ಬೆಂಗಳೂರು | ‘ಮಹಿಳೆಯ ಹತ್ಯೆ’ ಕಸದ ಲಾರಿಯಲ್ಲಿ ಮೃತದೇಹವಿಟ್ಟು ಆರೋಪಿಗಳು ಪರಾರಿ

ಸಾಂದರ್ಭಿಕ ಚಿತ್ರ
ಬೆಂಗಳೂರು : ಮಹಿಳೆಯೊಬ್ಬರನ್ನು ಹತ್ಯೆಗೈದು ಮೃತದೇಹವನ್ನು ಕಸದ ಲಾರಿಯಲ್ಲಿ ಹಾಕಿರುವ ಘಟನೆ ಇಲ್ಲಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.
ಜೂ.28ರ ಶನಿವಾರ ತಡರಾತ್ರಿ ಆಟೋ ರಿಕ್ಷಾದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ತಂದಿರುವ ಆರೋಪಿಗಳು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಸದ ಲಾರಿಯಲ್ಲಿರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸಿದ್ದು, ತನಿಖೆ ಚುರುಕುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಮೃತದೇಹ ಪತ್ತೆಯಾದ ಸ್ಥಳದ ಅಕ್ಕಪಕ್ಕದ ರಸ್ತೆಗಳಲ್ಲಿನ ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕುತ್ತಿದ್ದು, ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





