Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಶಿಕ್ಷಣ ಸಚಿವ ಧರ್ಮೇಂದ್ರ...

Bengaluru | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್‍ನಿಂದ ಪಂಜಿನ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ27 Jun 2026 7:45 PM IST
share
Bengaluru | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್‍ನಿಂದ ಪಂಜಿನ ಮೆರವಣಿಗೆ

ಬೆಂಗಳೂರು : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ) ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.

ಶನಿವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು, ಯುವಕರು ಪಂಜನ್ನು ಹಿಡಿದು, ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮ, ವಿದ್ಯಾರ್ಥಿಗಳ ಕುರಿತ ಕೇಂದ್ರ ಸರಕಾರದ ನಿರ್ಲಕ್ಷ್ಯದ ಧೋರಣೆ ಖಂಡಿಸಿ ‘ವಿದ್ಯಾರ್ಥಿಗಳ ಭವಿಷ್ಯ ಉಳಿಸಿ’, ‘ಪಾರದರ್ಶಕ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಿ’, ‘ನೀಟ್ ಅಕ್ರಮ ಕುರಿತು ನ್ಯಾಯಯುತ ತನಿಖೆ ನಡೆಸಿ’, ‘ಶಿಕ್ಷಣಕ್ಕೆ ಚಿಕಿತ್ಸೆ ಕೊಡಿ’ ಎಂಬ ಘೋಷಣೆಗಳನ್ನು ಕೂಗಿ ಗಮನ ಸೆಳೆದರು.

ಎಚ್.ಎಸ್.ಮಂಜುನಾಥ್ ಮಾತನಾಡಿ, ಪಾರದರ್ಶಕ, ಭ್ರಷ್ಟಾಚಾರಮುಕ್ತ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ರೂಪಿಸುವುದು ಕೇಂದ್ರ ಸರಕಾರದ ಜವಾಬ್ದಾರಿ. ಆದರೆ, ಆ ಜವಾಬ್ದಾರಿಯನ್ನು ಮರೆತಿರುವ ಕೇಂದ್ರ ಬಿಜೆಪಿ ನಾಯಕರು 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ. ಅಲ್ಲದೆ, ನೀಟ್ ಅಕ್ರಮದಿಂದ ನೂರಾರು ವಿದ್ಯಾರ್ಥಿಗಳ ಸಾವಿಗೆ ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಸಚಿವ ಧರ್ಮೇಂದ್ರ ಪ್ರಧಾನ್‍ಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿ, ಶಿಕ್ಷಣ ಕ್ಷೇತ್ರದಲ್ಲಿ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಸಂತಾಪವನ್ನೂ ಸೂಚಿಸದ, ಪಾಪಪ್ರಜ್ಞೆ, ಪಶ್ಚಾತ್ತಾಪ ಇಲ್ಲದ ವ್ಯಕ್ತಿಯ ಕಾರ್ಯ ಶ್ಲಾಘಿಸುವ ಇವರುಗಳಿಗೆ ನಾಚಿಕೆಯಿಲ್ಲವೇ? ಎಂದು ಅವರು ಕಿಡಿಕಾರಿದರು.

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೇ ರಾಜಕೀಯ ಲಾಭ ದೊಡ್ಡದಲ್ಲ. ಇದನ್ನು ಮರೆತಿರುವ ಬಿಜೆಪಿ ನಾಯಕರು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಕನಿಷ್ಟ ಸಂತಾಪವನ್ನೂ ಸೂಚಿಸಲು ಮುಂದಾಗುತ್ತಿಲ್ಲ. ಆದರೆ, ಶಿಕ್ಷಣ, ವಿದ್ಯಾರ್ಥಿಗಳು ಹಾಗೂ ಯುವಕರ ಮಹತ್ವ ಅರಿತಿರುವ ರಾಹುಲ್ ಗಾಂಧಿಯವರು ರಾಜಕೀಯೇತರವಾದ ಅಭಿಯಾನದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಿ, ಮೃತ ಆಕಾಂಕ್ಷಿಗಳ ಕುಟುಂಬಕ್ಕೆ ನ್ಯಾಯ ದೊರಕಿಸಲು ಪಣ ತೊಟ್ಟಿದ್ದಾರೆ ಎಂದು ಮಂಜುನಾಥ್ ತಿಳಿಸಿದರು.

ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ತಾರೀಖ್ ಭಾಗವಾನ್, ಶ್ರೀಧರ್, ರಾಹುಲ್ ಗೌಡ, ಮೋನೀಶ್ ರೆಡ್ಡಿ, ರಾಮ್ ನಾಯಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X