Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು...

ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸುವ ನಾಯಕರಾಗಬೇಕು : ಪತ್ರಕರ್ತ ಮನೋಜ್ ಆಜಾದ್

ವಾರ್ತಾಭಾರತಿವಾರ್ತಾಭಾರತಿ22 Feb 2025 6:08 PM IST
share
ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸುವ ನಾಯಕರಾಗಬೇಕು : ಪತ್ರಕರ್ತ ಮನೋಜ್ ಆಜಾದ್

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆಂದು ಬಿಜೆಪಿಯ ಹಲವು ನಾಯಕರು ಹೇಳಿದ್ದರು ಮತ್ತು ಅಂತಹದೇ ಕುತಂತ್ರಗಳ್ನು ಮುಂದುವರೆಸಿದ್ದಾರೆ. ಆದುದರಿಂದ ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸುವ ನಾಯಕರಾಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿ ಹಾಗೂ ಪತ್ರಕರ್ತ ಮನೋಜ್ ಆಜಾದ್ ಕರೆ ನೀಡಿದ್ದಾರೆ.

ಶನಿವಾರ ನಗರದ ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರೀಯ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಚಿಂತಕ ಶಿವಸುಂದರ್ ರಚಿಸಿರುವ ‘ಸಂವಿಧಾನ ಮತ್ತು ಸಂಘಿಗಳ ಸುಳ್ಳು ಅಭಿಯಾನ’ ಕೃತಿ ಓದುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

ಸಮಾಜದಲ್ಲಿ ಶಾಂತಿ-ಸೌಹಾರ್ಧತೆಯಿಂದ ಜೀವಿಸಲು ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲರಾಗಿ ಬದುಕಲು, ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಂವಿಧಾನ ಅತ್ಯವಶ್ಯಕ. ಪ್ರತಿಯೊಂದು ಧರ್ಮವೂ ತಮ್ಮದೇ ಆದ ಧರ್ಮ ಗ್ರಂಥ ಹೊಂದಿದೆ. ಆದರೆ ಅದೆಲ್ಲವನ್ನೂ ಮೀರಿದ ಮತ್ತು ಎಲ್ಲ ಧರ್ಮದವರಿಗೂ ಅನ್ವಯಿಸುವ ಮಹಾಗ್ರಂಥವೇ ಸಂವಿಧಾನ. ಅದನ್ನು ರಕ್ಷಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಅಂಬೇಡ್ಕರ್‌ರ ನಿಜವಾದ ಅನುಯಾಯಿಗಳು ನಾವೇ ಎಂದು ಹೇಳುತ್ತಿರುವ ಸಂಘಪರಿವಾರದವರು, ಜನರನ್ನು ನಂಬಿಸುವ ಸಲುವಾಗಿ ಹಲವಾರು ಸುಳ್ಳುಗಳನ್ನು ಹೇಳುತ್ತಾ, ಅರ್ಧ ಸತ್ಯಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಿಂದುತ್ವದ ಬಗ್ಗೆ ಅಂಬೇಡ್ಕರ್‌ರಿಗೆ ಇದ್ದ ನಿಜವಾದ ಅಭಿಪ್ರಾಯಗಳನ್ನು ಮರೆಮಾಚಲು ಸಂವಿಧಾನ ವಿರೋಧಿ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಯುವಜನತೆ ಅಧ್ಯಯನ, ಸಂಶೋಧನೆಗಳ ಮೂಲಕ ನಿಜ ಏನೆಂದು ಅರ್ಥ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿವಸುಂದರ್ ರಚಿಸಿರುವ ಕೃತಿ ನೆರವಾಗಲಿದೆ ಎಂದು ಮನೋಜ್ ತಿಳಿಸಿದರು.

ಕೆವಿಎಸ್ ಪದಾಧಿಕಾರಿ ಗುರುಬಸವ ಮಾತನಾಡಿ, ಭಾರತದ ಸಂವಿಧಾನ ಇತರೇ ದೇಶಗಳ ಸಂವಿಧಾನದಂತಲ್ಲ. ಸ್ವಾತಂತ್ರ್ಯ ಪೂರ್ವ, ಸ್ವಾತಂತ್ರದ ಸಂದರ್ಭದಲ್ಲಿ ಹಾಗೂ ನಂತರದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಭಾರತದ ಇತಿಹಾಸವನ್ನು ಮತ್ತು ಅಂಬೇಡ್ಕರ್ ಜೀವನ ಚರಿತ್ರೆಯನ್ನು ಓದಿಕೊಳ್ಳಬೇಕು. ಇಲ್ಲವಾದರೆ ಸಂವಿಧಾನದ ಮಹತ್ವ ತಿಳಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ವೇಳೆಯಲ್ಲಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಸುಗುಣಾ, ನಾಗಪ್ಪ, ಗೌತಮ್, ನಾಗರಾಜ, ಅಭಿ, ಶ್ರೀನಿವಾಸ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X