ಬೆಂಗಳೂರು | ಮ್ಯಾನ್‍ಹೋಲ್‍ಗೆ ಇಳಿದ ಇಬ್ಬರು ಕಾರ್ಮಿಕರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು : ಮ್ಯಾನ್‍ಹೋಲ್‍ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರು ನಗರದ ನೀಲಸಂದ್ರದ ಜಾನ್ಸನ್ ಮಾರ್ಕೆಟ್ ಪ್ರದೇಶದ ಬಳಿ ಶುಕ್ರವಾರ ವರದಿಯಾಗಿದೆ.
ಶುಕ್ರವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ವಿಷಾನಿಲದ ದುರ್ವಾಸನೆಗೆ ಕಾರ್ಮಿಕರು ಮ್ಯಾನ್‍ಹೋಲ್ ಸಿಲುಕಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಮ್ಯಾನ್‍ಹೋಲ್‍ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪೌರ ಕಾರ್ಮಿಕರನ್ನು ಸ್ಥಳೀಯರು ಕೂಡಲೇ ಮೇಲೆತ್ತಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Next Story





