ಬೆಂಗಳೂರು | 2 ಪಬ್ಗಳ ಮೇಲೆ ಸಿಸಿಬಿ ದಾಳಿ: ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳ ಬಂಧನ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್ಆರ್ಆರ್ಒ) ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ನಗರದ 2 ಪಬ್ಗಳ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ನಗರದಲ್ಲಿ ಐಷಾರಾಮಿ ಟೆಕ್ನೋ ಪಾರ್ಟಿಗಳಿಗೆ ವಿವಿಧ ರೀತಿಯ ಡ್ರಗ್ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜು.12ರ ಶನಿವಾರ ರಾತ್ರಿ ನಗರದ ಎಂ.ಜಿ.ರಸ್ತೆ ಮತ್ತು ಕೋರಮಂಗಲ ಸೇರಿ 2 ಪಬ್ಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ದಾಳಿ ವೇಳೆ ಪಬ್ಗಳಲ್ಲಿ ಡಿಜೆ ಆಪರೇಟರ್ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದು, ಆರೋಪಿಗಳು ಪಬ್ಗಳಿಂದಲೇ ಯುವಕರನ್ನು ಸಂಪರ್ಕ ಮಾಡಿ ಡ್ರಗ್ಸ್ ರವಾನಿಸುತ್ತಿದ್ದರು. ಅಷ್ಟೇ ಅಲ್ಲದೇ ಹೊರಗಿನ ಐಷಾರಾಮಿ ಪಾರ್ಟಿಗಳಿಗೂ ಡ್ರಗ್ಸ್ ಸರಬರಾಜು ಮಾಡುತ್ತಿರುವುದಾಗಿ ಗೊತ್ತಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
Next Story





