Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮುದಾಯವನ್ನು ಸಂಪೂರ್ಣವಾಗಿ...

ಸಮುದಾಯವನ್ನು ಸಂಪೂರ್ಣವಾಗಿ ಶಿಕ್ಷಿತರನ್ನಾಗಿಸಲು ಪಣತೊಡಬೇಕು : ಸೈಯದ್ ಮುಹಮ್ಮದ್ ಬ್ಯಾರಿ

ವಾರ್ತಾಭಾರತಿವಾರ್ತಾಭಾರತಿ28 Jun 2026 7:57 PM IST
share
ಸಮುದಾಯವನ್ನು ಸಂಪೂರ್ಣವಾಗಿ ಶಿಕ್ಷಿತರನ್ನಾಗಿಸಲು ಪಣತೊಡಬೇಕು : ಸೈಯದ್ ಮುಹಮ್ಮದ್ ಬ್ಯಾರಿ
ಬೆಂಗಳೂರು: ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು : ಬ್ಯಾರಿ ಸಮುದಾಯವು ಶೈಕ್ಷಣಿಕವಾಗಿ ಮುಂದಿದೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಇಂದಿಗೂ ಹಲವಾರು ಹಳ್ಳಿಗಳಲ್ಲಿ ಸಮಪರ್ಕ ಶಿಕ್ಷಣ ಸಿಗುತ್ತಿಲ್ಲ. ಆದುದರಿಂದ, ನಾವು ನಮ್ಮ ಸಮಾಜ ಹಾಗೂ ಸಮುದಾಯವನ್ನು ಸಂಪೂರ್ಣವಾಗಿ ಶಿಕ್ಷಿತರನ್ನಾಗಿಸಲು ಪಣತೊಡಬೇಕು ಎಂದು ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಹಾಗೂ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಆಡಳಿತ ಮಂಡಳಿ ಸದಸ್ಯ ಸೈಯದ್ ಮುಹಮ್ಮದ್ ಬ್ಯಾರಿ ಕರೆ ನೀಡಿದರು.

ರವಿವಾರ ನಗರದ ಎಚ್.ಬಿ.ಆರ್.ಬಡಾವಣೆಯಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಲಾಗಿದ್ದ 2026ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಮುದಾಯದ ಹೆಣ್ಣು ಮಕ್ಕಳು ಶೈಕ್ಷಣಿಕ ರಂಗದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು. ಅದೇ ರೀತಿ ಗಂಡು ಮಕ್ಕಳು ಸಹ ಶೈಕ್ಷಣಿಕವಾಗಿ ಮುನ್ನೆಲೆಗೆ ಬರಬೇಕು. ಇಂದು ಸಮಾಜದಲ್ಲಿ ಹುಡುಗರು ಶಿಕ್ಷಣದಿಂದ ವಿಮುಖರಾಗಿ ದುಶ್ಚಟಗಳಿಗೆ ದಾಸರಾಗುತ್ತಿರುವುದು ನಾವು ನೋಡುತ್ತಿದ್ದೇವೆ. ಹೆಣ್ಣು ಮಕ್ಕಳು ಈ ಪಿಡುಗಿಗೆ ಕಡಿವಾಣ ಹಾಕಲು ಪ್ರಯತ್ನಿಸಬೇಕು ಎಂದು ಸೈಯದ್ ಮುಹಮ್ಮದ್ ಬ್ಯಾರಿ ಹೇಳಿದರು.

ನಿಮ್ಮ ಕುಟುಂಬ, ನಿಮ್ಮ ನೆರೆಹೊರೆಯವರು, ಸಂಬಂಧಿಕರಲ್ಲಿರುವ ಎಲ್ಲ ಯುವಕರು ಉನ್ನತ ಶಿಕ್ಷಣ ಪಡೆಯುವಂತೆ ಆಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದಿರುತ್ತಾರೆ. ಆದರೆ, ಅವರನ್ನು ವಿವಾಹವಾಗಲು ಬಯಸುವ ಹುಡುಗ ಶಿಕ್ಷಣದಲ್ಲಿ ಹಿಂದುಳಿದಿರುತ್ತಾನೆ. ಆದುದರಿಂದ, ಈ ಬಗ್ಗೆ ಹೆಣ್ಣು ಮಕ್ಕಳು ಗಮನ ಹರಿಸಬೇಕು ಎಂದು ಅವರು ಕಿವಿ ಮಾತು ಹೇಳಿದರು.

ಶೇ.90-95ರಷ್ಟು ಅಂಕಗಳನ್ನು ಪಡೆದು ಪುರಸ್ಕಾರ ಸ್ವೀಕರಿಸಿದ ಹೆಣ್ಣು ಮಕ್ಕಳು ತಮ್ಮ ನೆರೆ ಹೊರೆಯಲ್ಲಿರುವ ಶೇ.50-60ರಷ್ಟು ಅಂಕಗಳನ್ನು ಪಡೆದಿರುವಂತಹ 10 ಜನರನ್ನು ಗುರುತಿಸಿ ಒಂದು ಗುಂಪು ಮಾಡಿ, ಅವರ ಶೈಕ್ಷಣಿಕ ಪ್ರಗತಿಗೆ ಕೊಡುಗೆ ನೀಡಿದರೆ, ಭವಿಷ್ಯದಲ್ಲಿ ನಿಮ್ಮ ಅಂಕಗಳು ಶೇ.100ರಷ್ಟು ತಲುಪಬಹುದು. ನಿಮ್ಮ ಗುರಿ ಅತ್ಯಂತ ಸ್ಪಷ್ಟ ಹಾಗೂ ನಿಖರವಾಗಿರಬೇಕು ಎಂದು ಅವರು ಕರೆ ನೀಡಿದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X