Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ನಕಲಿ ದಾಖಲೆ ಸೃಷ್ಟಿಸಿ...

Bengaluru | ನಕಲಿ ದಾಖಲೆ ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70 ಲಕ್ಷ ರೂ.ಸಾಲ ಪಡೆದು ವಂಚನೆ ಆರೋಪ : ಮೂವರ ವಿರುದ್ಧ ಎಫ್‍ಐಆರ್

ವಾರ್ತಾಭಾರತಿವಾರ್ತಾಭಾರತಿ14 Jun 2026 12:07 AM IST
share
Bengaluru | ನಕಲಿ ದಾಖಲೆ ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70 ಲಕ್ಷ ರೂ.ಸಾಲ ಪಡೆದು ವಂಚನೆ ಆರೋಪ : ಮೂವರ ವಿರುದ್ಧ ಎಫ್‍ಐಆರ್

ಬೆಂಗಳೂರು : ನಿವೇಶನ ಇರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70ಲಕ್ಷ ರೂ.ಸಾಲ ಪಡೆದು ಕಂತು ಪಾವತಿಸದೆ ವಂಚಿಸಿದ ಆರೋಪದಡಿ ಸಾಲಗಾರ ಹಾಗೂ ಹಿಂದಿನ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಹಿತ ಮೂವರ ವಿರುದ್ಧ ಇಲ್ಲಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಡಿ.ಆರ್. ಎಂಬುವರು ನೀಡಿದ ದೂರಿನನ್ವಯ ಸಾಲ ಪಡೆದಿದ್ದ ಪ್ರಕಾಶ್, ಎಚ್.ರಘು ಎಂ.ಆರ್. ಹಾಗೂ ಅಂದಿನ ಶಾಖಾ ವ್ಯವಸ್ಥಾಪಕ(ಪ್ರಭಾರ) ನಾಗರಾಜು ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಹಕಾರಿ ಬ್ಯಾಂಕ್ ಸದಸ್ಯನಾಗಿದ್ದ ಪ್ರಕಾಶ್, 2023ರಲ್ಲಿ ಒಂದು ಕೋಟಿ ರೂಪಾಯಿ ಸಾಲ ನೀಡುವಂತೆ ಅರ್ಜಿ ಹಾಕಿದ್ದರು. ಈ ಕುರಿತು ಆಡಳಿತ ಮಂಡಳಿಯು ಸಭೆ ನಡೆಸಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಕಾನೂನು ಅಭಿಪ್ರಾಯಕ್ಕೆ ಒಳಪಟ್ಟು ಮಂಜೂರು ಮಾಡಿತ್ತು. ದಾಖಲಾತಿ ಪರಿಶೀಲಿಸಿ ಸಾಲ ಮಂಜೂರು ಮಾಡದಂತೆ ಬ್ಯಾಂಕಿನ ಕಾನೂನು ಸಲಹೆಗಾರ ರಮೇಶ್ ವರದಿ ನೀಡಿದ್ದರು. ಈ ವರದಿಯನ್ನು ನಾಗರಾಜ್ ಅವರು ಆಡಳಿತ ಮಂಡಳಿ ಮುಂದೆ ಪ್ರಸ್ತಾಪಿಸದೆ ಎರಡನೇ ಕಾನೂನು ವರದಿಗಾಗಿ ಮತ್ತೋರ್ವ ಕಾನೂನು ಸಲಹೆಗಾರರನ್ನು ಸಂಪರ್ಕಿಸಿ ಅವರಿಂದ ತಮಗೆ ಪೂರಕ ರೀತಿ ವರದಿ ತರಿಸಿಕೊಂಡಿದ್ದರು ಅಂದು ಆರೋಪಿಸಲಾಗಿದೆ.

ಸಾಲ ನೀಡುವಾಗ ಅರ್ಜಿದಾರರಿಂದ ಅಗತ್ಯ ದಾಖಲಾತಿ ಪಡೆಯದೆ 70 ಲಕ್ಷ ರೂ. ಸಾಲ ಮಂಜೂರು ಮಾಡಿದ್ದರು. ಸಾಲ ಪಡೆದ ಆರೋಪಿಯು ಮಾಸಿಕ ಕಂತು ಸರಿಯಾಗಿ ಕಟ್ಟದಿದ್ದಾಗ ಸಾಲ ಪಡೆಯಲು ಅಡ ಇಟ್ಟಿದ್ದ ನಿವೇಶನ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಲಾಗಿತ್ತು.

ಪರಿಶೀಲನೆ ವೇಳೆ ನಿವೇಶನವು ಅರ್ಜಿದಾರನ ಮಾಲಕತ್ವ ನಿವೇಶನ ಇಲ್ಲದಿರುವುದು ಗೊತ್ತಾಗಿದೆ. ಆರೋಪಿ ಪ್ರಕಾಶ್, ನಿವೇಶನವಿದೆ ಎಂದು ರಮೇಶ್ ಎಂಬುವರಿಂದ ನಕಲಿ ಆರ್‍ಟಿಸಿ ಸೃಷ್ಟಿಸಿದರೆ, ರಘು ಎಂಬಾತನ ಮೂಲಕ ಕ್ರಯಪತ್ರ ತಯಾರಿಸಿಕೊಂಡಿದ್ದರು. ಆರ್.ಆರ್. ನಗರದ ಜಿಬಿಎ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ನಕಲಿ ಬಿಬಿಎಂಪಿ ಖಾತಾ ಮಾಡಿಸಿಕೊಂಡು ನಿವೇಶನ ಕೊಳ್ಳಲು ಬ್ಯಾಂಕಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ. ಜಾಗವೇ ಇಲ್ಲದ ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿಗೆ ವಂಚನೆ ಮಾಡಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಪ್ರಸನ್ನ ಅವರು ಕೋರಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X