ಗುತ್ತಿಗೆದಾರರಿಗೆ ಬಾಕಿ ಮೊತ್ತವನ್ನು ಪಾವತಿ ಮಾಡಲು ಬಿಬಿಎಂಪಿ ಮುಖ್ಯ ಅಯುಕ್ತ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ಕಸ ನಿರ್ವಹಣೆ ಮಾಡುವ ಗುತ್ತಿಗೆದಾರರಿಗೆ ಹಣ ಪಾವತಿ ಬಾಕಿ ಇದ್ದು, ಜಂಟಿ ಆಯುಕ್ತರಿಗೆ ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಗುತ್ತಿಗೆದಾರರಿಗೆ ಬಾಕಿ ಮೊತ್ತವನ್ನು ಪಾವತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಅಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಸ ವಿಲೇವಾರಿ ಗುತ್ತಿಗೆದಾರರು ಜಿಎಸ್ಟಿ ವಿನಾಯಿತಿಯನ್ನು ಕ್ಲೇಮ್ ಮಾಡಿಲ್ಲ. ಹೀಗಾಗಿ ಬಾಕಿ ಉಳಿದುಕೊಂಡಿದೆ. ನಿಯಮಾವಳಿಗಳಂತೆ ಬಾಕಿ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿ ಮಾಡಲಾಗುತ್ತದೆ ಎಂದರು.
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 15ದಿನಗಳ ಕಾಲ ಸಮಯಾವಕಾಶ ನೀಡಿದ್ದಾರೆ. ಅದರಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ರಸ್ತೆಗುಂಡಿ ಮುಚ್ಚಲು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
Next Story