Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ನೀಟ್ ಪ್ರಶ್ನೆ ಪತ್ರಿಕೆ...

Bengaluru | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 May 2026 8:52 PM IST
share
Bengaluru | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಮೇ 12: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ಆತಂಕಕ್ಕೆ ಕೇಂದ್ರ ಸರಕಾರವೇ ನೇರ ಹೊಣೆಯಾಗಿದೆ. ಇದನ್ನು ಮುಚ್ಚಿಹಾಕಲು ಪರೀಕ್ಷೆ ರದ್ದುಮಾಡಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ ಎಚ್.ಎಸ್, ವೈದ್ಯಕೀಯ ಕೋರ್ಸ್‍ಗಳ ಪ್ರವೇಶಕ್ಕಾಗಿ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಪ್ರಶ್ನೆ ಆರಂಭಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಇದು ಕೇಂದ್ರ ಸರಕಾರದ ವೈಫಲ್ಯವಾಗಿದೆ. ಕೇಂದ್ರ ಸರಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಅತ್ಯಂತ ಕಷ್ಟಕರವಾದ ಪರೀಕ್ಷೆಯೆಂದು ವಿದ್ಯಾರ್ಥಿಗಳು ಸಾಕಷ್ಟು ವರ್ಷಗಳಿಂದ ಸಿದ್ಧತೆ ನಡೆಸಿ ಪರೀಕ್ಷೆಗೆ ಹಾಜರಾಗುತ್ತಾರೆ. ಇಂತಹ ಘಟನೆ ಅವರಿಗೆ ಅಘಾತ ಉಂಟು ಮಾಡಿತ್ತು. ಕೇಂದ್ರ ಸರಕಾರ ತನ್ನ ತಪ್ಪುಗಳನ್ನು ಮುಚ್ಚಿಹಾಕಿಕೊಳ್ಳುವ ಉದ್ದೇಶದಿಂದ ನೀಟ್ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ಮಾಡುವುದಾಗಿ ತಿಳಿಸಿದೆ. ಪರೀಕ್ಷೆಯನ್ನು ಶಿಸ್ತುಬದ್ಧವಾಗಿ ನಡೆಸಬೇಕಾಗಿರುವುದು ಕೇಂದ್ರ ಸರಕಾರದ ಕರ್ತವ್ಯ ಎಂದು ತಿಳಿಸಿದರು.

ಈ ರೀತಿ ನಿರ್ಲಕ್ಷತನದಿಂದ ಪರೀಕ್ಷೆ ನಡೆಸಿದರೆ, ವಿದ್ಯಾರ್ಥಿಗಳ ಗತಿ ಏನಾಗಬೇಕು? ಪರೀಕ್ಷೆಯ ವಿಶ್ವಾಸರ್ಹತೆ ಎಲ್ಲಿದೆ?, ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದರೂ, ಕೇಂದ್ರ ಸರಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಕೆಲವು ರಾಜ್ಯಗಳಲ್ಲಿ ನೀಟ್ ಪರೀಕ್ಷೆ ಎದುರಿಸಲು ಸಾಧ್ಯವಾಗದೇ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ? ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟೀಯ ಪ್ರದಾನ ಕಾರ್ಯದರ್ಶಿ ನಿಗಮ್ ಭಂಡಾರಿ, ಪ್ರದಾನ ಕಾರ್ಯದರ್ಶಿ ತಾರಿಕ್ ಭಗವಾನ್ ಮತ್ತಿತರರು ಹಾಜರಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X