ಬೆಂಗಳೂರು | ಆರನೆ ಮಹಡಿಯಿಂದ ಕೆಳಗೆ ಬಿದ್ದು ಬಯೋಕಾನ್ ಕಂಪೆನಿಯ ಉದ್ಯೋಗಿ ಸಾವು

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯ 2ನೆ ಹಂತದಲ್ಲಿರುವ ಬಯೋಕಾನ್ ಕಂಪೆನಿಯ ಉದ್ಯೋಗಿ ಆರನೆ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಅನಂತಕುಮಾರ್ ಮೃತಪಟ್ಟಿದ್ದು, ಅವರು ಗೆಳತಿಯೊಂದಿಗೆ ಮಾತನಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.
ಅನಂತಕುಮಾರ್ ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಕಂಪೆನಿಯ ಕೆಫೆಟೇರಿಯಾ ಭಾಗದ ಬಾಲ್ಕನಿಯಲ್ಲಿ ನಿಂತು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಆರನೆ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
Next Story





