Bengaluru | ಬಿಎಂಟಿಸಿ ಬಸ್ ಅಪಘಾತ

ಸಾಂದರ್ಭಿಕ ಚಿತ್ರ
ಬೆಂಗಳೂರು : ಗೊರಗುಂಟೆಪಾಳ್ಯ ಕಡೆಗೆ ಹೋಗುವ ಮಾರ್ಗದಲ್ಲಿರುವ ಲಗ್ಗೆರೆ ಸಮೀಪ ಎರಡು ಬಿಎಂಟಿಸಿ ಬಸ್ಗಳ ನಡುವೆ ಭೀಕರ ಢಿಕ್ಕಿಯಾಗಿದ್ದು, ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬಿಎಂಟಿಸಿ ಬಸ್ ಮುಂದೆ ಚಲಿಸುತ್ತಿದ್ದ ಕಾರು ಚಾಲಕನೊಬ್ಬ ಹಠಾತ್ತನೆ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಚಾಲಕನೂ ತಕ್ಷ ಣವೇ ಬ್ರೇಕ್ ತುಳಿದಿದ್ದಾ ನೆ. ಅದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಬಿಎಂಟಿಸಿ ಇಲೆಕ್ಟ್ರಿಕ್ ಬಸ್, ಮುಂಭಾಗದಲ್ಲಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದರ ಪರಿಣಾಮ ಬಸ್ಸಿನ ಗಾಜು ಪುಡಿಪುಡಿಯಾಗಿದೆ. ಆದರೆ, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Next Story




