Channapatna| ಹೆಡ್ ಕಾನ್ಸ್ಟೇಬಲ್ ಅನುಮಾನಾಸ್ಪದ ಸಾವು; ಕೆರೆಯಲ್ಲಿ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ ಎಂಬವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.
ಸೋಮವಾರ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಅವರು, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಮಂಗಳವಾರ ಬೆಳಗ್ಗೆ ಕೆರೆಯಲ್ಲಿ ಲಕ್ಷ್ಮಣ್ ಶವವಾಗಿ ಪತ್ತೆಯಾಗಿದ್ದಾರೆ. ಕೆರೆ ಪಕ್ಕದಲ್ಲೇ ಅವರ ಬೈಕ್ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ಕಾಲು ಜಾರಿಬಿದ್ದಿರಬಹುದಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
Next Story





