ಬೆಂಗಳೂರು | ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ 190 ಟನ್ ಯೂರಿಯಾ ವಶ

ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದ್ದ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಸುಮಾರು 190 ಟನ್ ಯೂರಿಯಾವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ನಗರದ ಹೊರವಲಯದಲ್ಲಿರುವ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ದಾಸ್ತಾನು ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಕಾಳಸಂತೆಯಲ್ಲಿ 200 ರೂ. ಯೂರಿಯಾವನ್ನು 1,500 ರೂ.ಗೆ ಮಾರಾಟ ಮಾಡಲಾಗುತ್ತಿತ್ತು.
Next Story





