Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ರಾಷ್ಟ್ರೀಯ ಪರೀಕ್ಷಾ...

Bengaluru | ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರದ್ದತಿ, ಸಾರ್ವಜನಿಕ ಶಿಕ್ಷಣ ಉಳಿವಿಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ25 July 2026 3:50 PM IST
share
Bengaluru | ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರದ್ದತಿ, ಸಾರ್ವಜನಿಕ ಶಿಕ್ಷಣ ಉಳಿವಿಗೆ ಆಗ್ರಹಿಸಿ ಧರಣಿ

ಬೆಂಗಳೂರು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಎನ್.ಟಿ.ಎ. ರದ್ದಾಗಬೇಕು ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಲು ಆಗ್ರಹಿಸಿ AIDSO, AISF, AISA ಸಂಘಟನೆಗಳಿಂದ ಇಂದು ಫ್ರೀಡಂ ಪಾರ್ಕಿನಲ್ಲಿ ರಾಜ್ಯದ ವಿದ್ಯಾರ್ಥಿಗಳು ಧರಣಿ ನಡೆಯಿತು.

ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿ ಮಾತನಾಡಿದ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ, ಯಾವುದೇ ಸರಕಾರವಾದರೂ ಆ ವಿದ್ಯಾರ್ಥಿಗಳ ಸಮಸ್ಯೆಯನ್ನು ಕೇಳಿ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿತ್ತು. ಆದರೆ ಆ ಮಕ್ಕಳನ್ನು ಮನುಷ್ಯರ ರೀತಿಯೂ ಭಾವಿಸದೆ ಲಾಟಿಗೆ ಮೊಳೆ ಹಾಕಿ ಹೊಡೆದಿರುವುದು ಅಮಾನವೀಯ ಎಂದರು.

ನಮ್ಮ ಸರ್ಕಾರ ಮತ್ತು ವ್ಯವಸ್ಥೆ ಎಲ್ಲಾ ಇರುವುದು ಜನರಿಗಾಗಿ. ಜನರ ಸಮಸ್ಯೆಗಳನ್ನು ಆಲಿಸಿ, ಅವರ ಬೇಡಿಕೆಗಳನ್ನು ಈಡೇರಿಸಬೇಕಿರುವುದು ಸರ್ಕಾರದ ಜವಾಬ್ದಾರಿ. ನಿಮ್ಮ ಹೋರಾಟದೊಂದಿಗೆ ಸದಾ ನಿಮ್ಮೊಂದಿಗೆ ನಾನಿದ್ದೇನೆ ಎಂದು ಹೇಳಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ, ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಈ ದೇಶದ ವಿದ್ಯಾರ್ಥಿಗಳು ಯುವಜನರು ಹೋರಾಟದ ಅಲೆಯನ್ನು ಎಬ್ಬಿಸಿದ್ದಾರೆ. ಯಾರು, ಈ ದೇಶದ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಮುಳುಗಿ ಹೋಗಿದ್ದಾರೆ ಎಂದು ಹೇಳುವ ಈ ಸಮಾಜದಲ್ಲಿ, ಆ ವಿದ್ಯಾರ್ಥಿಗಳೇ ದೇಶ ವ್ಯಾಪ್ತಿ ಹೋರಾಟವನ್ನು ಕಟ್ಟುತ್ತಿದ್ದಾರೆ. ಈ ಸಮಯದಲ್ಲಿ ನಮ್ಮ ಪ್ರಧಾನ ಮಂತ್ರಿ ಒಂದು ವಿಡಿಯೋ ಮಾಡುವ ಮುಖಾಂತರ ಅಯ್ಯೋ ಹೀಗೆ ಆಗಬಾರದಿತ್ತು ಎಂದು ಹೇಳಿದ್ದಾರೆ ಹೊರತು, ಈ ಸಮಸ್ಯೆಯಿಂದ ಪ್ರಾಣ ಕಳೆದುಕೊಂಡ 21 ಜನ ವಿದ್ಯಾರ್ಥಿಗಳ ಬಗ್ಗೆ, ಸಮಸ್ಯೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಬಗ್ಗೆ, ಎನ್. ಟಿ. ಎ ರದ್ದುಗೊಳಿಸುವ ನಿಟ್ಟಿನಲ್ಲೂ ಒಂದು ಮಾತನ್ನು ಆಡಿಲ್ಲ. ಈ ಅನ್ಯಾಯವನ್ನು ಕುರಿತು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು ಎಂದು ಪಟ್ಟಕಟ್ಟಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅಥವಾ ಪ್ರಧಾನ ಮಂತ್ರಿಯವರು ರಾಜೀನಾಮೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಅಂತಿಮವಾಗಿ ಶಿಕ್ಷಣದ ವ್ಯಾಪಾರಿಕರಣವನ್ನು ಬಗ್ಗು ಬಡಿಯುವವರೆಗೂ ಈ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರರಾದ ಉಗ್ರ ನರಸಿಂಹೇಗೌಡ ಮಾತನಾಡಿ, ಜೆ.ಪಿ. ಚಳವಳಿಯ ನಂತರ ಇದೇ ಮೊದಲ ಬಾರಿಗೆ ಇಡೀ ದೇಶದಲ್ಲಿ ಇಂತಹ ಬೃಹತ್ ಹೋರಾಟ ಬುಗಿಲೆದ್ದಿದೆ. ಇದಕ್ಕೆ ಕಾರಣವಾಗಿರುವ ವಿದ್ಯಾರ್ಥಿ ಹೋರಾಟಗಾರರಿಗೆ ಇಡೀ ದೇಶದ ಜನರ ಪರವಾಗಿ ಅಭಿನಂದನೆ ತಿಳಿಸುತ್ತೇನೆ. ಜ್ಯೋತಿಭಾ ದಂಪತಿ ಆರಂಭಿಸಿದ ಸಾರ್ವಜನಿಕ ಶಿಕ್ಷಣ ಇಂದು ಕೇವಲ ಉಳ್ಳವರ ಪರವಾಗಿ ಬಿಟ್ಟಿದೆ. ಇದನ್ನು ಬದಲಾಯಿಸುವುದೇ ನಮ್ಮೆಲ್ಲರ ಮುಖ್ಯ ಗುರಿಯಾಗಬೇಕಿದೆ ಎಂದರು.

ರಾಜ್ಯದ ವಿವಿಧ ಯುವ ಮತ್ತು ಮಹಿಳಾ ಸಂಘಟನೆಗಳ ನಾಯಕರು ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದರು.

AIDSO ರಾಜ್ಯಾಧ್ಯಕ್ಷ ಅಶ್ವಿನಿ ಕೆ. ಎಸ್., AISF ನ ವೀಣಾ, AISA ರಾಜ್ಯ ನಾಯಕರಾದ ಆರಾತ್ರಿಕ ಹಾಗೂ ನೂರಾರು ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿ ಜನತೆ ಭಾಗವಹಿಸಿದ್ದರು.

Tags

ProtestAbolition of NTASave Public Education
share
ವಾರ್ತಾಭಾರತಿ
ವಾರ್ತಾಭಾರತಿ
Next Story
X