Bengaluru | ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಸಾವು

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ್ದ ಕ್ಷಣಾರ್ಧದಲ್ಲೇ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜುನೈದ್ ಎಂಬುವವರು ಮೊಬೈಲ್ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕನೊಬ್ಬ ಆತನ ಕಡೆ ಮೂಟೆಯನ್ನು ಎಸೆದಿದ್ದಾನೆ. ನಿಯಂತ್ರಣ ತಪ್ಪಿ ಬಿದ್ದ ಜುನೈದ್ ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ದಾಖಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ಮತ್ತೋರ್ವ ಆರೋಪಿ ಅರ್ಬಾಜ್ನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಹಲಸೂರು ಗೇಟ್ ಪೊಲೀಸರು ತಿಳಿಸಿದ್ದಾರೆ.
Next Story




