Bengaluru | ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ರೌಡಿಶೀಟರ್ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು : ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಧುಸೂದನ್ (33) ಎಂದು ಗುರುತಿಸಲಾಗಿದೆ.
ಸಹಕಾರ ನಗರದ ಜಿಕೆವಿಕೆ ರಸ್ತೆಯ ಬಳಿ ಆರೋಪಿಯು ಕೈಯಲ್ಲಿ ಲಾಂಗ್ ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಬಗ್ಗೆ ಸಿಸಿಬಿಯ ಸಂಘಟಿತ ಅಪರಾಧ ದಳಕ್ಕೆ (ಪೂರ್ವ) ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಆತ ತನ್ನ ಮನೆಯಲ್ಲಿಯೂ ಮಾರಕಾಸ್ತ್ರಗಳನ್ನು ಇಟ್ಟಿರುವುದಾಗಿ ಬಾಯ್ಬಿಟ್ಟಿದ್ದಾನೆ. ತಕ್ಷಣವೇ ಕೊಡಿಗೆಹಳ್ಳಿ ಪೊಲೀಸರು ಹಾಗೂ ಸಿಸಿಬಿ ತಂಡ ಜಂಟಿಯಾಗಿ ದಾಳಿ ನಡೆಸಿ, ಆತನ ಮನೆಯಲ್ಲಿದ್ದ ಒಟ್ಟು 8 ಅಕ್ರಮ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story




