Bengaluru | 7,500 ರೂ.ಪಿಂಚಣಿ ನೀಡುವಂತೆ ಆಗ್ರಹಿಸಿ ಬಿಎಂಟಿಸಿ-ಕೆಎಸ್ಸಾರ್ಟಿಸಿ ನಿವೃತ್ತ ನೌಕರರಿಂದ ಧರಣಿ

ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ಸಾರಿಗೆ ಸಂಸ್ಥೆಯ ನಿವೃತ್ತ ನೌಕರರಿಗೆ ಕನಿಷ್ಠ 7,500 ರೂ.ಪಿಂಚಣಿ ನೀಡುವಂತೆ ಆಗ್ರಹಿಸಿ ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿಯ ನಿವೃತ್ತ ನೌಕರರ ಸಂಘದ ವತಿಯಿಂದ ನಗರದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದ್ದಾರೆ.
ಕನಿಷ್ಠ ಹೆಚ್ಚುವರಿ ಪಿಂಚಣಿ 7,500 ರೂ. ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ 5 ಸಾವಿರ ರೂ. ನೀಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಮಾತನಾಡಿ, ಮಾಸಿಕ ಪಿಂಚಣಿ 1 ಸಾವಿರ ರೂ.ದಿಂದ 2,500 ರೂ. ಇದೆ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ನ್ಯಾಯುಯುತ ಪಿಂಚಣಿ ನೀಡುವಂತೆ ದಶಕದಿಂದ ಹೋರಾಟ ಮಾಡುತ್ತಿದ್ದರೂ ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Next Story




