ಬೆಂಗಳೂರು | ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.21 : ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಮೃತ ಕಾರ್ಮಿಕ. ಕಳೆದ ಎಂಟು ವರ್ಷಗಳಿಂದ ಬೀರಪ್ಪ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Next Story





