Bengaluru | ದಲಿತ ನಾಯಕರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ದಲಿತ ನಾಯಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ರವಿವಾರ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಚಳವಳಿ ನಡೆಸಿದರು.
ಈ ವೇಳೆ ಮಾತನಾಡಿದ ಆರ್ ಪಿಐ ಅಧ್ಯಕ್ಷ ವೆಂಕಟಸ್ವಾಮಿ, ‘ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಲೋಕಭವನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಂದೇ ನಾಯಕರಾದ ಡಾ.ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ. ಮಹದೇವಪ್ಪ, ಕೆ.ಎಚ್.ಮುನಿಯಪ್ಪ ಅವರ ಪೈಕಿ ಯಾರಾದರೊಬ್ಬರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.
ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಡಿ.ಶಿವಶಂಕರ್, ಸುರೇಶ್ ರಾಜ್, ಬಾಲಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
Next Story




