Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ...

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ

100 ಹೊಸ ಎಲೆಕ್ಟ್ರಿಕ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Dec 2023 1:08 PM IST
share
ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ಬೆಂಗಳೂರು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದರು.

ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಸಿಎಂ ಪ್ರಶ್ನಿಸಿದರು.

ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಸರ್ಕಾರದ ಜನೋಪಯೋಗಿ ಯೋಜನೆಯ ಪರಿಣಾಮಕಾರಿ ಫಲಿತಾಂಶವನ್ನು ವಿವರಿಸಿದರು.

ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.

ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X