Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಬಯೋ ಇನೋವೇಷನ್...

ಬೆಂಗಳೂರು | ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 100 ಕೋಟಿ ರೂ.ಗೂ ಹೆಚ್ಚು ನಷ್ಟ

ವಾರ್ತಾಭಾರತಿವಾರ್ತಾಭಾರತಿ15 Jan 2025 3:54 PM IST
share
ಬೆಂಗಳೂರು | ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 100  ಕೋಟಿ ರೂ.ಗೂ ಹೆಚ್ಚು ನಷ್ಟ

ಬೆಂಗಳೂರು : ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಅಗ್ನಿ ಅವಢಕ್ಕೆ ಮಿಥೆನಾಲ್ ಸೋರಿಕೆ ಎನ್ನುವ ಅಂಶ ಮೇಲ್ನೋಟಕ್ಕೆ ಗೊತ್ತಾಗಿದ್ದು, ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.

ಘಟನೆ ಸಂಬಂಧ ಬುಧವಾರ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನಂತರ, ಸಂತ್ರಸ್ತರಾಗಿರುವ ಸ್ಟಾರ್ಟ್‌ಅಪ್‌ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರಕಾರದಿಂದ ನೀಡಬಹುದಾದ ನೆರವು ಹಾಗೂ ಪರಿಹಾರದ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು.

ಈ ಕುರಿತು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ‘ಮಿಥೆನಾಲ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬುದು ಕಂಡು ಬಂದಿದೆ. ಒಂದು ಕಂಪೆನಿ ಸಂಪೂರ್ಣವಾಗಿ ನಾಶವಾಗಿದ್ದು, ಇತರೆ ಸೆಂಟರ್‌ಗಳು ಹಾನಿಗೊಳಗಾಗಿವೆ. ಆದರೆ, ಯಾರಿಗೂ ಪ್ರಾಣಹಾನಿಯಾಗಿಲ್ಲ’ ಎಂದು ಹೇಳಿದರು.

ಅಂದಾಜು 100 ಕೋಟಿ ರೂ. ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸುಮಾರು 60 ವಿವಿಧ ಕಂಪೆನಿಗಳು ಕೆಲಸ ಮಾಡುತ್ತಿದ್ದು, ಅದರಲ್ಲಿ 20 ಲ್ಯಾಬ್‍ಗಳಿಗೆ ಹಾನಿಯಾಗಿದೆ. ಮಿಥಾನಾಲ್ ಸಂಗ್ರಹಿಸಿಕೊಂಡಿದ್ದರು. ಘಟನೆ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಸಿ, ವರದಿ ನೀಡಲಿದ್ದಾರೆ ಎಂದು ತಿಳಿಸಿದರು.

ಸಭೆ: ಸಂತ್ರಸ್ತರಾಗಿರುವ ಸ್ಟಾರ್ಟ್‌ ಆಪ್ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಪ್ರಿಯಾಂಕ್ ಖರ್ಗೆ, ಅವಘಡದಲ್ಲಿ ಮೌಲ್ಯಯುತ ವಸ್ತುಗಳು ಸುಟ್ಟು ಭಸ್ಮವಾಗಿವೆ, ಕಂಪ್ಯೂಟರ್‌ಗಳಲ್ಲಿ ಸಂಗ್ರಹಿಸಿದ ಮಾಹಿತಿ, ಸಂಶೋಧನೆಗಳು ಹಾಳಾಗಿವೆ. ಸ್ಟಾರ್ಟ್ ಆಪ್‍ಗಳನ್ನು ಹಿಂದಿನ ಸ್ಥಿತಿಗೆ ತೆಗೆದುಕೊಂಡು ಹೋಗಲು ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಮನವಿ: ನೆಲಮಹಡಿ ಸೇರಿ ನಾಲ್ಕು ಅಂತಸ್ತಿನ ಕಟ್ಟಡದ 2ನೆ ಮಹಡಿಯಲ್ಲಿ ಬಿಬಿಸಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಬೆಳಗ್ಗೆ 5ಗಂಟೆಗೆ ಸೆಂಟರ್‌ನ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಿಬಿಸಿಯ ಸೆಂಟರ್‌ನಲ್ಲಿ ಸುಮಾರು 12 ಸಂಶೋಧನಾ ಪ್ರಯೋಗಾಲಯಗಳಿದ್ದು, ಇಲ್ಲಿ ಜೀವ ವಿಜ್ಞಾನ, ಆರೋಗ್ಯ, ಔಷಧಿ, ಜೈವಿಕ ಔಷಧಿ, ಕೃಷಿ, ಆಹಾರ, ಕೈಗಾರಿಕಾ ಜೈವಿಕ ತಂತ್ರಜ್ಞಾನ, ಜೈವಿಕ ಪರಿಸರ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಶೋಧನೆಗಳು ನಡೆಯುತ್ತಿದ್ದವು ಎಂಬ ಸಂಗತಿಯನ್ನು ಸಚಿವರಿಗೆ ತಿಳಿಸಿದ ಸ್ಟಾರ್ಟ್‍ಪ್‍ಗಳ ಪ್ರತಿನಿಧಿಗಳು ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X