Bengaluru | ಅಕ್ರಮವಾಗಿ ಸಾಗಿಸುತ್ತಿದ್ದ 1.37 ಕೋಟಿ ರೂ.ಮೌಲ್ಯದ ಚಿನ್ನ ವಶ; ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ಪ್ರಯಾಣಿಕನೊಬ್ಬ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1.37 ಕೋಟಿ ರೂ. ಮೌಲ್ಯದ ಚಿನ್ನವನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಯಾಣಿಕನು ನಾಲ್ಕು ಕ್ಯಾಪ್ಸುಲ್ಗಳಲ್ಲಿ 24 ಕ್ಯಾರೆಟ್ನ 899.50 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ತುಂಬಿಕೊಂಡು ವಿಮಾನ ನಿಲ್ದಾಣಕ್ಕೆ ಬಂದಿದ್ದನು. ಆತನ ಅನುಮಾನಾಸ್ಪದ ವರ್ತನೆಯ ಹಿನ್ನೆಲೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ವಿಚಾರ ಬಹಿರಂಗಗೊಂಡಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Next Story




