Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಡಯಾಲಿಸಿಸ್ ರೋಗಿಗಳಿಗೆ...

Bengaluru | ಡಯಾಲಿಸಿಸ್ ರೋಗಿಗಳಿಗೆ ನೆರವಾಗಲು ‘ಸ್ಯಾರಿ ನಡಿಗೆ’ ವಾಕಥಾನ್

ವಾರ್ತಾಭಾರತಿವಾರ್ತಾಭಾರತಿ12 Jan 2026 12:14 AM IST
share
Bengaluru | ಡಯಾಲಿಸಿಸ್ ರೋಗಿಗಳಿಗೆ ನೆರವಾಗಲು ‘ಸ್ಯಾರಿ ನಡಿಗೆ’ ವಾಕಥಾನ್

ಬೆಂಗಳೂರು : ಆರೋಗ್ಯವಾಗಿ ಬದುಕುವವರು ಇಂದಿನ ದಿನಗಳಲ್ಲಿ ಅದೃಷ್ಟವಂತರು ಎಂದು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕೈಗೊಂಡ ‘ಸ್ಯಾರಿ ನಡಿಗೆ’ ನಿಜಕ್ಕೂ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಇಲಾಖೆಯ ಅಧ್ಯಕ್ಷ ಎಸ್.ಇ.ಸುಧೀಂದ್ರ ಹೇಳಿದ್ದಾರೆ.

ರವಿವಾರ ನಗರದ ಕೊಹಿನೂರ್ ಮೈದಾನದಲ್ಲಿ ಮಧುರಾ ಮಹಿಳಾ ಕ್ಲಬ್, ಸುದಯ ಫೌಂಡೇಶನ್ ಮತ್ತು ಗರುಡ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾದ ‘ಸ್ಯಾರಿ ವಾಕಥಾನ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಡಯಾಲಿಸಿಸ್‌ಗೆ ಒಳಗಾಗಿರುವ ರೋಗಿಗಳಿಗೆ ಧನಸಹಾಯ ಮಾಡುವ ನಿಟ್ಟಿನಲ್ಲಿ ನಡೆಸಲಾದ ಈ ವಾಕಥಾನ್ ಸಮಾಜಕ್ಕೆ ಉತ್ತಮ ನಿದರ್ಶನವಾಗಲಿದೆ ಎಂದರು.

ವಾಕಥಾನ್‌ನಲ್ಲಿ ಪಾಲ್ಗೊಂಡಿದ್ದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಮಾತನಾಡಿ, ಪೌರಕಾರ್ಮಿಕರು ಈ ನಡಿಗೆಯಲ್ಲಿ ಪಾಲ್ಗೊಂಡಿರುವುದು ನಿಜಕ್ಕೂ ವಿಶೇಷವಾದ ಘಳಿಗೆ ಎಂದು ಎಲ್ಲರಿಗೂ ಶುಭ ಕೋರಿದರು.

ಬಸವನಗುಡಿ ಕ್ಷೇತ್ರದ ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ಮಾತನಾಡಿ, ಮನೆಯಲ್ಲಿ ಮಹಿಳೆಯೊಬ್ಬರು ಆರೋಗ್ಯವಾಗಿದ್ದರೆ ಕುಟುಂಬವೇ ಆರೋಗ್ಯವಿದ್ದಂತೆ. ಈ ಹಿನ್ನೆಲೆಯಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸೀರೆಯನ್ನು ಉಟ್ಟು ಆರ್ಥಿಕವಾಗಿ ಹಿಂದುಳಿದ ಮತ್ತು ಡಯಾಲಿಸಿಸ್‌ಗೆ ಒಳಗಾಗಿರುವ ರೋಗಿಗಳಿಗೆ ಧನ ಸಂಗ್ರಹ ಮಾಡುವ ಸದುದ್ದೇಶ ನಿಜಕ್ಕೂ ಸಮಾಜಕ್ಕೆ ಸಂದೇಶ ನೀಡುವ ಕೆಲಸ ಎಂದು ಸಂತಸ ವ್ಯಕ್ತಪಡಿಸಿದರು.

ಸ್ಯಾರಿ ವಾಕಥಾನ್‌ನಲ್ಲಿ 200ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದು, ಸೌಂದರ್ಯ, ಒಗ್ಗಟ್ಟು ಮತ್ತು ಮಾನವೀಯತೆಯನ್ನು ಪ್ರದರ್ಶಿಸುವ ಮೂಲಕ ಕಾಲ್ನಡಿಗೆ ಕೈಗೊಂಡು ಡಯಾಲಿಸಿಸ್ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ಪೌರಕಾರ್ಮಿಕರಿಗೆ ಸೀರೆ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್ ಮತ್ತು ಸುದಯ ಫೌಂಡೇಶನ್ ಸಂಸ್ಥಾಪಕರು ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಗರುಡ ಫೌಂಡೇಶನ್ ವ್ಯವಸ್ಥಾಪಕ ನಿರ್ದೇಶಕಿ ಮೇದಿನಿ ಉದಯ್ ಗರುಡಾಚಾರ್, ಕಿರುತೆರೆ ನಟಿಯರಾದ ವೀಣಾರಾವ್, ನಟಿ ಭುವನ ಮುರಳಿ, ಮಧುರಾ ವುಮೆನ್ಸ್ ಕ್ಲಬ್‌ನ ಅಧ್ಯಕ್ಷೆ ಮಂಜುಳಾ ಶಂಕರ್, ಸದಸ್ಯರಾದ ಲಕ್ಷ್ಮೀ ಸಿ.ಪಿ., ಅನ್ಷು ಹೆಗಡೆ, ಮತ್ತಿತರರು ಪಾಲ್ಗೊಂಡಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X