Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಥಣಿಸಂದ್ರದಲ್ಲಿ ಮನೆಗಳು...

Bengaluru | ಥಣಿಸಂದ್ರದಲ್ಲಿ ಮನೆಗಳು ಧ್ವಂಸ: ಸರಕಾರದ ನಡೆಗೆ ಮುಸ್ಲಿಮ್ ಯುನೈಟೆಡ್ ಫ್ರಂಟ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Jan 2026 11:48 PM IST
share
Bengaluru | ಥಣಿಸಂದ್ರದಲ್ಲಿ ಮನೆಗಳು ಧ್ವಂಸ: ಸರಕಾರದ ನಡೆಗೆ ಮುಸ್ಲಿಮ್ ಯುನೈಟೆಡ್ ಫ್ರಂಟ್ ಆಕ್ರೋಶ


ಬೆಂಗಳೂರು : ಥಣಿಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಬಳಸಿ ಮನೆಗಳನ್ನು ಧ್ವಂಸ ಮಾಡುವ ಮೂಲಕ ಬಡವರ ಸೂರನ್ನು ಕಸಿದುಕೊಂಡಿರುವ ರಾಜ್ಯ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಮುಸ್ಲಿಮ್ ಯುನೈಟೆಡ್ ಫ್ರಂಟ್ ಆಕ್ರೋಶ ವ್ಯಕ್ತಪಡಿಸಿದೆ.

ಸರಕಾರಕ್ಕೆ ಸ್ವಲ್ಪವಾದರೂ ಮಾನವೀಯತೆ ಇದ್ದಿದ್ದರೆ, ಥಣಿಸಂದ್ರದ ನಿವಾಸಿಗಳನ್ನು ಪ್ರಾಣಿಗಳಂತೆ ನಡೆಸಿಕೊಳ್ಳುತ್ತಿರಲಿಲ್ಲ. ಈ ಭೂಮಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಸೇರಿದ್ದರೆ, ಅಲ್ಲಿನ ನಿವಾಸಿಗಳಿಗೆ ಸುಳ್ಳು ಭರವಸೆಗಳನ್ನು ನೀಡಿ ಭೂಮಿಯನ್ನು ನೋಂದಾಯಿಸಲು ಸಹಾಯ ಮಾಡಿದ ಅಧಿಕಾರಿಗಳು ಮತ್ತು ರಾಜಕೀಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು ಎಂದು ಮುಸ್ಲಿಮ್ ಯುನೈಟೆಡ್ ಫ್ರಂಟ್‍ನ ಸಂಚಾಲಕ ಮಸೂದ್ ಅಬ್ದುಲ್ ಖಾದರ್ ಕಿಡಿಗಾರಿದರು.

ಥಣಿಸಂದ್ರದಲ್ಲಿ ಬಿಡಿಎ ವತಿಯಿಂದ ಮನೆಗಳನ್ನು ಧ್ವಂಸಗೊಳಿಸಿರುವ ಸ್ಥಳಕ್ಕೆ ಮುಖಂಡರ ನಿಯೋಗದೊಂದಿಗೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ವಿಳಾಸಕ್ಕೆ ವಿದ್ಯುತ್ ಸಂಪರ್ಕ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‍ಗಳನ್ನು ನೀಡಿದ ಸರಕಾರಿ ಅಧಿಕಾರಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದರು.

ಪೂರ್ವ ಸೂಚನೆ ಇಲ್ಲದೆ, ಬುಲ್ಡೋಜರ್‍ಗಳು ಮತ್ತು ಹೆಚ್ಚಿನ ಸಂಖ್ಯೆಯ ಪೊಲೀಸರೊಂದಿಗೆ ಬಂದು ಇದ್ದಕ್ಕಿದ್ದಂತೆ ಮನೆಗಳನ್ನು ಕೆಡವುದು ಮತ್ತು ಅವರಿಗೆ ಮನೆಯಲ್ಲಿನ ವಸ್ತುಗಳನ್ನು ಎತ್ತುಕೊಳ್ಳಲು ಅವಕಾಶ ನೀಡದಿರುವುದು, ಮಕ್ಕಳು, ಮಹಿಳೆಯರು ಮತ್ತು ವೃದ್ಧರನ್ನು ನೋಡಿಕೊಳ್ಳದಿರುವುದು ಕೇವಲ ಧ್ವಂಸ ಕೃತ್ಯವಲ್ಲ, ಅಮಾನವೀಯ ಮತ್ತು ಅಸಹ್ಯಕರ ಕೃತ್ಯ ಎಂದು ಅವರು ಕಿಡಿಗಾರಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಈ ಕ್ರಮವು ಬಿಡಿಎ ಅಧ್ಯಕ್ಷ ಮತ್ತು ಶಾಸಕರ ಅರಿವಿಲ್ಲದೆ ನಡೆಯಲು ಸಾಧ್ಯವಿಲ್ಲ. ಕಳೆದ ವಾರ, ಕೋಗಿಲು ಬಳಿ ನಡೆದ ಧ್ವಂಸ ಕಾರ್ಯಾಚರಣೆಯಲ್ಲಿ ನೂರಾರು ಮಂದಿ ಸಂತ್ರಸ್ತರಾಗಿದ್ದಾರೆ. ಆಡಳಿತ ನಡೆಸುವವರು ಅಲ್ಲಿನ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈವರೆಗೆ ಈಡೆರಿಸಿಲ್ಲ. ಈಗ ಮತ್ತೊಮ್ಮೆ ಬಡವರ ಮೇಲೆ ಗದಾಪ್ರಹಾರ ನಡೆಸಿದ್ದಾರೆ ಎಂದು ಮಸೂದ್ ಅಬ್ದುಲ್ ಖಾದರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಅವರು ಆಗ್ರಹಿಸಿದರು.

ಕರ್ನಾಟಕ ಮುಸ್ಲಿಮ್ ಯುನೈಟೆಡ್ ಫ್ರಂಟ್‍ನ ಜಂಟಿ ಸಂಚಾಲಕ ಮುಹಮ್ಮದ್ ಯೂಸುಫ್ ಕನ್ನಿ ಮಾತನಾಡಿ, ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಮುಸ್ಲಿಮರು, ದಲಿತರು, ದುರ್ಬಲ ವರ್ಗಗಳು ಮತ್ತು ಕಾರ್ಮಿಕರು ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಉತ್ತಮ ಕೆಲಸ ಮಾಡಿದ್ದರು, ಆದರೆ ಇಂದು ಅದೇ ಜನರ ಮೇಲೆ ಒಂದು ರೀತಿಯ ದಬ್ಬಾಳಿಕೆ ಪ್ರಾರಂಭವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಮೀಯತ್ ಉಲಮಾ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೌಲಾನಾ ಹಫೀಝ್ ಮುಹಮ್ಮದ್ ಫಾರೂಕ್, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಲಬೀದ್ ಶಾಫಿ, ಮುಸ್ಲಿಮ್ ಯುನೈಟೆಡ್ ಫ್ರಂಟ್ ಜಂಟಿ ಕಾರ್ಯದರ್ಶಿ ಅಲ್ಲಾಹ್ ಬಕ್ಷ್ ಅದಾವುಲ್ ಆಮ್ರಿ, ಸೋಲಿಡಾರಿಟಿ ಯೂತ್ ಮೂವ್ವೆಂಟ್ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್, ಎಜಾಝ್ ಅಹ್ಮದ್ ನಿಯೋಗದಲ್ಲಿ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X