ್ಷೇತ್ರ ದೇವನಹಳ್ಳಿ ಹಂಚಿಕೆ ಮಾಡಲಾಗುವುದು ಎಂದು ಪ್ರಕಟಿಸಿದರು.

ಬಳಿಕ ಮಾತನಾಡಿದ ಅವರು, ಸೋನಿಯಾ ಗಾಂಧಿಯವರ ಈ ಆತ್ಮಕಥನ ಪುಸ್ತಕ ಬಿಡುಗಡೆ ಮಾಡಿದ್ದು ಪ್ರತಿಯೊಬ್ಬರೂ ಈ ಪುಸ್ತಕ ತೆಗೆದು ಕೊಂಡು ಓದಬೇಕು. ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Tags

KPCC office
share
ಸಮೀರ್ ದಳಸನೂರು\ವಾರ್ತಾಭಾರತಿ
ಸಮೀರ್ ದಳಸನೂರು\ವಾರ್ತಾಭಾರತಿ

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X