Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಎಡ’ ಪರ್ಯಾಯ ರಾಜಕೀಯ ರಂಗ ರೂಪಿಸಲು...

‘ಎಡ’ ಪರ್ಯಾಯ ರಾಜಕೀಯ ರಂಗ ರೂಪಿಸಲು ಸಿಪಿಎಂ ತೀರ್ಮಾನ : ಡಾ.ಪ್ರಕಾಶ್ ಕೆ.

ವಾರ್ತಾಭಾರತಿವಾರ್ತಾಭಾರತಿ3 Jan 2025 11:35 PM IST
share
‘ಎಡ’ ಪರ್ಯಾಯ ರಾಜಕೀಯ ರಂಗ ರೂಪಿಸಲು ಸಿಪಿಎಂ ತೀರ್ಮಾನ : ಡಾ.ಪ್ರಕಾಶ್ ಕೆ.

ಬೆಂಗಳೂರು: ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದ) ತೀರ್ಮಾನಿಸಿದೆ ಎಂದು ಸಿಪಿಎಂನ ರಾಜ್ಯ ಕಾರ್ಯದರ್ಶಿ ಡಾ.ಪ್ರಕಾಶ್ ಕೆ. ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯ ಸರಕಾರವೂ ಮೋದಿ ಸರಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದರು.

ಸರಕಾರಗಳ ನೀತಿಗಳಿಂದ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರಿಕ ಸೇವೆಗಳ ದುಬಾರಿಯಿಂದ ಜನ ತತ್ತರಿಸಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಇತ್ತೀಚೆಗೆ ನಡೆದ ಸಿಪಿಐ-ಎಂನ ರಾಜ್ಯ ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ ಎಂದು ಡಾ.ಪ್ರಕಾಶ್ ಕೆ. ಹೇಳಿದರು.

ಆರೆಸ್ಸೆಸ್ ಮತ್ತು ಅದರ ಪರಿವಾರವು ಧಾರ್ಮಿಕ ಹಾಗೂ ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರಕಾರವು ವಿಫಲವಾಗಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ-ಎಂನ ಕಾರ್ಯಕರ್ತರು ಮುಂಚೂಣಿಯಲ್ಲಿರಿ ಎಂದು ಡಾ.ಪ್ರಕಾಶ್ ಕೆ. ಕರೆ ನೀಡಿದರು.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ ಫೆಬ್ರವರಿ 10 ರಂದು ನಡೆಯುವ ಪಾದಯಾತ್ರೆಗೆ ಬೆಂಬಲಿಸಲು ಪಕ್ಷವು ತೀರ್ಮಾನಿಸಿದೆ. ದಲಿತರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ ಹೋರಾಟ ರೂಪಿಸಲು ಪಕ್ಷವು ನಿರ್ಣಯಿಸಿದೆ ಎಂದು ಡಾ.ಪ್ರಕಾಶ್ ಕೆ. ತಿಳಿಸಿದರು.

ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ತೀರ್ಮಾನಿಸಿದೆ. ರಾಜ್ಯದ ಎಡಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಡಾ.ಪ್ರಕಾಶ್ ಕೆ. ಕರೆ ಹೇಳಿದರು.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಎಂ ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎಚ್ಚರಿಸಬೇಕು ಎಂದು ಡಾ.ಪ್ರಕಾಶ್ ಕೆ. ಕರೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಪಿಎಂನ ಗೋಪಾಲಕೃಷ್ಣ ಹರಳಹಳ್ಳಿ, ಸೈಯದ್ ಮುಜೀಬ್, ಎಂ.ಪಿ. ಮುನಿವೆಂಕಟಪ್ಪ, ಕೆ. ಮಹಾಂತೇಶ್, ಚಂದ್ರಪ್ಪ ಹೋಸ್ಕೇರಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X