ಬೆಂಗಳೂರು | ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ : ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ಯುವತಿ

ಬೆಂಗಳೂರು : ತನ್ನ ದ್ವಿಚಕ್ರ ವಾಹನಕ್ಕೆ ಆಟೋ ತಾಗಿತು ಎಂಬ ಕಾರಣಕ್ಕೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನಗೊಳಿಸಿದ ಬಿಹಾರ ಮೂಲದ ಯುವತಿಯು ಬೆಳ್ಳಂದೂರು ಠಾಣಾ ಪೊಲೀಸರೆದುರು ತಪ್ಪೊಪ್ಪಿಕೊಂಡು ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.
ಮೇ 30ರಂದು ಬೆಳ್ಳಂದೂರು ವೃತ್ತದಲ್ಲಿ ಘಟನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಯುವತಿಗೆ ಬೆಳ್ಳಂದೂರು ಠಾಣಾ ಪೊಲೀಸರು ನೋಟೀಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಠಾಣೆಗೆ ಬಂದ ಯುವತಿ ಮತ್ತು ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮಿಸಿ ತಪ್ಪಾಯಿತು ಎಂದು ಕೇಳಿಕೊಂಡಿದ್ದಾರೆ.
ಕೋಪದಲ್ಲಿ ಚಪ್ಪಲಿಯಿಂದ ಹೊಡೆದಿದ್ದೇನೆ ಎಂದು ತಪ್ಪೊಪ್ಪಿಕೊಂಡು ಚಾಲಕರಿಗೆ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಠಾಣೆ ಜಾಮೀನಿನ ಮೇಲೆ ಯುವತಿಯನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story







